ಬೆಂಗಳೂರು | 2023ರಲ್ಲಿ ಕೆಐಎ ವಿಮಾನ ನಿಲ್ದಾಣದಿಂದ 37.2 ಮಿಲಿಯನ್ ಪ್ರಯಾಣಿಕರ ಪ್ರಯಾಣ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2023ರ ಜನವರಿ 1 ರಿಂದ ಡಿಸೆಂಬರ್ 31ರವರೆಗೆ ಬರೋಬ್ಬರಿ 37.2 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ, ಈ ಬಾರಿ ಶೇ.35.3ರಷ್ಟು ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.

- Advertisement -

ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಕೆಐಎ, “2023ರ ಏಪ್ರಿಲ್ 29ರಂದು 1,16,688 ಪ್ರಯಾಣಿಕರು ಪ್ರಯಾಣಿಸಿದ್ದು, ಒಂದೇ ದಿನದಲ್ಲಿ ಅತಿ ಹೆಚ್ಚು ಪ್ರಯಾಣಿಕರನ್ನು ದಾಖಲಿಸಿದೆ. ಸರಕು ಸಾಗಣೆಯಲ್ಲೂ ಮುಂದಿರುವ ಬೆಂಗಳೂರು ವಿಮಾನ ನಿಲ್ಲಾಣ 2023 ರಲ್ಲಿ 53,751 ಮೆಟ್ರಿಕ್ ಟನ್‌ನೊಂದಿಗೆ ಸತತ ಮೂರನೇ ವರ್ಷವೂ ಬಿಎಲ್‌ಆರ್ ಕಾರ್ಗೋ ವಿಭಾಗ ಮೊದಲ ಸ್ಥಾನದಲ್ಲಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2023ರಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ. ವಿಮಾನ ನಿಲ್ದಾಣವು ಒಟ್ಟು 37.2 ಮಿಲಿಯನ್ ಪ್ರಯಾಣಿಕರಿಗೆ ಸೇವೆ ಸಲ್ಲಿಸಿದೆ. 2022ಕ್ಕೆ ಹೋಲಿಸಿದರೆ, 35.3% ಹೆಚ್ಚಳವಾಗಿದೆ. ಹೆಚ್ಚುವರಿಯಾಗಿ, ಬಿಎಲ್‌ಆರ್‌ ವಿಮಾನ ನಿಲ್ದಾಣವು ಸತತ ಮೂರನೇ ವರ್ಷ ಭಾರತದಲ್ಲಿ ಹಾಳಾಗುವ ಸರಕುಗಳನ್ನು ನಿರ್ವಹಿಸಲು ವಿಶ್ವಾಸಾರ್ಹ ಕೇಂದ್ರವಾಗಿ ತನ್ನ ಸ್ಥಾನವನ್ನು ಉಳಿಸಿಕೊಳ್ಳುವುದನ್ನು ಮುಂದುವರೆಸಿದೆ. ತಡೆರಹಿತ ಸರಕು ಕಾರ್ಯಾಚರಣೆಗಳಿಗೆ ಬದ್ಧತೆ ತೋರುತ್ತಿದೆ” ಎಂದಿದೆ.

“2023ರಲ್ಲಿ ಬೆಂಗಳೂರು ವಿಮಾನ ನಿಲ್ದಾಣದಿಂದ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಒಟ್ಟು 37.2 ಮಿಲಿಯನ್ ಪ್ರಯಾಣಿಕರ ಪೈಕಿ 32.7 ಮಿಲಿಯನ್ ದೇಶೀಯ ಪ್ರಯಾಣಿಕರು ಮತ್ತು 4.5 ಮಿಲಿಯನ್ ಅಂತಾರಾಷ್ಟ್ರೀಯ ಪ್ರಯಾಣಿಕರು ಪ್ರಯಾಣಿಸಿದ್ದಾರೆ” ಎಂದು ತಿಳಿಸಿದೆ.

ದುಬೈ, ಸಿಂಗಾಪುರ್ ಮತ್ತು ದೋಹಾ ಅಂತಾರಾಷ್ಟ್ರೀಯ ಪ್ರಯಾಣಿಕರು ಆಯ್ಕೆಮಾಡಿದ ಪ್ರಮುಖ ಸ್ಥಳಗಳಾಗಿದ್ದು, ದೆಹಲಿ, ಮುಂಬೈ ಮತ್ತು ಹೈದರಾಬಾದ್ ಪ್ರಮುಖ ದೇಶೀಯ ಮಾರ್ಗಗಳಾಗಿವೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜ.17ರಂದು ಟಿ-20 ಕ್ರಿಕೆಟ್ : ಹೆಚ್ಚುವರಿ ಬಸ್ ಸೇವೆ ಒದಗಿಸಿದ ಬಿಎಂಟಿಸಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೂ 2023ರ ಸೆಪ್ಟೆಂಬರ್‌ನಲ್ಲಿ ಅಂತಾರಾಷ್ಟ್ರೀಯ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ಟ್ರಮಿನಲ್ 1 ರಿಂದ ಟ್ರಮಿನಲ್ 2ಗೆ ಬದಲಾಯಿಸಿತು.

2023ನೇ ಸಾಲಿನಲ್ಲಿ ಕಡಿಮೆಯಾದ ಪ್ರಯಾಣದ ಮಿತಿಗಳು, ಸುಧಾರಿತ ಆರ್ಥಿಕ ಪರಿಸ್ಥಿತಿಗಳು ಮತ್ತು ವ್ಯಾಪಾರ ಪ್ರಯಾಣಕ್ಕಾಗಿ ಹೆಚ್ಚಿದ ಬೇಡಿಕೆಯಿಂದ ಕಳೆದ ಸಾಲಿನಲ್ಲಿ ಪ್ರಯಾಣದ ಸಂಖ್ಯೆ ಏರಿಕೆಗೆ ಕಾರಣವಾಗಿದೆ.

ಮಾರ್ಚ್ 17, 2023 ರಂದು ಅತ್ಯಧಿಕ ಸಂಖ್ಯೆಯ ಏರ್ ಟ್ರಾಫಿಕ್ ಮೂಮೆಂಟ್‌ (ಎಟಿಎಂ) ಕಂಡು ಬಂದಿದ್ದು ಒಂದೇ ದಿನದಲ್ಲಿ ಬರೋಬ್ಬರಿ 748 ಎಟಿಎಂ ನನ್ನು ತಲುಪಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...