ಬೆಂಗಳೂರು | ವರ್ಷಾಂತ್ಯಕ್ಕೆ ರಸ್ತೆಗಿಳಿಯಲಿವೆ 1,900 ಬಿಎಂಟಿಸಿ ಬಸ್‌ಗಳು

Date:

  • 1900 ಬಸ್‌ಗಳ ಪೈಕಿ 921 ಎಲೆಕ್ಟ್ರಿಕ್ ಬಸ್‌
  • ಅಧಿಕೃತ ನೋಂದಣಿ ಬಳಿಕ ಸಾರ್ವಜನಿಕ ಸೇವೆಗೆ ಬಸ್‌

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಈ ವರ್ಷದ ಅಂತ್ಯದ ವೇಳೆಗೆ ಸುಮಾರು 1,900 ಬಸ್‌ಗಳನ್ನು ರಸ್ತೆಗೆ ಇಳಿಸಲು ನಿರ್ಧರಿಸಿದೆ.

- Advertisement -

1900 ಬಸ್‌ಗಳ ಪೈಕಿ 921 ಎಲೆಕ್ಟ್ರಿಕ್ ಬಸ್‌ಗಳಾಗಿವೆ. ಪ್ರತಿ ತಿಂಗಳು 100 ಬಸ್‌ಗಳಂತೆ ಬಿಎಂಟಿಸಿಗೆ ಸೇರ್ಪಡೆಯಾಗಲಿವೆ. ಜುಲೈ ಅಂತ್ಯದ ವೇಳೆಗೆ ನೂರು ಹೊಸ ಬಸ್‌ಗಳು ನಗರದ ರಸ್ತೆಗೆ ಇಳಿಯಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಈಗಾಗಲೇ ಟಾಟಾ ಮೋಟರ್ಸ್‌ ಸಬ್ಸಿಡರಿ ಸಂಸ್ಥೆಯಾದ ಟಿಎಂಎಲ್‌ ಸ್ಮಾರ್ಟ್‌ ಮೊಬಿಲಿಟಿ ಸಲ್ಯೂಷನ್ ಸಂಸ್ಥೆಯು 921 ಬಸ್‌ಗಳನ್ನು ಬಿಎಂಟಿಸಿಗೆ ನೀಡುವ ಗುತ್ತಿಗೆ ತೆಗೆದುಕೊಂಡಿದೆ.

921 ಬಸ್‌ಗಳ ಪೈಕಿ ಈಗಾಗಲೇ 1 ಬಸ್‌ ಬಿಎಂಟಿಸಿ ಬಳಿಯಿದೆ. ಇನ್ನೂ ಅಧಿಕೃತ ನೋಂದಣಿ ಕಾರ್ಯ ಮುಗಿದ ಬಳಿಕ ಈ ಬಸ್‌ಗಳು ಸಾರ್ವಜನಿಕ ಸೇವೆಗೆ ಲಭ್ಯವಾಗಲಿವೆ.

“ಇ-ಬಸ್‌ಗಳನ್ನು ಪ್ರತಿ ಕಿಲೋಮೀಟರ್‌ಗೆ ₹41 ವೆಚ್ಚದಲ್ಲಿ ಖರೀದಿಸಲಾಗಿದೆ. ಕಂಪನಿಯಿಂದ ಚಾಲಕರ ಜೊತೆಗೆ ಬಸ್‌ಗಳನ್ನು ಬಾಡಿಗೆಗೆ ತೆಗೆದುಕೊಳ್ಳುತ್ತಿದೆ. ಚಾಲಕರು ಮತ್ತು ಬಸ್‌ಗಳ ನಿರ್ವಹಣೆ ಗುತ್ತಿಗೆದಾರರ ಜವಾಬ್ದಾರಿಯಾಗಿದೆ. ಬಿಎಂಟಿಸಿ ಮಾರ್ಗಗಳನ್ನು ನೋಡಿಕೊಳ್ಳುತ್ತದೆ ಹಾಗೂ ನಿರ್ವಾಹಕರನ್ನು ಒದಗಿಸುತ್ತದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಿಸಿಬಿ ದಾಳಿ ಬಳಿಕ ಇ-ಸಿಗರೇಟ್ ಮಾರಾಟ ಮಳಿಗೆಗೆ ಸೀಲ್

“ಈ ಬಸ್‌ಗಳು ಪ್ರಯಾಣಿಕರಿಗೆ ಉತ್ತಮ ಅನುಭವ ನೀಡಲಿವೆ. ನೆಲ ಮಟ್ಟದಿಂದ ಸ್ವಲ್ಪ ಮೇಲೆ ಈ ಬಸ್‌ಗಳು ಇರಲಿದ್ದು, ಬಸ್‌ನ ಅಡಿ ದ್ವಿಚಕ್ರ ವಾಹನ ಸವಾರರು ಸೇರಿದಂತೆ ಪಾದಚಾರಿಗಳು ಸಿಲುಕಲು ಸಾಧ್ಯವಿಲ್ಲ. ಅಂಗವಿಕಲರು ಸೇರಿದಂತೆ ಪ್ರಯಾಣಿಕರು ಆರಾಮವಾಗಿ ಬಸ್‌ ಹತ್ತಿ ಇಳಿಯಬಹುದು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

‘ಅಟ್ಟಿಕಾ ಗೋಲ್ಡ್’ ಕಚೇರಿಗಳ ಮೇಲೆ ದಾಳಿ: ನಗದು, ಆಭರಣ ಜಪ್ತಿ

ಕಳ್ಳತನವಾದ ಚಿನ್ನಾಭರಣಗಳನ್ನು ಖರೀದಿಸಿ, ಆ ಮೂಲಕ ಅಕ್ರಮವಾಗಿ ಹಣ ಸಂಪಾದಿಸಿದ ಆರೋಪದ...

ಸೌಜನ್ಯ ಪ್ರಕರಣ ಮರುತನಿಖೆ | SIT ಪುನರ್‌ ರಚಿಸುವಂತೆ ಕೊಂದವರು ಯಾರು? ಆಂದೋಲನ ಒತ್ತಾಯ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ...

ಏಕಪಕ್ಷೀಯ ನಿರ್ಧಾರ; ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಬಿ ಕೆ ಹರಿಪ್ರಸಾದ್ ಆಗ್ರಹ: ನಾಳೆ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಗ್ಯಾನೇಶ್ ಕುಮಾರ್ ಕಳೆದ 10 ತಿಂಗಳಲ್ಲಿ...