ಬೆಂಗಳೂರು | ವಿದೇಶಿ ಡ್ರಗ್‍ ಪೆಡ್ಲರ್‌ನಿಂದ ₹12 ಲಕ್ಷ ಜಪ್ತಿ ‌

Date:

ದೇಶದಲ್ಲಿ ಇದೇ ಮೊದಲ ಬಾರಿಗೆ, ಸ್ಮಗ್ಲರ್ಸ್ ಮತ್ತು ಫಾರಿನ್ ಎಕ್ಸ್‌ಚೇಂಜ್ ಮ್ಯಾನಿಪ್ಯುಲೇಟರ್ಸ್ ಆಕ್ಟ್ (ಎಸ್‌ಎಎಫ್‌ಇಎಂಎ) ಮತ್ತು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯಡಿ 38 ವರ್ಷದ ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್ ಒಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

- Advertisement -

ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿ ತಂಡವು ಪ್ರಕರಣವನ್ನು ಭೇದಿಸಿದ್ದು, ರಾಷ್ಟ್ರದಲ್ಲೇ ಪ್ರಪ್ರಥಮ ಬಾರಿಗೆ ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ವಿದೇಶಿ ಡ್ರಗ್ ಪೆಡ್ಲರ್ ಅಕ್ರಮವಾಗಿ ಗಳಿಸಿದ್ದ ₹12 ಲಕ್ಷ ನಗದನ್ನು ಜಪ್ತಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪೆಡ್ಲರ್, ಪೀಟರ್ ಇಕೆಡಿ ಬೆಲನ್ವು ಬಂಧಿತ ವ್ಯಕ್ತಿ. ಈತ ಮೂಲತಃ ನೈಜೀರಿಯಾದ ಪ್ರಜೆ. ಈತನನ್ನು ನವೆಂಬರ್ 2023ರಲ್ಲಿ ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದರು.

ಇಕೆಡಿ ವಿದೇಶಿ ಡ್ರಗ್‌ ಪೆಡ್ಲರ್ ಆಗಿದ್ದನು. ಡ್ರಗ್‌ ಸರಬರಾಜು ಮಾಡುತ್ತಿದ್ದನು. ಆರೋಪಿ 2013ರಲ್ಲಿ ಭಾರತಕ್ಕೆ ವೈದ್ಯಕೀಯ ವೀಸಾ ಅಡಿಯಲ್ಲಿ ಬಂದಿದ್ದಾನೆ. ಇಲ್ಲಿಯೇ ನೆಲೆಸಿ ಮಣಿಪುರದ ಯುವತಿಯೊಬ್ಬರನ್ನು ಮದುವೆಯಾಗಿದ್ದಾನೆ.

ತನ್ನ ಹೆಂಡತಿಯ ಹೆಸರಿನಲ್ಲಿ ಬೆಂಗಳೂರಿನಲ್ಲಿ ಎರಡು ಬ್ಯಾಂಕ್ ಖಾತೆ ಹಾಗೂ ನಕಲಿ ದಾಖಲಾತಿಗಳನ್ನು ನೀಡಿ ಇತರರ ಹೆಸರಿನಲ್ಲಿ ಐದು ಬ್ಯಾಂಕ್ ಖಾತೆಗಳು ಸೇರಿದಂತೆ ಒಟ್ಟು ಏಳು ಬ್ಯಾಂಕ್ ಖಾತೆಗಳನ್ನು ಮಾಡಿಸಿದ್ದಾರೆ. ಈ ಖಾತೆಗಳಿಂದ ಗೂಗಲ್ ಪೇ ಮತ್ತು ಫೋನ್ ಪೇ ಮೂಲಕ ಡ್ರಗ್ ಪೆಡ್ಲಿಂಗ್ ಹಣದ ವಹಿವಾಟನ್ನು ನಿರ್ವಹಿಸುತ್ತಿದ್ದ ಅಂಶಗಳು ತನಿಖೆಯಿಂದ ತಿಳಿದು ಬಂದಿದೆ.

2023ರ ನವೆಂಬರ್‌ನಲ್ಲಿ ಬಂಧಿಸಿದಾಗ ಈತನ ಬಳಿ ನಗದು ಮತ್ತು ನಾಣಾ ಬ್ಯಾಂಕ್‌ಗಳ ಪಾಸ್‌ಬುಕ್, ಡೆಬಿಟ್ ಕಾರ್ಡ್‌ಗಳು ಇರುವ ಬಗ್ಗೆ ಮಾಹಿತಿಯನ್ನು ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಸಂಗ್ರಹಿಸಿದ್ದರು. ಈತನ ಪತ್ನಿಯ ಎರಡು ಬ್ಯಾಂಕ್ ಖಾತೆಗಳಿಂದ ₹2,55,050 ಹಣ ಹಾಗೂ ಇತರೆ ಹೆಸರುಗಳಲ್ಲಿದ್ದ 5 ಬ್ಯಾಂಕ್ ಖಾತೆಗಳಲ್ಲಿದ್ದ 4,90,232 ರೂಪಾಯಿ ಸೇರಿ ಒಟ್ಟು ₹12,60,232 ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ನಂತರ ಚೆನ್ನೈನ ಎನ್.ಡಿ.ಪಿ.ಎಸ್ ಅಧಿಕಾರಿಗಳು ಈ ಮುಟ್ಟುಗೋಲು ಆದೇಶವನ್ನು ಅನುಮೋದಿಸಿದ್ದಾರೆ.

ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ, ಉಪ ಪೊಲೀಸ್ ಆಯುಕ್ತ ಆರ್. ಶ್ರೀನಿವಾಸಗೌಡ ಇವರ ಮಾರ್ಗದರ್ಶನದಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸ್ ಇನ್ಸ್ ಪೆಕ್ಟರ್ ಮೊಹಮ್ಮದ್ ಮುಖಾರಮ್ ಮತ್ತು ಸಿಬ್ಬಂದಿ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 2023ರಲ್ಲಿ ಕೆಐಎ ವಿಮಾನ ನಿಲ್ದಾಣದಿಂದ 37.2 ಮಿಲಿಯನ್ ಪ್ರಯಾಣಿಕರ ಪ್ರಯಾಣ

ಏಳು ಮಂದಿ ಡ್ರಗ್ ಪೆಡ್ಲರ್ ಬಂಧನ

ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಏಳು ಮಂದಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಬಂಧಿತರಿಂದ ಒಟ್ಟು ₹1.66 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಸಿಸಿಬಿ ಪೊಲೀಸರು ಒಂದು ವಾರದಿಂದ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತರಿಂದ 18.5 ಕೆಜಿ ಗಾಂಜಾ, 203 ಗ್ರಾಂ ಎಂಡಿಎಂಎ, 410 ಎಕ್ಸ್ ಟಸಿ ಪಿಲ್ಸ್, 7 ಮೊಬೈಲ್, 2 ದ್ವಿಚಕ್ರ ವಾಹನ, 1 ಕಾರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ.

ಗಿರಿನಗರ, ಮಡಿವಾಳ, ಚಿಕ್ಕಜಾಲ, ಆರ್.ಟಿ.ನಗರ ಬೈಯಪ್ಪನಹಳ್ಳಿ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಬಂಧಿತರ ವಿರುದ್ಧ ಒಟ್ಟು ಐದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...