ಟಿಕೆಟ್‌ ಸಮಸ್ಯೆ ಪರಿಹರಿಸಿಕೊಳ್ಳಲು ತೆರಳಿದ ಪ್ರಯಾಣಿಕನ ಮೇಲೆ ಹಲ್ಲೆ: ಎಫ್‌ಐಆರ್‌ ದಾಖಲು

Date:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಡಿಪೋ ವ್ಯವಸ್ಥಾಪಕ ಹಾಗೂ ಭದ್ರತಾ ಸಿಬ್ಬಂದಿ ಟಿಕೆಟ್‌ ಸಮಸ್ಯೆ ಪರಿಹರಿಸಿಕೊಳ್ಳಲು ಬಂದ ಪ್ರಯಾಣಿಕನ ಮೇಲೆ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ.

- Advertisement -

ಸದ್ಯ ಪ್ರಯಾಣಿಕ ನೀಡಿದ ದೂರಿನ ಮೇರೆಗೆ ಕೆಎಸ್‌ಆರ್‌ಟಿಸಿ ಟರ್ಮಿನಲ್ 2 ಡಿಪೋ ವ್ಯವಸ್ಥಾಪಕ ಮತ್ತು ಭದ್ರತಾ ಸಿಬ್ಬಂದಿ ಸತೀಶ್‌ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಜಿ. ರಾಘವೇಂದ್ರ ಪ್ರಯಾಣಿಕ. ಇವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮೂಲದ ವ್ಯಾಪಾರಿ. ಡಿಸೆಂಬರ್ 23ರಂದು ರಾತ್ರಿ 12:15ರ ಸುಮಾರಿಗೆ ಬೆಂಗಳೂರಿನಿಂದ ಹಿರಿಯೂರಿಗೆ ಪ್ರಯಾಣ ಬೆಳೆಸಿದ್ದರು. ಕೆಎಸ್‌ಆರ್‌ಟಿಸಿ 1 ನೇ ಟರ್ಮಿನಲ್‌ನಿಂದ ಹರಿಹರದ ಮಾರ್ಗದ ಬಸ್‌ ಹತ್ತಿದ್ದರು.

ಬಸ್‌ ಹತ್ತಿದ ಬಳಿಕ ಹಿರಿಯೂರ್‌ಗೆ ಟಿಕೆಟ್‌ ನೀಡುವಂತೆ ನಿರ್ವಾಹಕರಿಗೆ ಕೇಳಿದ್ದರು. ಆದರೆ, ನಿರ್ವಾಹಕ ಹಿರಿಯೂರ್‌ಗೆ ಬಸ್‌ ತೆರಳುವುದಿಲ್ಲ ಎನ್‌ಎಚ್‌ ಮೂಲಕ ಹಾದು ಹೋಗುತ್ತದೆ. ಬೈಪಾಸ್ ಬಳಿ ನಿಲ್ಲಿಸುವುದಾಗಿ ತಿಳಿಸುತ್ತಾರೆ.

ಇದಕ್ಕೆ ಪ್ರಯಾಣಿಕ ಹಿರಿಯೂರ್ ಬೈಪಾಸ್ ಬಳಿ ಇಳಿದುಕೊಳ್ಳುವೆ ಎಂದು ಹೇಳಿದ್ದಾರೆ. ಇದಕ್ಕೆ ನಿರ್ವಾಹಕ ಚಿತ್ರದುರ್ಗಕ್ಕೆ ಟಿಕೆಟ್‌ ಪಡೆದರೇ, ಬೈಪಾಸ್ ಬಳಿ ನಿಲ್ಲಿಸುವುದಾಗಿ ತಿಳಿಸುತ್ತಾರೆ. ಇದಕ್ಕೆ ಪ್ರಶ್ನಿಸಿದ ಪ್ರಯಾಣಿಕನನ್ನು ನಿರ್ವಾಹಕ ಬಸ್‌ನಿಂದ ಇಳಿಸುತ್ತಾನೆ.

ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಬೇಕೆಂದು ಯೋಚಿಸಿದ ಪ್ರಯಾಣಿಕ ತಕ್ಷಣ ಡಿಪೋ ಮ್ಯಾನೇಜರ್ ಬಳಿ ತೆರಳಿ ಆದ ಘಟನೆ ಬಗ್ಗೆ ಹೇಳಿದ್ದಾರೆ ಮತ್ತು ಟಿಕೆಟ್ ವಿಚಾರವನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಡಿಪೋ ಮ್ಯಾನೇಜರ್ ಕೂಡ ‘ಹರಿಹರ ಅಥವಾ ಚಿತ್ರದುರ್ಗಕ್ಕೆ ಮಾತ್ರ ಟಿಕೆಟ್ ಪಡೆಯಬೇಕು’ ಎಂದು ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕರ್ತವ್ಯ ನಿರತ ಸಂಚಾರ ಪೊಲೀಸ್‌ ಮೇಲೆ ಹಲ್ಲೆ: ಬಂಧನ

ಈತನ ಹೇಳಿಕೆಯನ್ನು ರಾಘವೇಂದ್ರ ಅವರು ಮೊಬೈಲ್‌ನಲ್ಲಿ ಚಿತ್ರೀಕರಿಸಲು ಮುಂದಾದಾಗ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಹಾಗೂ ಮ್ಯಾನೇಜರ್ ಇಬ್ಬರು ಅವರಿಗೆ ಲಾಠಿಯಿಂದ ಹೊಡೆದು ಹಲ್ಲೆ ಮಾಡಿದ್ದಾರೆ. ಅಲ್ಲದೇ, ಮೊಬೈಲ್ ಕಿತ್ತುಕೊಂಡು ಕಾಲಿನಿಂದ ಎದೆಗೆ ಒದ್ದು ಎಳೆದಾಡಿದ್ದಾರೆ. ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪ್ರಯಾಣಿಕ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ರಾಘವೇಂದ್ರ ನೀಡಿರುವ ದೂರಿನ ಅನ್ವಯ ಡಿಪೋ ಮ್ಯಾನೇಜರ್ ಹಾಗೂ ಭದ್ರತಾ ಸಿಬ್ಬಂದಿ ಸತೀಶ್ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...