ಬೆಂಗಳೂರು | ಕೊಲೆಗೆ ಯತ್ನಿಸಿದ ದುಷ್ಕರ್ಮಿಗಳು; ಶೌಚಾಲಯದಲ್ಲಿ ಅವಿತು ಕುಳಿತ ವೈದ್ಯ

Date:

  • ಬೊಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು
  • ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಖಾಸಗಿ ಆಸ್ಪತ್ರೆಯೊಂದರಲ್ಲಿ ಕುಡಿದ ಮತ್ತಿನಲ್ಲಿದ್ದ ಇಬ್ಬರು ವ್ಯಕ್ತಿಗಳು ವೈದ್ಯರ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹೊಂಗಸಂದ್ರದ ಬೇಗೂರು ಮುಖ್ಯರಸ್ತೆಯಲ್ಲಿರುವ ಸೋನು ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ 29 ವರ್ಷದ ಡಾ.ಜಮಾಲ್ ಹುಸೇನ್ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ.

ಹೊಂಗಸಂದ್ರದ ಮುನಿರೆಡ್ಡಿ ಲೇಔಟ್ ನಿವಾಸಿ ಹುಸೇನ್ ಕಳೆದ ಆರು ತಿಂಗಳಿಂದ ಸೋನು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ಮಧ್ಯಾಹ್ನ 1.50ರಿಂದ 1.55ರ ನಡುವೆ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾಗ ಈ ಘಟನೆ ನಡೆದಿದೆ. ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮದ್ಯದ ಅಮಲಿನಲ್ಲಿದ್ದ ಇಬ್ಬರು ಆರೋಪಿಗಳ ಪೈಕಿ ಓರ್ವ ಆರೋಪಿಯ ತಾಯಿ ವಾಣಿಶ್ರೀ ಎರಡು ದಿನಗಳ ಹಿಂದೆ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆರೋಪಿಯ ತಾಯಿಗೆ ಹುಸೇನ್ ಚಿಕಿತ್ಸೆ ನೀಡಿದ್ದಾರೆ ಎನ್ನಲಾಗಿದೆ. ತನ್ನ ತಾಯಿಯ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣದ ಕಾರಣ ಆರೋಪಿಯು ಹತಾಶೆಗೊಂಡಿದ್ದನು ಎಂದು ತಿಳಿದುಬಂದಿದೆ.

ಆರೋಪಿಯು ವೈದ್ಯರನ್ನು ಕೇಳಿಕೊಂಡು ವಾರ್ಡ್‌ಗೆ ಪ್ರವೇಶಿಸಿದ್ದಾನೆ. ಆರೋಪಿಗಳು ವೈದ್ಯರ ಪ್ರಿಸ್ಕ್ರಿಪ್ಷನ್ ಪ್ರತಿಯನ್ನು ತೋರಿಸುವ ನೆಪದಲ್ಲಿ ಡಾ.ಹುಸೇನ್‌ಗೆ ಥಳಿಸಲು ಪ್ರಾರಂಭಿಸಿದ್ದಾರೆ. ಮತ್ತೊಬ್ಬ ಆರೋಪಿ ಚಾಕು ಹೊರತೆಗೆದು ವೈದ್ಯರ ಮೇಲೆ ಹಲ್ಲೆ ನಡೆಸಲು ಪ್ರಾರಂಭಿಸಿದ್ದಾನೆ. ವೈದ್ಯರು ತಪ್ಪಿಸಿಕೊಳ್ಳಲು ವಾರ್ಡ್‌ನೊಳಗಿನ ಶೌಚಾಲಯದ ಕಡೆಗೆ ಓಡಿ, ಬಾಗಿಲು ಹಾಕಿಕೊಂಡಿದ್ದಾರೆ.

“ಒಳಗೆ ನಡೆಯುತ್ತಿರುವ ಗದ್ದಲ ಕೇಳಿದ ಇತರ ಸಿಬ್ಬಂದಿ ವೈದ್ಯರ ರಕ್ಷಣೆಗೆ ಬಂದಿದ್ದಾರೆ. ಘಟನೆಯ ಬಗ್ಗೆ ವೈದ್ಯರಾಗಲೀ ಅಥವಾ ಆಸ್ಪತ್ರೆಯವರಾಗಲೀ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಮದ್ಯದ ಅಮಲಿನಲ್ಲಿದ್ದರು” ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರ‍್ಯಾಪಿಡೋ ಆಟೋಗಳ ಮೇಲೆ ಸಾರಥಿ ಆಟೋ ಚಾಲಕರ ದಾಳಿ: ದೂರು ದಾಖಲು

“ಹುಸೇನ್ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳಿಬ್ಬರ ವಿರುದ್ಧ ಕೊಲೆ ಯತ್ನ (ಐಪಿಸಿ 307), ಮೆಡಿಕೇರ್ ಸೇವಾ ಸಿಬ್ಬಂದಿ ವಿರುದ್ಧ ಕರ್ನಾಟಕ ನಿಷೇಧ ಮತ್ತು ಮೆಡಿಕೇರ್ ಸೇವಾ ಸಂಸ್ಥೆಗಳಲ್ಲಿನ ಆಸ್ತಿ ಹಾನಿ ಕಾಯ್ದೆ 2009ರ ಪ್ರಕರಣವನ್ನು ದಾಖಲಿಸಲಾಗಿದೆ” ಎಂದರು.

ಬೊಮ್ಮನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪಹರಣ ಪ್ರಕರಣ | ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು​​; ಹಾಸನಕ್ಕೆ ತೆರಳದಂತೆ ಸೂಚನೆ

ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಸಂತ್ರಸ್ತೆಯನ್ನು ಅಪಹರಣ...

ಜೂನ್ 22ರವರೆಗೂ ರಾಜ್ಯದ ಹಲವೆಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ

ಜೂನ್ 22ರವರೆಗೂ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ...

ರಾಹುಲ್‌ ಗಾಂಧಿ ಬಗ್ಗೆ ಅಪಪ್ರಚಾರ: ಬಲಪಂಥೀಯ ಯೂಟ್ಯೂಬರ್ ಅಜಿತ್ ಭಾರ್ತಿ ವಿರುದ್ಧ ಎಫ್ಐಆರ್

ರಾಹುಲ್‌ ಗಾಂಧಿ ಬಗ್ಗೆ ಅಪಪ್ರಚಾರ ಮಾಡಿದ ಬಲಪಂಥೀಯ ಯೂಟ್ಯೂಬರ್ ಅಜಿತ್ ಭಾರ್ತಿ...

ಕಾವೇರಿ ಒಪ್ಪಂದದಲ್ಲಿ ಅನ್ಯಾಯವಾಗಿದೆ, ಕೇಂದ್ರ ಸರ್ಕಾರವೂ ನ್ಯಾಯ ನೀಡುತ್ತಿಲ್ಲ: ನ್ಯಾ. ಗೋಪಾಲಗೌಡ

"ಕಾವೇರಿ ಒಪ್ಪಂದದಲ್ಲಿ ಅನ್ಯಾಯವಾಗಿದೆ, ನ್ಯಾಯ ಮಂಡಳಿ ಸದಸ್ಯರ ಆಯ್ಕೆಯಲ್ಲೂ ಅನ್ಯಾಯವಾಗಿದೆ, ಕೇಂದ್ರ...