ಬೆಂಗಳೂರು | 29ನೇ ಮಹಡಿಯಿಂದ ಜಿಗಿದು12 ವರ್ಷದ ಬಾಲಕಿ ಆತ್ಮಹತ್ಯೆ

Date:

Advertisements

29ನೇ ಮಹಡಿಯಿಂದ ಜಿಗಿದು 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬೇಗೂರುನಲ್ಲಿ ನಡೆದಿದೆ.

ಬೇಗೂರು ರಸ್ತೆಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ಬುಧವಾರ ಬೆಳಗಿನ ಜಾವ ಬೆಳಿಗ್ಗೆ 5 ಗಂಟೆ ಸುಮಾರಿಗೆ ಜೋರು ಶಬ್ದ ಕೇಳಿ ಹಿನ್ನೆಲೆ, ಅಪಾರ್ಟ್‌ಮೆಂಟ್‌ನ ಸೆಕ್ಯೂರಿಟಿ ಗಾರ್ಡ್‌ ಓಡಿ ಬಂದು ನೋಡಿದಾಗ 12 ವರ್ಷದ ಬಾಲಕಿ ರಕ್ತದ ಮಡುವಿನಲ್ಲಿ ಕೆಳಗೆ ಬಿದ್ದು ಓದ್ದಾಡುತ್ತಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ಹುಳಿಮಾವು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮೃತ ಬಾಲಕಿ ಬನ್ನೇರುಘಟ್ಟ ರಸ್ತೆಯ ಖಾಸಗಿ ಶಾಲೆಯಲ್ಲಿ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಮೃತ ಬಾಲಕಿಯ ತಂದೆ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿದ್ದು, ತಾಯಿ ಗೃಹಿಣಿಯಾಗಿದ್ದಾರೆ. ಬೇಗೂರು ರಸ್ತೆಯ ಖಾಸಗಿ ಅಪಾರ್ಟ್‌ಮೆಂಟ್‌ನ 29ನೇ ಮಹಡಿಯ ಫ್ಲ್ಯಾಟ್‌ನಲ್ಲಿ ಬಾಡಿಗೆಗೆ ನೆಲೆಸಿದ್ದಾರೆ. ಈ ದಂಪತಿಗೆ ಒಬ್ಬಳೇ ಮಗಳು ಇದ್ದಳು.

Advertisements

ಮನೆಯಲ್ಲಿ ಪೋಷಕರು ಮಲಗಿದ್ದಾಗ ಮುಂಜಾನೆ 4.30ಕ್ಕೆ ಬಾಲಕಿ ಎದ್ದು ಮನೆಯ ಹಾಲ್‌ಗೆ ಬಂದಿದ್ದಳು. ಅದೇ ಸಮಯಕ್ಕೆ ತಾಯಿ ಎದ್ದು ಬಂದಿದ್ದು, ಇಷ್ಟು ಬೇಗ ಏಕೆ ಎದ್ದೆ ಎಂದು ಕೇಳಿದ್ದಾರೆ. ಅದಕ್ಕೆ ಬಾಲಕಿ ಅಸ್ಪಷ್ಟ ಉತ್ತರ ನೀಡಿ, ಮತ್ತೆ ಮಲಗುವುದಾಗಿ ರೂಮ್‌ಗೆ ತೆರಳಿದ್ದಾಳೆ. ಬಳಿಕ ತಾಯಿ ಅಡುಗೆ ಮನೆ ಕಡೆಗೆ ತೆರಳಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾಜಿ ಪ್ರಿಯಕರನನ್ನು ವಶೀಕರಣ ಮಾಡಿಕೊಳ್ಳಲು ₹8.2 ಲಕ್ಷ ಕಳೆದುಕೊಂಡ ಯುವತಿ

ಬಳಿಕ 5 ಗಂಟೆ ಸುಮಾರಿಗೆ ಬಾಲಕಿ 29ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕಿ ಮೇಲಿನಿಂದ ಕೆಳಗೆ ಬೀಳುತ್ತಿದ್ದಂತೆ ಜೋರಾದ ಶಬ್ದ ಕೇಳಿ ಬಂದಿದೆ. ಅಪಾರ್ಟ್‌ಮೆಂಟ್‌ ಸೆಕ್ಯೂರಿಟಿ ಬಂದು ನೋಡಿದಾಗ ಬಾಲಕಿಯ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಬಳಿಕ ಆತ ಕೂಡಲೇ, ಬಾಲಕಿಯ ಪೋಷಕರಿಗೆ ಮತ್ತು ಅಪಾರ್ಟ್‌ಮೆಂಟ್‌ ಅಸೋಸಿಯೇಷನ್​ಗೆ ಮಾಹಿತಿ ನೀಡಿದ್ದಾರೆ.

ಬಾಲಕಿಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸದ್ಯ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X