ಮದುವೆಯಾಗವಂತೆ ನಿರಂತರವಾಗಿ ಪೀಡಿಸುತ್ತಿದ್ದ ಸೋದರ ಮಾವನ ಕಿರುಕುಳದಿಂದ ಬೇಸತ್ತು ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಶೆಟ್ಟಿಹಳ್ಳಿ ನಿವಾಸಿ 16 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಾಟ್ಸಾಪ್‌ನಲ್ಲಿ ‘USED’ ಎಂದು ಸ್ಟೇಟಸ್ ಹಾಕಿದ್ದು, ಬಳಿಕ ತನ್ನ ಜೀವನವನ್ನೇ ಅಂತ್ಯಗೊಳಿಸಿಕೊಂಡಿದ್ದಾಳೆ. ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಬಾಲಕಿಯ ತಾಯಿ ರಾಧ ಅವರು ಪೊಲೀಸರಿಗೆ ದೂರು ನೀಡಿದ್ದು, “ತನ್ನನ್ನು ಮದುವೆಯಾಗುವಂತೆ 28 ವರ್ಷದ ಸ್ವಾಗತ್ ಪೀಡುತ್ತಿದ್ದ. ಆತನ ಕಿರುಕುಳದಿಂದಲೇ ತಮ್ಮ ಮಗಳು ಸಾವನ್ನಪ್ಪಿದ್ದಾಳೆ” ಎಂದು ಆರೋಪಿಸಿದ್ದಾರೆ.
ಆಕೆಯ ದೂರಿನ ಆಧಾರದ ಮೇಲೆ, ಬಿಎನ್‌ಎಸ್-2023ರ ಸೆಕ್ಷನ್ 108,115(2) ಹಾಗೂ 351(2) ಅಡಿಯಲ್ಲಿ ಬಾಗಲಗುಂಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ಬಂಧಿಸಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.