ಬೆಂಗಳೂರು | 20 ದಿನದ ಹಸುಗೂಸು ಮಾರಾಟ; ಸಿಸಿಬಿ ಪೊಲೀಸರ ಕಾರ್ಯಾಚರಣೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಹಸುಗೂಸು ಮಾರಾಟ ದಂಧೆ ಮತ್ತೆ ಬೆಳಕಿಗೆ ಬಂದಿದೆ. ಮಕ್ಕಳಿಲ್ಲದವರಿಗೆ ಲಕ್ಷಾಂತರ ರೂಪಾಯಿಗೆ ಮಕ್ಕಳನ್ನು ಮಾರಾಟ ಮಾಡುವುದು. ಈ ಗ್ಯಾಂಗ್‌ನ ಕಸುಬಾಗಿದೆ. ಮಕ್ಕಳಿಲ್ಲದವರಿಗೆ ಮಗುವನ್ನು ನೀಡುವುದಕ್ಕಾಗಿ ಆಸ್ಪತ್ರೆ, ಮನೆ ಹಾಗೂ ಒಬ್ಬಂಟಿ ಮಹಿಳೆಯರು ಇರುವ ಮನೆಗಳಿಂದ ಮಕ್ಕಳನ್ನು ಕಳ್ಳತನ ಮಾಡುವುದು ಜತೆಗೆ ಬಡ ಮಹಿಳೆಯರಿಗೆ ಗರ್ಭಧಾರಣೆ ಮಾಡಿಸಿ ಮಗು ಮಾರಾಟ ಮಾಡುತ್ತಿದ್ದರು. ಇದೀಗ 20 ದಿನದ ಗಂಡು ಹಸುಗೂಸನ್ನು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

- Advertisement -

ಈ ಸಂಬಂಧ ವಿಶೇಷ ಕಾರ್ಯಾಚರಣೆ ನಡೆಸಿದ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ತಮಿಳುನಾಡಿನ ಈರೋಡ್‌ ಮೂಲದ ಮುರುಗೇಶ್ವರಿ(22) ಪರಿಚಯಸ್ಥರಾದ ಕಣ್ಮನ್‌ ರಾಮಸ್ವಾಮಿ(51), ಹೇಮಲತಾ (27), ಶರಣ್ಯಾ (33) ಎಂಬವರನ್ನು ಆರ್‌.ಆರ್‌.ನಗರದ ರಾಜರಾಜೇಶ್ವರಿ ದೇವಸ್ಥಾನದ ಬಳಿ ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಬೆಂಗಳೂರು ನಿವಾಸಿ ಮಹಾಲಕ್ಷ್ಮೀ ಎಂಬಾಕೆಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ತಮಿಳುನಾಡು ಮತ್ತು ಕರ್ನಾಟಕದಲ್ಲಿ ಸಕ್ರಿಯಾವಾಗಿದ್ದ ನವಜಾತಶಿಶು ಅಕ್ರಮ‌ ಮಾರಾಟ ಜಾಲವನ್ನು ಸಿಸಿಬಿ ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದ ತಂಡ ಭೇದಿಸಿದೆ.

ರಾಜರಾಜೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ಹಸುಗೂಸು ಮಾರಾಟ ಮಾಡುವ ತಂಡವನ್ನು ಸಿಸಿಬಿ ಪೊಲೀಸರು ರೆಡ್ ಹ್ಯಾಂಡ್‌ ಆಗಿ ವಶಕ್ಕೆ ಪಡೆದಿದ್ದಾರೆ. ಸುಳಿವು ಆಧರಿಸಿ ಕಾರ್ಯಾಚರಣೆಗೆ ಇಳಿದ ಪೊಲೀಸರು ಆರೋಪಿಗಳನ್ನು ಬಂಧಿಸಿ 20 ದಿನದ ಗಂಡು ಮಗುವನ್ನು ರಕ್ಷಣೆ ಮಾಡಿದ್ದಾರೆ.

ಮಕ್ಕಳಾಗದ ದಂಪತಿಗೆ ಲಕ್ಷಲಕ್ಷಕ್ಕೆ 20 ದಿನದ ಮಗುವನ್ನು ಮಾರಾಟ ಮಾಡಲು ಆರೋಪಿಗಳು ಕಳೆದ ಶುಕ್ರವಾರ ಬೆಂಗಳೂರಿನ ರಾಜರಾಜೇಶ್ವರಿ ನಗರಕ್ಕೆ ರೆಡ್ ಕಲರ್ ಶಿಫ್ಟ್ ಕಾರಿನಲ್ಲಿ ಬಂದಿದ್ದಾರೆ. ಬೆಂಗಳೂರು ಮೂಲದ ಮಹಾಲಕ್ಷ್ಮಿ ಎಂಬುವವರು ಮಗು ಮಾರಾಟ ಮಾಡಲು ಕರೆಸಿದ್ದರು ಎಂದು ಬಂಧಿತ ಆರೋಪಿಗಳು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ.

ಬಂಧಿತ ಆರೋಪಿಗಳು ಇಲ್ಲಿಯವರೆಗೂ ಬರೋಬ್ಬರಿ 60ಕ್ಕೂ ಹೆಚ್ಚು ಶಿಶುಗಳನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾರೆ. ಹೆತ್ತ ತಾಯಿಯೇ ತನ್ನ 20 ದಿನದ ಹಸುಗೂಸು ಮಾರಾಟಕ್ಕೆ ಮುಂದಾಗಿದ್ದರು ಎಂದು ತಿಳಿದುಬಂದಿದೆ. ಮರುಗೇಶ್ವರಿಗೆ ಸೇರಿದ 20 ದಿನದ ಗಂಡು ಮಗುವನ್ನು ರಕ್ಷಿಸಿ, ತಾಯಿ, ಮಗನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇನ್ನು ಪ್ರಕರಣದಲ್ಲಿ ಬಂಧನಕ್ಕೊಳಗಾದ ಮುರುಗೇಶ್ವರಿ ಅವಿವಾಹಿತೆ ಎಂಬುದು ಗೊತ್ತಾಗಿದೆ. ಆದರೂ, ಆಕೆ ಇದು ತನ್ನ ಮಗು ಎಂದು ಹೇಳುತ್ತಿದ್ದಾಳೆ. ಹೀಗಾಗಿ ತಾಯಿ, ಮಗುವನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಖಚಿತ ಪಡಿಸಿಕೊಳ್ಳಲಾಗುತ್ತದೆ

ಈ ಸುದ್ದಿ ಓದಿದ್ದೀರಾ? ‘ಮಂತ್ರ ಮಾಂಗಲ್ಯ’ದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡಲಿರುವ ನಟಿ ಪೂಜಾ ಗಾಂಧಿ

ಘಟನೆ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

“ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ 20 ದಿನದ ಹಸುಗೂಸು ಮಾರಾಟ ಮಾಡುತ್ತಿದ್ದ ಮಾಹಿತಿ ಬಂದ ಕೂಡಲೇ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಿಫ್ಟ್​​ ಕಾರಿನಲ್ಲಿ ಮಗು ಸಾಗಿಸುತ್ತಿದ್ದಾಗ ಸಿಸಿಬಿ ತಂಡ ದಾಳಿ ಮಾಡಿತ್ತು. ಇಪತ್ತು ದಿನದ ಗಂಡು ಮಗುವನ್ನು ರಕ್ಷಣೆ ಮಾಡಲಾಗಿದೆ. ಬಂಧಿತ ಆರೋಪಿಗಳು ತಮಿಳುನಾಡು ಮೂಲದವರು. ಬಡ ಮಹಿಳೆಯರಿಗೆ ಗರ್ಭಧಾರಣೆ ಮಾಡಿಸಿ ಮಗು ಮಾರುತ್ತಿದ್ದರು” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಹೇಳಿದ್ದಾರೆ.

“ಆ ಮಗುವನ್ನು 8 ರಿಂದ 10 ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ತಮಿಳುನಾಡಿನ ಆಸ್ಪತ್ರೆಗಳು, ವೈದ್ಯರು ಮತ್ತು ಬೆಂಗಳೂರಿನ ಓರ್ವ ಮಹಿಳೆ ಮಕ್ಕಳನ್ನು ಮಾರಾಟ ಮಾಡಲು ಸಹಾಯ ಮಾಡುತ್ತಿದ್ದಳು” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...