ಬೆಂಗಳೂರು | ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆಗೆ ಶರಣಾದ ದಂಪತಿ

Date:

  • ದಂಪತಿ ಆತ್ಮಹತ್ಯೆ ದಾಖಲಿಸಿ, ತನಿಖೆ ಕೈಗೊಂಡ ಪೊಲೀಸರು
  • ಕೌಟುಂಬಿಕ ಕಲಹದಿಂದ ಆತ್ಮಹತ್ಯೆ, ತುಮಕೂರು ಮೂಲದವರು

ಬೆಂಗಳೂರಿನಲ್ಲಿ ಕೌಟುಂಬಿಕ ಕಲಹದ ಕಾರಣಕ್ಕಾಗಿ ಗಂಡ-ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಪೀಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಸಂದ್ರದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಜಗದೀಶ (37), ನಂದಿನಿ (40) ಆತ್ಮಹತ್ಯೆಗೆ ಶರಣಾದ ದಂಪತಿ.

ದಂಪತಿ ತುಮಕೂರು ಮೂಲದವರಾಗಿದ್ದು, ಮೂರು ವರ್ಷದ ಹಿಂದೆ ವಿವಾಹವಾಗಿದ್ದರು. ಇಬ್ಬರು ನಗರದ ಪೀಣ್ಯ ಚೊಕ್ಕಸಂದ್ರದ ಮನೆಯೊಂದರಲ್ಲಿ ವಾಸವಾಗಿದ್ದರು. ಜಗದೀಶ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದು, ನಂದಿನಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಶಬ್ದ ಕಡಿಮೆ ಮಾಡಿ ಎಂದಿದ್ದಕ್ಕೆ ಹಲ್ಲೆ : ಗಾಯಾಳು ಸಾವಿನ ನಂತರ ಆರೋಪಿಗಳ ಬಂಧನ

“ಕೌಟುಂಬಿಕ ಕಲಹದ ಕಾರಣ ದಂಪತಿ ಗುರುವಾರ ಸಂಜೆ 4 ಗಂಟೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿ, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ” ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಸಾಂಪ್ರದಾಯಿಕ ಗರಡಿ ಮನೆಗೆ ಹೂಡಿಕೆ ಮಾಡಿದ ಕ್ರಿಕೆಟಿಗ ಧೋನಿ

ಕ್ರಿಕೆಟ್‌ ಇತಿಹಾಸದಲ್ಲಿ ಶ್ರೇಷ್ಠ ನಾಯಕ ಎಂದೆನಿಸಿಕೊಂಡಿದ್ದ ಮಹೇಂದ್ರ ಸಿಂಗ್ ಧೋನಿ ಅವರು...

ಮಹಾಧರಣಿ | ದುಡಿವ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಿಎಂ ಸಭೆ: ಸಚಿವ ಕೃಷ್ಣ ಬೈರೇಗೌಡ

ಧರಣಿನಿರತರ ಹಕ್ಕೊತ್ತಾಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಲು ಒಪ್ಪಿದ್ದಾರೆ. ಶೀಘ್ರದಲ್ಲೇ...

ಬೆಂಗಳೂರು | ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ಪ್ರವೇಶಿಸಿದ ಮಹಿಳೆ

ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ಪ್ರವೇಶ ಪಡೆದಿದ್ದ...

ಬೆಂಗಳೂರು ವಿಮಾನ ನಿಲ್ದಾಣದ ಭದ್ರತಾ ತಪಾಸಣೆಗೆ ನೂತನ ತಂತ್ರಜ್ಞಾನ ಅಳವಡಿಕೆ

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ...