ದಲಿತ ಕುಟುಂಬದ ಮೇಲೆ ಹಲ್ಲೆ: ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ಕರ್ತವ್ಯ ಲೋಪ ಆರೋಪ

Date:

Advertisements

ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ದಲಿತ ಕುಟುಂಬದ ಮೇಲೆ ನಡೆದ ಗೂಂಡಾಗಿರಿ ಪ್ರಕರಣದಲ್ಲಿ ಬೆಂಗಳೂರು ಆಗ್ನೆಯ ವಿಭಾಗದ ಡಿಸಿಪಿ, ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಎಸಿಪಿ ಹಾಗೂ ಬೇಗೂರು ಠಾಣೆ ಇನ್ಸ್‌ಪೆಕ್ಟರ್ ವಿರುದ್ಧ ಕರ್ತವ್ಯಲೋಪ ಮತ್ತು ಆರೋಪಿಗಳೊಂದಿಗೆ ಶಾಮೀಲಾಗಿರುವ ಗಂಭೀರ ಆರೋಪ ಕೇಳಿಬಂದಿದೆ.

ಈ ಬಗ್ಗೆ ಜನಾಧಿಕಾರ ಸಂಘರ್ಷ ಪರಿಷತ್ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ದೂರು ಸಲ್ಲಿಸಿವೆ.

ಬೇಗೂರಿನ ನಿವಾಸಿ ನಾಗರಾಜು ಮತ್ತು ಅವರ ಕುಟುಂಬಸ್ಕರಿಗೆ ಸೇರಿದ ಜಮೀನಿಗೆ ಮೇ.28ರ ತಡರಾತ್ರಿ ಸುಮಾರು 400ಕ್ಕೂ ಅಧಿಕ ಮಂದಿ ನುಗ್ಗಿ, ಜೆಸಿಬಿಯಿಂದ ಜಮೀನಲ್ಲಿದ್ದ ಕಟ್ಟಡಗಳನ್ನು ಧ್ವಂಸಗೊಳಿಸಿದ್ದಾರೆ.

ಅಲ್ಲದೆ, ನಾಗರಾಜು ಹಾಗೂ ಅವರ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ ಈ ಸಂಬಂಧ ಎಚ್ ಆರ್ ರವಿಚಂದ್ರ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿಯ ಸಿಬ್ಬಂದಿ ನಯೀಮ್‌ ನೂರ್‌ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ‘ಅಚ್ಛೇ ದಿನ’ದಲ್ಲಿ ಸಾಮಾನ್ಯರಿಗೆ ಸಾಲದ ಹೊರೆ

ಆದರೆ, ಈ ಪ್ರಕರಣದ ತನಿಖೆಯನ್ನು ಪೊಲೀಸರು ಸರಿಯಾಗಿ ನಡೆಸುತ್ತಿಲ್ಲ ಎಂದು ದೂರುದಾರರು ಆರೋಪಿಸಿದ್ದಾರೆ. ಜತೆಗೆ, ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಎಸಿಪಿ, ಬೇಗೂರು ಠಾಣೆ ಇನ್ಸ್‌ಪೆಕ್ಟರ್ ಹಾಗೂ ಆಗ್ನೇಯ ವಿಭಾಗದ ಡಿಸಿಪಿಯವರು ಪ್ರಕರಣದ ಆರೋಪಿಗಳೊಂದಿಗೆ ಶಾಮೀಲಾಗಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದೆ.

ಗೃಹ ಸಚಿವ ಜಿ ಪರಮೇಶ್ವರ್‌ ಅವರಿಗೆ ದೂರು ಸಲ್ಲಿಕೆ

ದಲಿತರ ಮೇಲೆ ನಡೆದ ದಬ್ಬಾಳಿಕೆ ಮತ್ತು ದೌರ್ಜನ್ಯ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ವಿಧಾನ ಪರಿಷತ್ ಸದಸ್ಯ ಎಚ್ ಪಿ ಸುಧಾಮ್ ದಾಸ್ ಅವರು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಬೇಗೂರು ಠಾಣೆ ಇನ್ಸ್‌ಪೆಕ್ಟರ್ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಹಾಗೂ ಆಗ್ನೇಯ ವಿಭಾಗದ ಡಿಸಿಪಿ ಮತ್ತು ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಎಸಿಪಿ ಅವರನ್ನು ಪ್ರಕರಣದ ತನಿಖೆ ಮುಗಿಯುವವರೆಗೆ ಬೇರೆಡೆ ವರ್ಗಾಯಿಸಬೇಕು ಎಂದು ಸುಧಾಮ್ ದಾಸ್ ಆಗ್ರಹಿಸಿದ್ದಾರೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವ ಪರಮೇಶ್ವರ್ ಅವರು, ಪೊಲೀಸರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

Download Eedina App Android / iOS

X