ಬೆಂಗಳೂರು | ಅಧಿಕಾರಿಗಳ ನಿರ್ಲಕ್ಷಕ್ಕೆ ತಾಯಿ-ಮಗಳು ಬಲಿ; ಕುಟುಂಬಕ್ಕೆ ₹5 ಲಕ್ಷ ಪರಿಹಾರ; ಅಧಿಕಾರಿಗಳ ಅಮಾನತು

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ನಡೆದ ತಾಯಿ-ಮಗಳ ಸಾವಿನ ಘಟನೆ ನಗರದ ಜನರನ್ನು ಬೆಚ್ಚಿಬೀಳಿಸಿದೆ. ಬೆಸ್ಕಾಂ ಅಧಿಕಾರಗಳ ನಿರ್ಲಕ್ಷ್ಯದಿಂದ ತಾಯಿ ಮತ್ತು ಹಸುಗೂಸು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆಗೆ ನಗರದ ಜನ ಕಂಬನಿ ಮಿಡಿದಿದ್ದಾರೆ.

- Advertisement -

ಘಟನೆಯು ಜನರಿಗೆ ಬೆಂಗಳೂರಿನಲ್ಲಿ ಬದುಕುವುದೇ ಕಷ್ಟ ಎನ್ನಿಸುವಂತೆ ಮಾಡಿದೆ. ರಸ್ತೆಯಲ್ಲಿ ನಡೆದರೇ ಅಪಘಾತದ ಭೀತಿ, ರಸ್ತೆಯಲ್ಲಿ ವಾಹನದಲ್ಲಿ ತೆರಳಿದರೆ ಬಲಿಗಾಗಿ ಕಾದಿರುವ ರಸ್ತೆಗುಂಡಿಗಳ ಆತಂಕದಲ್ಲಿ ಜನರು ಬದುಕು ದೂಡುತ್ತಿದ್ದಾರೆ. ಇಂತಹ ಸಮಯದಲ್ಲಿ ಸುರಕ್ಷಿತವಾಗಿ ಓಡಾಡಲಿಕ್ಕೆ ಅಂತ ನಿರ್ಮಾಣ ಮಾಡಿರುವ ಪಾದಚಾರಿ ಮಾರ್ಗಗಳ ಮೇಲೆ ಓಡಾಡಿದರೆ, ಎಲ್ಲೆಂದರೆಲ್ಲಿ ಬಿದ್ದಿರುವ ಕೇಬಲ್ ವೈರ್‌ಗಳು, ವಿದ್ಯುತ್ ತಂತಿಗಳೂ ತಮ್ಮನ್ನು ಜೀವ ಕಿತ್ತುಕೊಳ್ಳುವ ಭೀತಿ ಎದುರಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಭಾನುವಾರ ಬೆಳಗ್ಗೆ ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿ ಪಾದಚಾರಿ ಮಾರ್ಗದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ–ಮಗು ಮೃತಪಟ್ಟಿದ್ದಾರೆ.

ಸೌಂದರ್ಯ ಮತ್ತು ಅವರ 9 ತಿಂಗಳ ಪುತ್ರಿ ಸುವೀಕ್ಷಾ ಮೃತರಾಗಿದ್ದಾರೆ. ತಮಿಳುನಾಡಿನಲ್ಲಿ ನೆಲೆಸಿದ್ದ ಸೌಂದರ್ಯ ಅವರು ತನ್ನ ತಾಯಿಯನ್ನು ನೋಡಲು ತಮ್ಮ ಮತಿ ಮತ್ತು ಮಗುವಿನೊಂದಿಗೆ ಬೆಂಗಳೂರಿಗೆ ಬಂದಿದ್ದರು. ಹೋಪ್‌ ಫಾರ್ಮ್‌ ಜಂಕ್ಷನ್ ಬಳಿಯ ಬಿಎಂಟಿಸಿ ಬಸ್‌ ನಿಲ್ದಾಣದಿಂದ ಪಾದಚಾರಿ ಮಾರ್ಗದ ಮೂಲಕ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ, ಮಾರ್ಗದಲ್ಲಿ ತಂಡಾಗಿ ಬಿದಿದ್ದ ವಿದ್ಯುತ್ ತಂತಿಯ ಮೇಲೆ ಕಾಲಿಟ್ಟಿದ್ದಾರೆ. ಇದರಿಂದ ವಿದ್ಯುತ್ ತಗುಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅವರ ಪತಿ ಪಾದಚಾರಿ ಮಾರ್ಗದ ಕೆಳಗಡೆ ನಡೆದುಕೊಂಡು ಹೋಗುತ್ತಿದ್ದರು. ಅವರು ಪ್ರಾಣಾಪಯದಿಂದ ಪಾರಾಗಿದ್ದಾರೆ.

ಅಧಿಕಾರಿಗಳ ಅಮಾನತು

ಘಟನೆಗೆ ಸಂಬಂಧಿಸಿದಂತೆ, ಕಾರ್ಯನಿರ್ವಾಹಕ ಎಂಜಿನಿಯರ್ ಶ್ರೀರಾಮ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಸುಬ್ರಹ್ಮಣ್ಯ, ಸಹಾಯಕ ಎಂಜಿನಿಯರ್ ಚೇತನ್, ಕಿರಿಯ ಎಂಜಿನಿಯರ್ ರಾಜಣ್ಣ ಹಾಗೂ ಸ್ಟೇಷನ್ ಆಪರೇಟರ್ ಮಂಜುನಾಥ್ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ನಿರ್ಲಕ್ಷ್ಯದ ಆರೋಪದ ಮೇಲೆ ಬೆಸ್ಕಾಂ ಎಇ ಚೇತನ್‌, ಜೆಇ ರಾಜಣ್ಣ, ಸ್ಟೇಷನ್ ಆಪರೇಟರ್ ಮಂಜು ಸೇರಿದಂತೆ ಐವರನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದರು. ಇದೀಗ, ಠಾಣಾ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಆದರೆ, ಪ್ರಕರಣದಲ್ಲಿ ಬೆಸ್ಕಾಂ ಎಇ, ಎಇಇಯನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಇಂಧನ ಸಚಿವ ಕೆ.ಜೆ.ಜಾರ್ಜ್‌, “ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿ ವಿದ್ಯುತ್ ಶಾಕ್‌ಗೆ ಒಬ್ಬ ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿರುವ ದುರ್ದೈವದ ಘಟನೆ ನಡೆದಿದೆ. ಈ ದುರದೃಷ್ಟಕರ ಸಾವುಗಳಿಗೆ ಕಾರಣವಾದ ಘಟನೆಯ ಕುರಿತು ವಿಚಾರಣೆ ಕೈಗೆತ್ತಿಕೊಂಡಿದ್ದೇವೆ” ಎಂದು ಹೇಳಿದ್ದಾರೆ.

“ಇದರ ವರದಿಯನ್ನು ಎದುರು ನೋಡುತ್ತಿದ್ದೇವೆ. ಈ ಅಪಘಾತಕ್ಕೆ ಕಾರಣರಾದ ಎಇ ಮತ್ತು ಎಇಇ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಮತ್ತು ಇದಕ್ಕೆ ಕಾರಣಾದವರು ಮತ್ತಾರೇ ಇದ್ದರೂ ನಿರ್ದಾಕ್ಷಿಣ್ಯಯವಾಗಿ ಕ್ರಮ ಜರುಗಿಸಲಾಗುವುದು. ಈ ದುರ್ಘಟನೆಯಲ್ಲಿ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ ಪರಿಹಾರ ನೀಡಲಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ಲಾಸ್ಟಿಕ್ ಗೋದಾಮಿನಲ್ಲಿ ಅಗ್ನಿ ಅವಘಡ; ಒಂದು ದಿನ ಕಳೆದರೂ ನಿಯಂತ್ರಣಕ್ಕೆ ಬಾರದ ಬೆಂಕಿ

ಇನ್ನೂ ಈ ದುರಂತ ನಡೆದು ಒಂದು ಗಂಟೆ ಕಳೆದರೂ ಯಾವೊಬ್ಬ ಅಧಿಕಾರಿಯೂ ಘಟನಾ ಸ್ಥಳಕ್ಕೆ ಬಂದಿರಲಿಲ್ಲ ಎಂಬ ಆರೋಪ ಬೆಸ್ಕಾಂ ಅಧಿಕಾರಿಗಳ ಮೇಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...