ಬೆಂಗಳೂರು | ಬಿಎಂಟಿಸಿ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು ಸುಟ್ಟು ಕರಕಲು

Date:

ಯಶವಂತಪುರ-ನಾಯಂಡಹಳ್ಳಿಗೆ ತೆರಳುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗೆ ಕಾರ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಅಗ್ನಿ ಅವಘಡ ಸಂಭವಿಸಿದೆ.

ಈ ಘಟನೆ ಬೆಂಗಳೂರಿನ ನಾಗರಭಾವಿ ಹೊರವರ್ತುಲ ರಸ್ತೆಯ ಚಂದ್ರಾಲೇಔಟ್ ಬಸ್ ನಿಲ್ದಾಣದ ಬಳಿ ನಡೆದಿದೆ. ಸೋಮವಾರ ಬೆಳಗ್ಗೆ 9 ಗಂಟೆಗೆ ಈ ಘಟನೆ ನಡೆದಿದೆ.

ಬಿಎಂಟಿಸಿ ಬಸ್‌ ಯಶವಂತಪುರದಿಂದ ನಾಯಂಡಹಳ್ಳಿಗೆ ತೆರಳುತ್ತಿತ್ತು. ಮಾರ್ಗ ಮಧ್ಯೆ ನಾಗರಭಾವಿಯ ಹೊರವರ್ತುಲ ರಸ್ತೆಯ ಚಂದ್ರಾಲೇಔಟ್‌ ಬಸ್‌ ನಿಲ್ದಾಣದ ಬಳಿ ಪ್ರಯಾಣಿಕರನ್ನು ಇಳಿಸಲು ಮತ್ತು ಹತ್ತಿಸಲು ಸಿಬ್ಬಂದಿ ಬಸ್‌ ನಿಲ್ಲಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಪೆಟ್ರೋಲ್‌ ಕಾರ್ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಉಂಟಾದ ಘರ್ಷಣೆಗೆ ಬೆಂಕಿ ಹತ್ತಿಕೊಂಡಿದ್ದು, ಕಾರು ಸಂಪೂರ್ಣವಾಗಿ ಅಗ್ನಿಗಾಹುತಿಯಾಯಿತು. ಕಾರಿನಿಂದ ಬಸ್‌ನ ಹಿಂಭಾಗ ಬೆಂಕಿ ಹೊತ್ತಿಕೊಳ್ಳಲು ಪ್ರಾರಂಭವಾಗಿತ್ತು. ಈ ವೇಳೆ, ಸಿಬ್ಬಂದಿ ಬಸ್‌ ಮತ್ತು ಕಾರ್‌ ಅನ್ನು ಬೇರ್ಪಡಿಸಲು ಪ್ರಯತ್ನಿಸಿದರು. ಬಳಿಕ ಸಾರ್ವಜನಿಕರು ಸಿಬ್ಬಂದಿ ಸೇರಿ ಬಸ್‌ಗೆ ತಗುಲಿದ ಬೆಂಕಿಯನ್ನು ನೀರು ಮತ್ತು ಅಗ್ನಿನಂದಕ ಬಳಸಿ ನಂದಿಸಿದರು. ಬಸ್ಸಿನ ಹಿಂಬದಿ ಆಸನಗಳು ಸುಟ್ಟು ಕರಕಲಾಗಿವೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಭ್ರೂಣಲಿಂಗ ಹತ್ಯೆ ಪ್ರಕರಣ: ಮತ್ತೋರ್ವ ನರ್ಸ್​​ ಬಂಧನ

ಈ ವೇಳೆ, ಪ್ರಯಾಣಿಕರಿಗೆ ಮತ್ತು ಸಿಬ್ಬಂದಿಗೆ ಯಾವುದೇ ತೊಂದರೆಯಾಗಿಲ್ಲ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಕಾರು ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

“ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ನಮ್ಮ ಸಂಸ್ಥೆಯ ಚಾಲಕ ಕಾರ್ ಡ್ರೈವರ್ ಮತ್ತು ಅವರ ಕುಟುಂಬವನ್ನು ಕಾರಿನಿಂದ ಹೊರಗೆ ಕರೆತರಲು ಸಹಾಯ ಮಾಡಿದರು. ಬಸ್‌ನಲ್ಲಿದ್ದ ಸುಮಾರು 30 ಪ್ರಯಾಣಿಕರನ್ನು ಬಸ್‌ನಿಂದ ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ನಂತರ ಕಾರಿನಲ್ಲಿ ಮತ್ತು ಬಸ್‌ನ ಹಿಂಬದಿಯಲ್ಲಿ ಬೆಂಕಿ ಹೊತ್ತಿಕೊಂಡಂತೆ, ನಮ್ಮ ಚಾಲಕ ಬಸ್‌ ಮತ್ತು ಕಾರ್‌ ಅನ್ನು ಬೇರ್ಪಡಿಸಲು ಪ್ರಯತ್ನಿಸಿದ್ದಾರೆ. ಚಾಲಕ ಮತ್ತು ನಿರ್ವಾಹಕರ ಸಮಯೋಚಿತ ಕಾರ್ಯವು ಹಲವರ ಜೀವವನ್ನು ಉಳಿಸಿದೆ” ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ ಜಿ. ಶ್ಲಾಘಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ನಕ್ಸಲ್ ಹೋರಾಟಗಾರ್ತಿ ಪೊಲೀಸ್ ವಶಕ್ಕೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸರು ನಕ್ಸಲ್ ಹೋರಾಟದ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಿದ್ದು,...

ಬೆಳಗಾವಿ | ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಇಬ್ಬರ ಬಂಧನ

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಉಗಾರ ರಸ್ತೆಗೆ ಹೊಂದಿಕೊಂಡ...

ಪಾಕ್‌ ಪರ ಘೋಷಣೆ ಆರೋಪ | ಜನಾಕ್ರೋಶಕ್ಕೆ ಮಣಿದ ಸರ್ಕಾರ, ಮೂವರು ಆರೋಪಿಗಳ ಬಂಧನ: ಆರ್‌ ಅಶೋಕ್‌

ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ...

ಬೆಂ.ಗ್ರಾಮಾಂತರ | ಕೃಷಿ ಹೊಂಡಕ್ಕೆ ಜಾರಿ ಬಿದ್ದ ಮಗಳು; ರಕ್ಷಿಸಲು ಹೋದ ಪೋಷಕರೂ ಸಾವು

ಕೃಷಿ ಹೊಂಡದಲ್ಲಿ ಕೈತೊಳೆಯಲು ಹೋಗಿ ಜಾರಿ ಬಿದ್ದ ಮಗಳನ್ನು ರಕ್ಷಿಸಲು ಹೋದ...