ಬೆಂಗಳೂರು | ಚಲಿಸುವಾಗ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು: ಚಾಲಕ ಸಜೀವ ದಹನ

Date:

ಚಲಿಸುತ್ತಿದ್ದ ಕಾರು ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣ ಮಾತ್ರದಲ್ಲಿ ಇಡೀ ವಾಹನ ಹೊತ್ತಿ ಉರಿದು ಸುಟ್ಟು ಕರಕಲಾಗಿದ್ದು, ಕಾರು ಚಾಲಕ ಸಜೀವ ದಹನಗೊಂಡಿರುವ ದಾರುಣ ಘಟನೆ ಬೆಂಗಳೂರು ಉತ್ತರ ತಾಲ್ಲೂಕು ಅಂಚೆಪಾಳ್ಯದ ಹತ್ತಿರ ನೆಲಮಂಗಲದ ಟೋಲ್ ಬಳಿಯ ಪಾರ್ಲೆ ಜಿ ಬಿಸ್ಕೆಟ್ ಫ್ಯಾಕ್ಟರಿ ಬಳಿ ಹೆದ್ದಾರಿಯಲ್ಲಿ ಸಂಭವಿಸಿದೆ.

- Advertisement -

ಮಾರುತಿ ಎರ್ಟಿಗಾ ಸಿಎನ್‌ಜಿ (CNG) ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ಡಿ. 26 ರಂದು ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ, ಕಾರಿನಲ್ಲಿದ್ದ ಓರ್ವ ವ್ಯಕ್ತಿ ಹೊರಗಡೆ ಬರಲು ಸಾಧ್ಯವಾಗದೇ ಕೂತಲ್ಲೇ ಸಜೀವ ದಹನವಾಗಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಬರುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ದೌಡಾಯಿಸಿದ್ದು, ನೆಲಮಂಗಲ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಹೊಸ ವರ್ಷಾಚರಣೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಘಟನೆಯಿಂದಾಗಿ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್​​ ಉಂಟಾಗಿತ್ತು.

ಹೈಬ್ರಿಡ್/ಪೆಟ್ರೋಲ್ ಎಕ್ಸ್ಎಲ್ 6 ಕಾರು ಅನಿಲ್ ಕುಮಾರ್ ಟಿ ಅವರಿಗೆ ಸೇರಿದ್ದು, ಬೆಂಗಳೂರು ಉತ್ತರ ಆರ್‌ಟಿಒ ಕಚೇರಿಯಲ್ಲಿ ನೋಂದಣಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...