ಬೆಂಗಳೂರು | ಲುಲು ಮಾಲ್‌ನಲ್ಲಿ ಯುವತಿ ಜತೆ ಅಶ್ಲೀಲ ವರ್ತನೆ ತೋರಿದ ವ್ಯಕ್ತಿ ವಿರುದ್ಧ ದೂರು ದಾಖಲು

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಲುಲು ಮಾಲ್‌ನಲ್ಲಿ ವಯಸ್ಸಾದ ವ್ಯಕ್ತಿಯೋರ್ವ ಜನರ ನಡುವೆಯೇ ಮಹಿಳೆ ಮತ್ತು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ, ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಈ ಬಗ್ಗೆ ಲುಲು ಮಾಲ್ ಅಧಿಕಾರಿ ನೀಡಿದ ದೂರಿನ ಅನ್ವಯ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಪೊಲೀಸರು ವಿಡಿಯೋ ಆಧರಿಸಿ ತನಿಖೆ ಕೈಗೊಂಡಿದ್ದಾರೆ.

ಲುಲು ಮಾಲ್‌ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಇದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ, ಲುಲು ಮಾಲ್​ ಅಧಿಕಾರಿಯೊಬ್ಬರು ಘಟನೆಗೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.

Advertisements

ಈ ದೂರಿನ ಅನ್ವಯ ಮಾಗಡಿ ರಸ್ತೆ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡು ವಿಡಿಯೋ ಆಧಾರದ ಮೇಲೆ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಲುಲು ಮಾಲ್‌ನಲ್ಲಿ ಯುವತಿಗೆ ವಯಸ್ಸಾದ ವ್ಯಕ್ತಿಯಿಂದ ಲೈಂಗಿಕ ಕಿರುಕುಳ; ವಿಡಿಯೋ ವೈರಲ್

ಏನಿದು ಘಟನೆ?

ಬೆಂಗಳೂರಿನ ಲುಲು ಮಾಲ್​ನಲ್ಲಿ ಅಕ್ಟೋಬರ್ 29ರಂದು ಸಾಯಂಕಾಲ ಸುಮಾರು 6:30ಕ್ಕೆ ಬೇಕಂತಲೇ ವಯಸ್ಸಾದ ವ್ಯಕ್ತಿಯೊಬ್ಬ ಮಹಿಳೆಯರು ಮತ್ತು ಯುವತಿಯರು ಇರುವ ಕಡೆ ತೆರಳಿ ಅವರ ಹಿಂಭಾಗವನ್ನು ಸ್ಪರ್ಶಿಸಿ ಬರುತ್ತಿದ್ದನು. ಮಾಲ್‌ನಲ್ಲಿ ಜನರು ಹೆಚ್ಚಾಗಿ ಇದ್ದ ಕಾರಣ ಈ ಘಟನೆಯನ್ನು ಯಾರೂ ಹೆಚ್ಚಾಗಿ ಗಮನಿಸಿಲ್ಲ. ಅಲ್ಲೇ ಇದ್ದ ವ್ಯಕ್ತಿಯೊಬ್ಬರು ಇದನ್ನು ಕಂಡು, ಈ ವಯಸ್ಸಾದ ವ್ಯಕ್ತಿಯನ್ನು ಹಿಂಬಾಲಿಸಿದ್ದಾರೆ. ಈ ವೇಳೆ, ವಯಸ್ಸಾದ ವ್ಯಕ್ತಿ ಯುವತಿಯೊಬ್ಬರ ಹಿಂದೆ ತೆರಳಿ ಆಕೆಯ ಹಿಂಬದಿಯನ್ನು ಸ್ಪರ್ಶಿಸಿದ್ದಾನೆ. ಯುವತಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಆಕೆಯ ದೇಹವನ್ನು ಮುಟ್ಟಿದ್ದಾನೆ.

ಲೈಂಗಿಕವಾಗಿ ಪ್ರಸ್ತಾಪಿಸುವ ಸಲುವಾಗಿಯೇ ಯುವತಿಯ ಹಿಂಬದಿ ತೆರಳಿ ಆಕೆಯನ್ನು ಅಶ್ಲೀಲವಾಗಿ ಮುಟ್ಟಿದ್ದಾನೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ.

ಈ ಬಗ್ಗೆ ಯಶವಂತ ತೊಗಟವೀರ ಎಂಬುವವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್‌ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X