ಬ್ಯಾಂಕ್ ಕಿರುಕುಳ | ಸಚಿವ ಜಮೀರ್ ನ್ಯಾಯ ಕೊಡಿಸಲಿಲ್ಲವೆಂದು ವಿಧಾನಸೌಧದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ದಂಪತಿ

Date:

ಸಾಲ ತೀರಿಸುವಂತೆ ಖಾಸಗಿ ಬ್ಯಾಂಕ್‌ನಿಂದ ನಿರಂತರ ಕಿರುಕುಳಕ್ಕೆ ಒಳಗಾದ ದಂಪತಿ ಬೆಂಗಳೂರಿನ ವಿಧಾನಸೌಧದ ಎದುರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

- Advertisement -

ಬೆಂಗಳೂರಿನ ಜಗಜೀವನ ರಾಮ್ ನಗರ (ಜೆಜೆ ನಗರ) ಗೋರಿಪಾಳ್ಯದ ಶಾಯಿಸ್ತಾ ದಂಪತಿ ಆತ್ಮಹತ್ಯೆಗೆ ಯತ್ನಿಸಿದವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಂಪತಿ ಬೆಂಗಳೂರು ಸಹಕಾರಿ ಬ್ಯಾಂಕ್‌ನಿಂದ ವ್ಯಾಪಾರಕ್ಕಾಗಿ ₹50 ಲಕ್ಷ ಸಾಲ ಪಡೆದಿದ್ದರು. ಸಾಲ ಪಡೆದ ದಂಪತಿಯಿಂದ ಬ್ಯಾಂಕ್‌ ಈಗಾಗಲೇ ₹95 ಲಕ್ಷ ಹಣ ಪಾವತಿಸಿಕೊಂಡಿದೆ. ಆದರೂ, ಇನ್ನು ₹1 ಕೋಟಿ 41 ಲಕ್ಷ ಹಣ ಪಾವತಿ ಮಾಡಬೇಕು ಎಂದು ಬ್ಯಾಂಕ್‌ ಸಿಬ್ಬಂದಿ ಹೇಳಿದ್ದರು.

ಸಾಲ ಪಾವತಿಸದ ಹಿನ್ನೆಲೆ, ಬ್ಯಾಂಕ್​ನವರು ಜಮೀನು ಹರಾಜು ಹಾಕಿದ್ದರು. ಇದರಿಂದ ಮನನೊಂದ ಮುಸ್ಲಿಂ ದಂಪತಿ ಬುಧವಾರ 11. 45 ಗಂಟೆಗೆ ವಿಧಾನಸೌಧ ಮೂರನೇ ಗೇಟ್ ಮುಂದೆ ನ್ಯಾಯಕ್ಕಾಗಿ ಆಗ್ರಹಿಸಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ದಂಪತಿಯನ್ನು ತಡೆದು, ಸಂತ್ರಸ್ತ ಕುಟುಂಬವನ್ನು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅತ್ತೆ ಮನೆಯಲ್ಲಿ ಕಳ್ಳತನ!

“ಶುಂಠಿ ವ್ಯಾಪಾರಕ್ಕೆ ಮನೆಯನ್ನು ಒತ್ತೆಯಿಟ್ಟು ₹50 ಲಕ್ಷ ಸಾಲ ಪಡೆದಿದ್ದೆವು. ಬ್ಯಾಂಕ್‌ನವರು ಕೇವಲ ₹1.41 ಕೋಟಿಗೆ ಮೂರು ಕೋಟಿ ಮೌಲ್ಯದ ಮನೆಯನ್ನು ಹರಾಜು ಹಾಕಿದ್ದಾರೆ. ಇದರಿಂದ ಸಾಲ ಪಡೆದ ನಮಗೆ ಬ್ಯಾಂಕ್‌ ಅನ್ಯಾಯ ಮಾಡಿದೆ. ನಮ್ಮ ಕುಟುಂಬ ಬೀದಿಗೆ ಬಿದ್ದಿದೆ. ಸಚಿವ ಜಮೀರ್ ಅಹಮದ್‌ ಖಾನ್ ಅವರಿಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದೆವು. ಅವರು ನ್ಯಾಯ ಕೊಡಿಸಲಿಲ್ಲ” ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...