ಬೆಂಗಳೂರು | 20 ದಿನದ ಹಸುಗೂಸು ಮಾರಾಟ; ಮತ್ತಿಬ್ಬರ ಬಂಧನ

Date:

20 ದಿನದ ಹಸುಗೂಸನ್ನು ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ರಮ್ಯಾ ಮತ್ತು ಕೆವಿನ್ ಬಂಧಿತರು. ರಾಜಾಜಿನಗರದಲ್ಲಿ ನಕಲಿ ವೈದ್ಯ ಕೆವಿನ್‌ ಹಾಗೂ ಹಸುಗೂಸು ಮಾರಾಟ ದಂಧೆಯ ಮಧ್ಯವರ್ತಿ ರಮ್ಯಳನ್ನು ಸಿಸಿಬಿ ಪೊಲೀಸರು ಹೆಬ್ಬಾಳದಲ್ಲಿ ಬಂಧಿಸಿದ್ದಾರೆ.

ಹಸುಗೂಸು ಮಾರಾಟ ದಂಧೆಯ ಮಧ್ಯವರ್ತಿ ರಮ್ಯಳ ಸಂಬಂಧಿಯೊಬ್ಬಳು ಮದುವೆ ಆಗುವುದಕ್ಕೂ ಮುಂಚೆಯೇ ಗರ್ಭಿಣಿಯಾಗಿದ್ದರು. ಯುವತಿ ಮಗುವನ್ನು ತೆಗೆಸಲು ಓಡಾಡುತ್ತಿರುವುದರ ಬಗ್ಗೆ ತಿಳಿದ ರಮ್ಯ, ಸ್ವತಃ ತಾನೇ ಆ ಯುವತಿಯನ್ನು ಒಂಬತ್ತು ತಿಂಗಳ ಕಾಲ ಆರೈಕೆ ಮಾಡಿದ್ದಾಳೆ. ಬಳಿಕ ಯುವತಿಗೆ ಮದುವೆ ಮಾಡಿಸಿ, ಹಣ ಕೂಡ ನೀಡಿದ್ದಾಳೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನವಜಾತ ಶಿಶುವನ್ನು ತೆಗೆದುಕೊಂಡ ರಮ್ಯ ತನ್ನ ಗ್ಯಾಂಗ್‌ ಜತೆಗೆ ಸೇರಿಕೊಂಡು ಶಿಶುವನ್ನು ಮಾರಾಟ ಮಾಡಲು ಯತ್ನಿಸಿದ್ದಾಳೆ.

ನವಜಾತ ಶಿಶುವಿನ ಮಾರಾಟದ ಬಗ್ಗೆ ಸುಳಿವು ಪಡೆದ ಸಿಸಿಬಿ ಪೊಲೀಸರು ಈ ಸಂಬಂಧ ವಿಶೇಷ ಕಾರ್ಯಾಚರಣೆ ನಡೆಸಿ ತಮಿಳುನಾಡಿನ ಈರೋಡ್‌ ಮೂಲದ ಮುರುಗೇಶ್ವರಿ(22) ಪರಿಚಯಸ್ಥರಾದ ಕಣ್ಣನ್ ರಾಮಸ್ವಾಮಿ(51), ಹೇಮಲತಾ (27), ಶರಣ್ಯಾ (33) ಎಂಬವರನ್ನು ಆರ್‌.ಆರ್‌.ನಗರದ ರಾಜರಾಜೇಶ್ವರಿ ದೇವಸ್ಥಾನದ ಬಳಿ ಬಂಧಿಸಿದ್ದಾರೆ. ಇವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದಾಗ ರಮ್ಯ ಹೆಸರನ್ನು ಬಾಯಿಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ತಮಿಳುನಾಡು ಮತ್ತು ಕರ್ನಾಟಕದಲ್ಲಿ ಸಕ್ರಿಯವಾಗಿದ್ದ ನವಜಾತಶಿಶು ಅಕ್ರಮ‌ ಮಾರಾಟ ಜಾಲವನ್ನು ಸಿಸಿಬಿ ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದ ತಂಡ ಭೇದಿಸಿದೆ. ಇದೀಗ ಈ ಪ್ರಕರಣದಲ್ಲಿ ಒಟ್ಟಾರೆಯಾಗಿ 11 ಆರೋಪಿಗಳನ್ನು ಬಂಧಿಸಲಾಗಿದೆ. ಸದ್ಯ ಈ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದ್ದು ಅನೇಕ ವಿಚಾರಗಳು ಬಯಲಾಗುತ್ತಿವೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಬಂಧಿತರಾಗಿದ್ದ ನಾಲ್ವರು ಆರೋಪಿಗಳನ್ನ ಜೈಲಿಂದ ಕಸ್ಟಡಿಗೆ ಪಡೆದುಕೊಳ್ಳಲು ಸಿಸಿಬಿ ತಯಾರಿ ನಡೆಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 20 ದಿನದ ಹಸುಗೂಸು ಮಾರಾಟ; ಸಿಸಿಬಿ ಪೊಲೀಸರ ಕಾರ್ಯಾಚರಣೆ

ಇನ್ನೊಬ್ಬ ಬಂಧಿತ ಆರೋಪಿ ನಕಲಿ ವೈದ್ಯ ಕೆವಿನ್ ಎಂಬಿಬಿಎಸ್‌ ತೇರ್ಗಡೆಯಾಗದೇ, ಕ್ಲಿನಿಕ್ ನಡೆಸುತ್ತಿದ್ದನು ಎಂದು ತಿಳಿದುಬಂದಿದೆ. ಜತೆಗೆ ಹಸುಗೂಸು ಮಾರಾಟಕ್ಕೆ ಡಾಕ್ಯುಮೆಂಟ್​ ಮಾಡಿಕೊಡುತ್ತಿದ್ದನು ಎಂದು ತಿಳಿದುಬಂದಿದೆ.

ಏನಿದು ಘಟನೆ?

ಮಕ್ಕಳಾಗದ ದಂಪತಿಗೆ ಲಕ್ಷಗಟ್ಟಲೆ ಹಣ ಪಡೆದು 20 ದಿನದ ಗಂಡು ಮಗುವನ್ನು ಮಾರಾಟ ಮಾಡಲು ಆರೋಪಿಗಳು ಕಳೆದ ಶುಕ್ರವಾರ ಬೆಂಗಳೂರಿನ ರಾಜರಾಜೇಶ್ವರಿ ನಗರಕ್ಕೆ ರೆಡ್ ಕಲರ್ ಶಿಫ್ಟ್ ಕಾರಿನಲ್ಲಿ ಬಂದಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ರೆಡ್ ಹ್ಯಾಂಡ್‌ ಆಗಿ ಬಂಧಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ನಕ್ಸಲ್ ಹೋರಾಟಗಾರ್ತಿ ಪೊಲೀಸ್ ವಶಕ್ಕೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸರು ನಕ್ಸಲ್ ಹೋರಾಟದ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಿದ್ದು,...

ಬೆಳಗಾವಿ | ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಇಬ್ಬರ ಬಂಧನ

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಉಗಾರ ರಸ್ತೆಗೆ ಹೊಂದಿಕೊಂಡ...

ಪಾಕ್‌ ಪರ ಘೋಷಣೆ ಆರೋಪ | ಜನಾಕ್ರೋಶಕ್ಕೆ ಮಣಿದ ಸರ್ಕಾರ, ಮೂವರು ಆರೋಪಿಗಳ ಬಂಧನ: ಆರ್‌ ಅಶೋಕ್‌

ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ...

ಬೆಂ.ಗ್ರಾಮಾಂತರ | ಕೃಷಿ ಹೊಂಡಕ್ಕೆ ಜಾರಿ ಬಿದ್ದ ಮಗಳು; ರಕ್ಷಿಸಲು ಹೋದ ಪೋಷಕರೂ ಸಾವು

ಕೃಷಿ ಹೊಂಡದಲ್ಲಿ ಕೈತೊಳೆಯಲು ಹೋಗಿ ಜಾರಿ ಬಿದ್ದ ಮಗಳನ್ನು ರಕ್ಷಿಸಲು ಹೋದ...