ಬೆಂಗಳೂರು | ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ನಲ್ಲಿ ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ಸಾವು

Date:

ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ಮೃತಪಟ್ಟ ಘಟನೆ ಕಾಡುಗೋಡಿ ವರ್ತೂರಿನ ಪ್ರೆಸ್ಟೀಜ್ ಹೆಬಿಟೇಡ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

- Advertisement -

ಮಾನ್ಯ(10) ಮೃತ ಬಾಲಕಿ. ಗುರುವಾರ (ಡಿ.28) ಸಂಜೆ ಸುಮಾರು 7.30ರ ಸುಮಾರಿಗೆ ಈ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬಾಲಕಿ ಮಾನ್ಯ ಗುರುವಾರ ಅಪಾರ್ಟ್‌ಮೆಂಟ್‌ನ ಸ್ವಿಮಿಂಗ್ ಫೂಲ್ ಬಳಿ ಆಟವಾಡುತ್ತಿದ್ದಳು. ಈ ವೇಳೆ, ಫೂಲ್ ಪಕ್ಕದಲ್ಲಿದ್ದ ವಿದ್ಯುತ್ ದೀಪದ ತಂತಿಯನ್ನು ಬಾಲಕಿ ತುಳಿದ ಪರಿಣಾಮ ಶಾಕ್ ಹೊಡೆದಿದೆ. ಬಾಲಕಿ ಪ್ರಜ್ಞೆ ತಪ್ಪಿ ಸ್ವಿಮಿಂಗ್ ಫೂಲ್ ಒಳಗೆ ಬಿದ್ದಿದ್ದಾಳೆ.

ಇದನ್ನು ಕಂಡ ಅಪಾರ್ಟ್‌ಮೆಂಟ್ ನಿವಾಸಿಗಳು ಬಾಲಕಿಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲು ಮಾಡಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೆ ಬಾಲಕಿ ಸಾವನ್ನಪ್ಪಿದ್ದಾರೆ.

ಇನ್ನು ಬಾಲಕಿ ಸಾವಿಗೆ ಅಪಾರ್ಟ್‌ಮೆಂಟ್‌ ನಿರ್ವಹಣಾ ಸಿಬ್ಬಂದಿ ಬೇಜವಾಬ್ದಾರಿ ಕಾರಣ ಎಂದು ಅಪಾರ್ಟ್‌ಮೆಂಟ್ ನಿವಾಸಿಗಳು ಆರೋಪ ಮಾಡಿದ್ದು ರಾತ್ರಿಯಿಡಿ ನಿರ್ವಹಣಾ ಸಿಬ್ಬಂದಿ ವಿರುದ್ಧ 100ಕ್ಕೂ ಹೆಚ್ಚು ಜನರು ಪ್ರತಿಭಟನೆ ನಡೆಸಿದರು.

ವಿದ್ಯುತ್ ಪೂರೈಕೆ, ವಿದ್ಯುತ್ ಕಂಬಗಳ ನಿರ್ವಹಣೆಯನ್ನು ಅಪಾರ್ಟ್‌ಮೆಂಟ್‌ನ ಪಿಪಿಎಮ್‌ಸಿ ವಿಭಾಗ ನೋಡಿಕೊಳ್ಳುತ್ತಿತ್ತು. ಪಿಪಿಎಮ್‌ಸಿ ನಿರ್ಲಕ್ಷ್ಯದಿಂದಲೇ ಮಗು ಸಾವಾಗಿದೆ. ಈ ನಿರ್ಲಕ್ಷ್ಯ ಇದೇ ಮೊದಲಲ್ಲ. ಈ ಹಿಂದೆಯೂ ನಡೆದಿತ್ತು. ಈ ಹಿಂದೆ ಸಹ ನಮಗೆ ವಿದ್ಯುತ್ ಶಾಕ್ ಅನುಭವವಾಗಿದೆ. ಈ ಬಗ್ಗೆ ಹಲವು ಬಾರಿ ದೂರು ನೀಡಿದರು ನಿರ್ವಹಣಾ ಸಿಬ್ಬಂದಿ ಕ್ರಮಕೈಗೊಂಡಿಲ್ಲ. ನಿರ್ವಹಣಾ ಸಿಬ್ಬಂದಿ ಸರಿಯಾದ ರೀತಿ ಕೆಲಸ ಮಾಡುತ್ತಿಲ್ಲ. ಆದ್ದರಿಂದಲೇ, ಈ ಘಟನೆ ಸಂಭವಿಸಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಪ್ರತಿ ವರ್ಷ ‘ಎಫ್‌ಸಿ’ ಕಡ್ಡಾಯ; ಹೈಕೋರ್ಟ್‌ ಸೂಚನೆ

ಪ್ರಕರಣ ಸಂಬಂಧ ಮೃತ ಬಾಲಕಿ ಮಾನ್ಯ ತಂದೆ ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತಿದ್ದಾರೆ.

ಮಗು ಮೃತಪಟ್ಟ ಹಿನ್ನೆಲೆ ಅತ್ತಿಬೆಲೆಯಿಂದ ವರ್ತೂರು ಬರುವ ಮುಖ್ಯರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಈ ವೇಳೆ, ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

ಕಲಬುರಗಿ | ಪಡಿತರ ಅಕ್ಕಿ ವಾಹನ ಬಿಡುಗಡೆ ಆರೋಪ: ಆಳಂದ ಪಿಐ ಸೇರಿ ನಾಲ್ವರು ಅಮಾನತು

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ ಪ್ರಕರಣ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...