ಬೆಂಗಳೂರು | ಚಲಿಸುವಾಗ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು: ಚಾಲಕ ಸಜೀವ ದಹನ

Date:

Advertisements

ಚಲಿಸುತ್ತಿದ್ದ ಕಾರು ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣ ಮಾತ್ರದಲ್ಲಿ ಇಡೀ ವಾಹನ ಹೊತ್ತಿ ಉರಿದು ಸುಟ್ಟು ಕರಕಲಾಗಿದ್ದು, ಕಾರು ಚಾಲಕ ಸಜೀವ ದಹನಗೊಂಡಿರುವ ದಾರುಣ ಘಟನೆ ಬೆಂಗಳೂರು ಉತ್ತರ ತಾಲ್ಲೂಕು ಅಂಚೆಪಾಳ್ಯದ ಹತ್ತಿರ ನೆಲಮಂಗಲದ ಟೋಲ್ ಬಳಿಯ ಪಾರ್ಲೆ ಜಿ ಬಿಸ್ಕೆಟ್ ಫ್ಯಾಕ್ಟರಿ ಬಳಿ ಹೆದ್ದಾರಿಯಲ್ಲಿ ಸಂಭವಿಸಿದೆ.

ಮಾರುತಿ ಎರ್ಟಿಗಾ ಸಿಎನ್‌ಜಿ (CNG) ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ಡಿ. 26 ರಂದು ನಡೆದಿದೆ.

ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ, ಕಾರಿನಲ್ಲಿದ್ದ ಓರ್ವ ವ್ಯಕ್ತಿ ಹೊರಗಡೆ ಬರಲು ಸಾಧ್ಯವಾಗದೇ ಕೂತಲ್ಲೇ ಸಜೀವ ದಹನವಾಗಿದ್ದಾರೆ.

Advertisements

ಸ್ಥಳಕ್ಕೆ ಅಗ್ನಿಶಾಮಕ ದಳ ಬರುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ದೌಡಾಯಿಸಿದ್ದು, ನೆಲಮಂಗಲ ಸಂಚಾರ ಪೊಲೀಸ್ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಹೊಸ ವರ್ಷಾಚರಣೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಘಟನೆಯಿಂದಾಗಿ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋ ಮೀಟರ್ಗಟ್ಟಲೇ ಟ್ರಾಫಿಕ್ಜಾಮ್​​ ಉಂಟಾಗಿತ್ತು.

ಹೈಬ್ರಿಡ್/ಪೆಟ್ರೋಲ್ ಎಕ್ಸ್ಎಲ್ 6 ಕಾರು ಅನಿಲ್ ಕುಮಾರ್ ಟಿ ಅವರಿಗೆ ಸೇರಿದ್ದು, ಬೆಂಗಳೂರು ಉತ್ತರ ಆರ್ಟಿಒ ಕಚೇರಿಯಲ್ಲಿ ನೋಂದಣಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X