ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆ ನಿಷೇಧ

Date:

ರಾಜ್ಯಾದ್ಯಂತ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್‌ ಬಾಟಲಿನ ನೀರಿನ ಬಳಕೆ, ಸರಬರಾಜು ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕದ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮಂಗಳವಾರ ಈ ಕುರಿತು ಸುತ್ತೋಲೆ ಹೊರಡಿಸಿದ್ದು, “ಕರ್ನಾಟಕ ಸರ್ಕಾರದ ವತಿಯಿಂದ ಆಯೋಜಿಸುವ ಅಧಿಕೃತ ಸಭೆ, ಸಮಾರಂಭಗಳಲ್ಲಿ ಮತ್ತು ಸರ್ಕಾರಿ ಕಛೇರಿಗಳಲ್ಲಿ ಏಕಕಾಲಿಕ ಬಳಕೆ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆ ಹಾಗೂ ಸರಬರಾಜು ನಿಷೇಧಿಸಿದೆ. ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ರೀತಿಯಲ್ಲಿ ಗ್ಲಾಸ್‌, ಸ್ಟೀಲ್ (ಪ್ಲಾಸ್ಟಿಕ್ ಅಲ್ಲದ) ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸಬೇಕು” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ತೆಲಂಗಾಣದ ಬಗ್ಗೆ ಮೋದಿ ಅವಹೇಳನ: ರಾಹುಲ್ ಗಾಂಧಿ ಆಕ್ರೋಶ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸೂಕ್ತ ಸಾಮೂಹಿಕ ಕುಡಿಯುವ ನೀರು ವಿತರಣಾ ವ್ಯವಸ್ಥೆಯನ್ನು ಏರ್ಪಡಿಸಬೇಕು ಎಂದು ಸೂಚಿಸಲಾಗಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಸರ್ಕಾರದ ವತಿಯಿಂದ ಅಥವಾ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಸರ್ಕಾರದ ಆದೇಶದ ಸೂಚನೆಯನ್ನು ಪಾಲಿಸುತ್ತಿಲ್ಲ ಎಂಬುದನ್ನು ಗಮನಿಸಲಾಗಿದೆ. ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಪ್ಲಾಸ್ಟಿಕ್‌ ಬಾಟಲಿಗಳಲ್ಲಿ ವಿತರಿಸುತ್ತಿರುವುದು ಸಮರ್ಥನೀಯವಲ್ಲ” ಎಂದು ತಿಳಿಸಿದ್ದಾರೆ.

“ಹಾಗಾಗಿ, ಸರ್ಕಾರದ ಆದೇಶದಲ್ಲಿ ನೀಡಲಾಗಿದ್ದ ಸೂಚನೆಗಳನ್ನು ಇನ್ನುಮುಂದೆ ಎಲ್ಲ ಸಭೆ-ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್‌ ಬಾಟಲ್‌ನಲ್ಲಿ ನೀರಿನ ಬಳಕೆ, ಸರಬರಾಜು ಮಾಡುವುದನ್ನು ನಿಲ್ಲಿಸಬೇಕು. ನಿಗದಿಪಡಿಸಿದಂತೆ ಕುಡಿಯುವ ನೀರಿನ ವಿತರಣಾ ವ್ಯವಸ್ಥೆಯನ್ನು ಕಲ್ಪಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಲಾಲ್‌ಬಾಗ್‌ನಲ್ಲಿ ಮಾವು ಮೇಳ ಆರಂಭ

ರಾಜ್ಯ ಮಾವು ಅಭಿವೃದ್ಧಿ ನಿಗಮದ ವತಿಯಿಂದ ಮೇ 24ರಿಂದ ‘ಮಾವು ಮತ್ತು...

ಬೆಂಗಳೂರಿನ ಜನರಿಗೆ ಕುಡಿಯುವ ನೀರಿನಿಂದ ಆರೋಗ್ಯ ಸಮಸ್ಯೆ ಉಂಟಾದರೆ ಶಿಸ್ತು ಕ್ರಮ: ಡಿ ಕೆ ಶಿವಕುಮಾರ್ ಎಚ್ಚರಿಕೆ

ಬೆಂಗಳೂರಿನ ಜನರಿಗೆ ಉತ್ತಮ ಗುಣಮಟ್ಟದ ಕುಡಿಯುವ ನೀರನ್ನು ಸರಬರಾಜು ಮಾಡಬೇಕು. ಒಂದು...

ಸೌಂದರ್ಯ ಜಗದೀಶ್ ಆತ್ಮಹತ್ಯೆ | ಬಿಸಿನೆಸ್ ಪಾಲುದಾರರ ವಿರುದ್ಧ ಎಫ್‌ಐಆರ್‌ ದಾಖಲು

ಕನ್ನಡ ಚಿತ್ರರಂಗದ ನಿರ್ಮಾಪಕ ಸೌಂದರ್ಯ ಜಗದೀಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಬೆಂಗಳೂರು ಅಭಿವೃದ್ಧಿಗೆ ನಯಾಪೈಸೆ ಬಿಡುಗಡೆ ಮಾಡದ ಸರ್ಕಾರ: ಆರ್.ಅಶೋಕ್

ಬೆಂಗಳೂರು ನಗರದ ಅಭಿವೃದ್ಧಿಗೆ ರಾಜ್ಯದ ಕಾಂಗ್ರೆಸ್ ಸರಕಾರ ಒಂದು ನಯಾಪೈಸೆಯನ್ನೂ ಬಿಡುಗಡೆ...