ದಯಾಮರಣ ಕೋರಿ ಪೊಲೀಸರಿಗೆ ಪತ್ರ ಬರೆದ ಆಟೋ ಚಾಲಕ

Date:

  • ಪೊಲೀಸರ ಕೃತ್ಯಕ್ಕೆ ಬೇಸತ್ತು ಟ್ವೀಟರ್‌ನಲ್ಲಿ ಪೊಲೀಸ್‌ ಆಯುಕ್ತರಿಗೆ ದಯಾಮರಣ ಕೋರಿ ಪತ್ರ
  • ಅತಿಯಾದ ನೋವಿನಿಂದ ಬಳಲುತ್ತಿರುವ ವ್ಯಕ್ತಿಯ ಇಚ್ಛೆಯ ಅನುಸಾರ ನೀಡುವ ಸಾವು

ಆಟೋ ಚಾಲಕನೊಬ್ಬನ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಸೂಕ್ತವಾಗಿ ತನಿಖೆ ಮಾಡದೆ ದೋಷಾರೋಪಣ ಪಟ್ಟಿ ಸಲ್ಲಿಸಿರುವ ಹಿನ್ನೆಲೆ, ದಯಾಮರಣ ಕೋರಿ ಬೆಂಗಳೂರು ಪೊಲೀಸ್‌ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಆಟೋ ಚಾಲಕ ಹರ್ಷ ಎಂಬುವವರು ಪೊಲೀಸರ ಕೃತ್ಯಕ್ಕೆ ಬೇಸತ್ತು ಟ್ವೀಟರ್‌ನಲ್ಲಿ ಪೊಲೀಸ್‌ ಆಯುಕ್ತರಿಗೆ ದಯಾಮರಣ ಕೋರಿ ಪತ್ರ ಬರೆದಿದ್ದಾನೆ.

ಏನಿದು ಘಟನೆ?

ಕಳೆದ ವರ್ಷ ಬಸವನಗುಡಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಹರ್ಷ ಅವರ ವಿರುದ್ಧ ಅವರ ಪತ್ನಿ ವರದಕ್ಷಿಣೆ ಕಿರುಕುಳದಡಿ ಹರ್ಷ ಹಾಗೂ ಅವರ ತಾಯಿಯ ವಿರುದ್ಧ ದೂರು ದಾಖಲಿಸಿದ್ದರು.

ಆದರೆ, ಮಹಿಳಾ ಠಾಣೆಯ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಿಯಾಗಿ ತನಿಖೆ ಕೈಗೊಂಡಿಲ್ಲ. ಸೂಕ್ತವಾಗಿ ತನಿಖೆ ಮಾಡದೇ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ ಎಂಬ ಬಗ್ಗೆ ಸಾಕ್ಷಿ ಇದೆ. ಬಡ್ಡಿಗೆ ಸಾಲ ಪಡೆದು ಪೊಲೀಸ್‌ ಕಚೇರಿಗೆ ಅಲೆದಾಡುತ್ತಿದ್ದೇನೆ. ನನ್ನ ಮೇಲೆ ನೀಡಿರುವ ದೂರನ್ನು ಮರು ತನಿಖೆ ಮಾಡಲು ಆದೇಶ ನೀಡಿ ಇಲ್ಲದಿದ್ದರೆ, ದಯಾಮರಣ ನೀಡಿ ಎಂದು ಆಟೋ ಚಾಲಕ ಹರ್ಷ ಪೊಲೀಸ್‌ ಆಯುಕ್ತರಿಗೆ ಪತ್ರ ಬರೆದಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಲ್ಕೆರೆ ಕೆರೆಯಲ್ಲಿ ಮೀನುಗಳ ಮಾರಣಹೋಮ

ದಯಾಮರಣ ಎಂದರೇನು?

ಅತಿಯಾದ ನೋವಿನಿಂದ ಬಳಲುತ್ತಿರುವ ವ್ಯಕ್ತಿಯ ಇಚ್ಛೆಯ ಅನುಸಾರ ನೀಡುವ ಸಾವು. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿ ಇನ್ನು ಸಹಿಸಿಕೊಳ್ಳುವುದು ಸಾಧ್ಯವೇ ಇಲ್ಲ ಎನ್ನುವಂತಹ ಸಂದರ್ಭದಲ್ಲಿ ತನಗೆ ಮರಣದ ದಯೆಯನ್ನು ನೀಡಿ ಎಂದು ಅರ್ಜಿ ಸಲ್ಲಿಸುತ್ತಾರೆ. ಕಾನೂನಿನ ಅಡಿಯಲ್ಲಿ ಸಾವನ್ನು ಕರುಣಿಸಲಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂವಿಧಾನ ಬದಲಾಯಿಸಲು ಬಂದವರನ್ನೇ ನಾವು-ನೀವು ಬದಲಾಯಿಸಿದ್ದೀವಿ: ಸಿಎಂ ಸಿದ್ದರಾಮಯ್ಯ

ಮನುಸ್ಮೃತಿಯ ಆರಾಧಕರಾದ ಬಿಜೆಪಿ, ಆರ್ ಎಸ್ ಎಸ್ ನವರು ಸಂವಿಧಾನ ವಿರೋಧಿಗಳು ಟೌನ್‌ಹಾಲ್...

ಬೆಂಗಳೂರು | ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡ ನಿವಾಸಿಗಳು : ಎಫ್‌ಐಆರ್‌ ದಾಖಲು

ಬುಧವಾರ ಬೆಳಗ್ಗೆಯಿಂದ ಜ್ವರ ಹಾಗೂ ವಾಂತಿ–ಭೇದಿಯಿಂದ ಬಳಲಿದ ಮಕ್ಕಳು 140 ಜನರನ್ನು ಮತ್ತೆ...

‘ನಮ್ಮ ಮೆಟ್ರೋ’ ಯೋಜನೆಗಾಗಿ 203 ಮರ ಕಡಿಯಲು ಅನುಮತಿ ನೀಡಿದ ಹೈಕೋರ್ಟ್‌

ನಮ್ಮ ಮೆಟ್ರೋ ಕಾಮಗಾರಿ ವಿಳಂಬವಾದರೆ ಸಾರ್ವಜನಿಕರಿಗೆ ದೊಡ್ಡ ಸಮಸ್ಯೆ ನಮ್ಮ ಮೆಟ್ರೋ ಸಾರ್ವಜನಿಕ...

ಬೆಂಗಳೂರು | ವಾಹನ ಕಳ್ಳರನ್ನು ಬಂಧಿಸಿದ ಪೊಲೀಸರು

10 ದ್ವಿಚಕ್ರ ವಾಹನಗಳೊಂದಿಗೆ ಜೂ. 3ರಂದು ಆರೋಪಿಗಳ ಬಂಧನ ವಾಹನಗಳನ್ನು ಕಡಿಮೆ ಬೆಲೆಗೆ...