ಬೆಂಗಳೂರು | ದೂರಮಾಡುತ್ತಿದ್ದ ಪ್ರಿಯಕರನಿಗೆ ಚಾಕುವಿನಿಂದ ಇರಿದ 38 ವರ್ಷದ ಮಹಿಳೆ : ಬಂಧನ

Date:

ತನ್ನನ್ನು ದೂರಮಾಡುತ್ತಿದ್ದ ಪ್ರಿಯಕರನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ 38 ವರ್ಷದ ಮಹಿಳೆಯನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಮಹಿಳೆಯನ್ನು ಜುಂಟಿ ದಾಸ್ ಎಂದು ಗುರುತಿಸಲಾಗಿದ್ದು, ಸಂತ್ರಸ್ತ ಜೋಗೇಶ್ ಪೆಗು (35) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇಬ್ಬರೂ ಅಸ್ಸಾಂ ಮೂಲದವರು ಎಂದು ತಿಳಿದುಬಂದಿದೆ.

ಜುಂಟಿ ಎಂಬ ಮಹಿಳೆ ತನ್ನ ಪತಿಯನ್ನು ತೊರೆದು 17 ವರ್ಷದ ಮಗಳೊಂದಿಗೆ ವಾಸಿಸುತ್ತಿದ್ದಳು. ಡೇ ಕೇರ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಕಳೆದ ಎರಡು ವರ್ಷಗಳ ಹಿಂದೆ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಜೋಗೇಶ್ ಎಂಬಾತನ ಸಂಪರ್ಕಕ್ಕೆ ಜುಂಟಿ ಬಂದಿದ್ದು, ಅವರಿಬ್ಬರ ನಡುವೆ ಸಂಬಂಧವಿತ್ತು. ಆದರೂ, ಜೋಗೇಶ್ ಜುಂಟಿಯನ್ನು ದೂರ ಮಾಡುತ್ತಿದ್ದರು. ಜುಂಟಿಯ ಕರೆಗಳಿಗೆ ಉತ್ತರಿಸುತ್ತಿರಲಿಲ್ಲ ಎಂದು ವರದಿಯಾಗಿದೆ. ಜೋಗೇಶ್ ಜುಂಟಿಯಿಂದ ಸ್ವಲ್ಪ ಹಣವನ್ನೂ ಪಡೆದಿದ್ದ ಎನ್ನಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಜುಲೈ 21 ರಂದು ಜುಂಟಿ ಈಜಿಪುರದಲ್ಲಿರುವ ಜೋಗೇಶ್ ಅವರ ಮನೆಗೆ ತೆರಳಿದ್ದಳು. ಈ ವೇಳೆ, ಇಬ್ಬರೂ ಜಗಳವಾಡಿದ್ದರು. ನಂತರ ಅವಳು ಜೋಗೇಶ್ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಳು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಜೋಗೇಶ್‌ನನ್ನು ಆತನ ಸ್ನೇಹಿತ ಕಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ. ಜೋಗೇಶ್ ಬೇರೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ಆಕೆಯಿಂದ ಸಾಲವಾಗಿ ಪಡೆದಿದ್ದ ಹಣವನ್ನು ಹಿಂದಿರುಗಿಸದ ಕಾರಣ ಆಕೆಯನ್ನು ದೂರ ಮಾಡುತ್ತಿದ್ದನು” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಫ್ಲೋರ್‌ ಕ್ಲೀನರ್‌ ಕುಡಿದು ಅನ್ನನಾಳ ಕಳೆದುಕೊಂಡಿದ್ದ 6 ವರ್ಷದ ಮಗು; ಯಶಸ್ವಿ ಮರುನಿರ್ಮಾಣ

ಸದ್ಯ ಆರೋಪಿಯನ್ನು ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ. ಆರೋಪಿ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಕ್ಕಳ ಪಾಲನೆ ಪೂರ್ಣಾವಧಿ ಕೆಲಸ’ – ಪತ್ನಿಗೆ ಪತಿ ಹಣ ನೀಡಬೇಕು: ಹೈಕೋರ್ಟ್‌ ಆದೇಶ

ತನ್ನ ಮಕ್ಕಳನ್ನು ಪಾಲನೆ ಮಾಡುವುದಕ್ಕಾಗಿ ಪತ್ನಿಗೆ ಉಪನ್ಯಾಸಕಿ ಹುದ್ದೆ ತೊರೆಯುವಂತೆ ಮಾಡಿದ್ದ...

ಬಿಎಸ್‌ವೈ ಭೇಟಿಯಾದ ಸೋಮಣ್ಣ- ಚರ್ಚೆಗೆ ಗ್ರಾಸ

ವರುಣ ಮತ್ತು ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ...

ಬಿಬಿಎಂಪಿ | ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಾಲೀಕರ ಹೆಸರು ಪ್ರಕಟ

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಸುಸ್ತಿದಾರರ ಪಟ್ಟಿಯನ್ನು ಬೃಹತ್ ಬೆಂಗಳೂರು ಮಹಾನಗರ...

ಅನ್ನ, ಆರೋಗ್ಯ, ಆಶ್ರಯ, ಅಕ್ಷರವೇ ನಮ್ಮ ಸರ್ಕಾರದ ಮೂಲಮಂತ್ರ: ಸಿಎಂ ಸಿದ್ಧರಾಮಯ್ಯ

“ಅನ್ನ, ಆರೋಗ್ಯ, ಆಶ್ರಯ, ಅಕ್ಷರ ಇದೇ ನಮ್ಮ ಸರ್ಕಾರದ ಮೂಲಮಂತ್ರವಾಗಿದ್ದು, ಬಡವರ...