ಬೆಂಗಳೂರು | ಸ್ವಚ್ಛಗೊಳಿಸುವಾಗ ಮ್ಯಾನ್‌ಹೋಲ್‌ಗೆ ಬಿದ್ದ ಸ್ವಚ್ಛತಾ ಸಿಬ್ಬಂದಿ; ಬೆನ್ನು ಮೂಳೆ ಮುರಿತ

Date:

Advertisements
  • ಕಸ ತೆರವು ಮಾಡುವ ವೇಳೆ 20 ಅಡಿ ಆಳದ ಮೋರಿಗೆ ಬಿದ್ದ ರತ್ನಮ್ಮ
  • ರಾಜಾಜಿನಗರದ ಇಎಸ್​ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಸ್ವಚ್ಛತಾ ಸಿಬ್ಬಂದಿ ಕೆಲಸ ನಿರ್ವಹಿಸುವ ವೇಳೆ ಮ್ಯಾನ್‌ಹೋಲ್‌ಗೆ ಬಿದ್ದು ಬೆನ್ನು ಮೂಳೆ ಮುರಿದಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನ ನಂದಿನಿ ಲೇಔಟ್‌ನ ಶ್ರೀಕಂಠ ನಗರದಲ್ಲಿ ಈ ಘಟನೆ ನಡೆದಿದೆ. ರತ್ನಮ್ಮ ಗಾಯಗೊಂಡವರು. ಮೇ 27ರಂದು ಸಿಬ್ಬಂದಿ ಸ್ವಚ್ಛತಾ ಕೆಲಸ ಮಾಡುತ್ತಿದ್ದರು. ಈ ವೇಳೆ, ರಾಜಕಾಲುವೆ ಮೋರಿ ಮೇಲೆ ಹಾಕಿದ್ದ ಕಸವನ್ನು ತೆರವುಗೊಳಿಸುವ ವೇಳೆ ಈ ಘಟನೆ ನಡೆದಿದೆ.

ಕಸವಿರುವ ಕೆಳಗೆ ಮ್ಯಾನ್‌ಹೋಲ್‌ ಇರುವ ಬಗ್ಗೆ ತಿಳಿಯದ ರತ್ನಮ್ಮ ಕಸ ತೆರವು ಮಾಡುವ ವೇಳೆ ಅರಿವಿಲ್ಲದೆ 20 ಅಡಿ ಆಳದ ಮೋರಿಗೆ ಬಿದ್ದಿದ್ದಾರೆ. ಈ ವೇಳೆ, ಜತೆಗಿದ್ದ ಮತ್ತೋರ್ವ ಸಿಬ್ಬಂದಿ ಸ್ಥಳೀಯರನ್ನು ಕರೆದಿದ್ದಾರೆ. ಸ್ಥಳೀಯರು ನೀಡಿದ ಏಣಿ ಮೂಲಕ ರತ್ನಮ್ಮ ಅವರನ್ನು ರಕ್ಷಣೆ ಮಾಡಿದ್ದಾರೆ.

Advertisements

ರತ್ನಮ್ಮ ಅವರಿಗೆ ಸದ್ಯ ಬೆನ್ನು ಮೂಳೆ ಮುರಿದಿದ್ದು, ನಗರದ ರಾಜಾಜಿನಗರದ ಇಎಸ್​ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾದಕ ವ್ಯಸನ ಮುಕ್ತಿ ಕೇಂದ್ರದ ಮುಖ್ಯಸ್ಥನಿಂದಲೇ ಡ್ರಗ್ಸ್‌ ಮಾರಾಟ!

ನೀರು ಸರಾಗವಾಗಿ ಹರಿದು ಹೋಗಲು ಕಳೆದ 7 ವರ್ಷಗಳ ಹಿಂದೆ ದೊಡ್ಡ ರಾಜಕಾಲುವೆ ಮೋರಿ ನಿರ್ಮಾಣ ಮಾಡಲಾಗಿತ್ತು. ಮೋರಿಯನ್ನು ನಿರ್ಮಾಣ ಮಾಡಿ ಅದನ್ನು ಮುಚ್ಚದೇ ಹಾಗೆಯೇ ಬಿಟ್ಟಿದ್ದರು. ಈ ಮೋರಿಯ ಸುತ್ತಮುತ್ತ ಸಾಕಷ್ಟು ಮನೆಗಳಿದ್ದು, ಮಕ್ಕಳು ಬಿದ್ದಿದ್ದರೆ ಏನು ಗತಿ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X