ಬೆಂಗಳೂರು | ಗಾಳಿ-ಮಳೆಗೆ ನೆಲಕಚ್ಚಿದ 546 ವಿದ್ಯುತ್ ಕಂಬಗಳು

Date:

  • ಭಾನುವಾರ ಬೆಸ್ಕಾಂಗೆ 22,249 ದೂರು ದಾಖಲು
  • ವಿದ್ಯುತ್ ಕಂಬಗಳ ಮೇಲೆ ಬಿದ್ದಿರುವ ಮರಗಳ ತೆರವು

ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ 546 ವಿದ್ಯುತ್ ಕಂಬಗಳು ನೆಲಕ್ಕೊರಗಿವೆ. 64 ವಿದ್ಯುತ್ ಪರಿವರ್ತಕಗಳು ಹಾಗೂ 9 ಡಬಲ್ ಪೋಲ್ ಸ್ಟ್ರಕ್ಚರ್‌ಗಳು ಹಾನಿಗೊಂಡ ಪರಿಣಾಮ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು ಎಂದು ಬೆಂಗಳೂರು ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ) ಮಾಹಿತಿ ನೀಡಿದೆ.  

- Advertisement -

“ಸತತವಾಗಿ ಸುರಿಯುತ್ತಿರುವ ಬಿರುಗಾಳಿ ಸಹಿತ ಮಳೆಗೆ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ನಗರದೆಲ್ಲೆಡೆ ದುರಸ್ಥಿ ಕಾರ್ಯ ಆರಂಭವಾಗಿದೆ. ವಿದ್ಯುತ್ ಮೂಲಸೌಕರ್ಯಗಳು ಹಾನಿಗೊಂಡಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿರುವ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಗೆ ಕ್ರಮವಹಿಸಲಾಗಿದೆ” ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ವಿದ್ಯುತ್ ಕಂಬಗಳ ಮೇಲೆ ಬಿದ್ದಿರುವ ಮರ ಹಾಗೂ ಕೊಂಬೆಗಳನ್ನು ತೆರವುಗೊಳಿಸಲಾಗಿದ್ದು, ವಿದ್ಯುತ್ ಮರುಸ್ಥಾಪನೆ ಮಾಡಲಾಗಿದೆ. ಮುರಿದಿರುವ ಕಂಬಗಳ ಬದಲಾವಣೆ ಮಾಡಿ, ಶೀಘ್ರ ವಿದ್ಯುತ್ ಪೂರೈಸಲು ಕ್ರಮ ವಹಿಸಲಾಗಿದೆ” ಎಂದರು.

ಮೇ 20ರಂದು ಸುರಿದ ಭಾರೀ ಮಳೆಗೆ ಬೆಂಗಳೂರು ನಗರ ಸೇರಿ ಬೆಸ್ಕಾಂ ವ್ಯಾಪ್ತಿಯ ಹಲವು ಭಾಗಗಳಲ್ಲಿ 142 ಕಂಬಗಳು ಮುರಿದಿವೆ. 20 ಟಿಸಿಗಳು ಹಾನಿಗೊಳಗಾಗಿವೆ. ಮೇ 21ರಂದು ಸುರಿದ ಗಾಳಿ-ಮಳೆಗೆ 404 ಕಂಬಗಳು ಮುರಿದ್ದಿದ್ದು, 44 ಟಿಸಿಗಳು ಹಾಗೂ 9 ಡಬಲ್ ಪೋಲ್ ಸ್ಟ್ರಕ್ಚರ್‌ಗಳು ಹಾನಿಗೊಳಗಾಗಿವೆ.

ವಿದ್ಯುತ್ ವ್ಯತ್ಯಯಗೊಂಡಿರುವ ಪ್ರದೇಶಗಳು

ಬೆಂಗಳೂರು ವ್ಯಾಪ್ತಿಯ ಹೆಬ್ಬಾಳ, ಮಲ್ಲೇಶ್ವರಂ, ಯಲಹಂಕ, ವಿಜಯನಗರ, ನಾಗರಭಾವಿ, ಮಹಾಲಕ್ಷ್ಮಿ ಬಡಾವಣೆ, ಹೆಸರಘಟ್ಟ, ಕೋರಮಂಗಲ, ರಾಜನಕುಂಟೆ, ಜಯನಗರ, ಶಿವಾಜಿನಗರ, ಇಂದಿರಾನಗರ, ಕೆಂಗೇರಿ, ಆರ್.ಆರ್.ನಗರ, ಪೀಣ್ಯ ಸೇರಿದಂತೆ ಮತ್ತಿತ್ತರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಂಚಾರಕ್ಕೆ ಯೋಗ್ಯವಲ್ಲದ ಅಂಡರ್‌ಪಾಸ್‌ ಬಂದ್: ತುಷಾರ್ ಗಿರಿನಾಥ್

ಬೆಸ್ಕಾಂ ಸಹಾಯವಾಣಿಗೆ ದೂರು

ಭಾನುವಾರ ಒಟ್ಟು 44,784 ಕರೆಗಳು ಬೆಸ್ಕಾಂ ಸಹಾಯವಾಣಿ 1912 ಕ್ಕೆ ಬಂದಿದ್ದು, ಈ ಪೈಕಿ 22,249 ದೂರುಗಳನ್ನು ದಾಖಲಿಸಿಕೊಳ್ಳಲಾಗಿದೆ. ಪ್ರತಿ 1 ಗಂಟೆ ಅವಧಿಯಲ್ಲಿ ಸರಾಸರಿ 1691 ಕರೆಗಳು ಬಂದಿದ್ದು, 779 ದೂರುಗಳು ದಾಖಲಾಗಿವೆ ಎಂದು ಬೆಸ್ಕಾಂ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...