ಗಾಂಜಾ ಇಡುತ್ತೇನೆ ಎಂದು ಹೆದರಿಸಿ ದಂಪತಿಯಿಂದ ಒಂದೂವರೆ ಕೋಟಿ ಹಣ ವಸೂಲಿ ಮಾಡಿದ ನಕಲಿ ಪೊಲೀಸ್

Date:

ಹಣ ನೀಡದಿದ್ದರೆ ಮನೆಯಲ್ಲಿ ಗಾಂಜಾ ಇಡುತ್ತೇನೆ ಎಂದು ಹೆದರಿಸಿ ನಕಲಿ ಪೊಲೀಸ್‌ ವೇಷಧಾರಿವೊಬ್ಬ ದಂಪತಿಯಿಂದ ಬರೋಬ್ಬರಿ ಒಂದೂವರೆ ಕೋಟಿ ಹಣ ವಸೂಲಿ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

- Advertisement -

ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ನ 3ನೇ ಸೆಕ್ಷನ್‌ ಫ್ಲಾಟ್ ನಲ್ಲಿ ಉತ್ತರ ಭಾರತ ಮೂಲದ ದಂಪತಿ ವಾಸ ಮಾಡುತ್ತಿದ್ದರು. ಡಿಸೆಂಬರ್ 17ರಂದು ರಾತ್ರಿ 9:30ರ ಸುಮಾರಿಗೆ ಪೊಲೀಸ್‌ ವೇಷದಲ್ಲಿ ಬಂದ ಆರೋಪಿ ಹಣ ನೀಡದಿದ್ದರೇ, ಮನೆಯಲ್ಲಿ ಗಾಂಜಾ ಇಡುತ್ತೇವೆ ಎಂದು ಬೆದರಿಕೆ ಹಾಕಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಮನೆಯಲ್ಲಿರುವ ಹಣ ಮತ್ತು ಒಡವೆ ನೀಡುವಂತೆ ಹೇಳಿದ್ದಾನೆ. ಆತನನ್ನೇ ನಿಜವಾದ ಪೊಲೀಸ್ ಎಂದು ಭಾವಿಸಿದ ದಂಪತಿ ಆತ ಹೇಳಿದ ಹಾಗೇ ಕೇಳಿದ್ದಾರೆ.

ಆರೋಪಿ ಮೊದಲಿಗೆ ಮನೆಯ ಮಾಲೀಕ ಸಂಜೀವ್ ಭೋರಾ ಅವರನ್ನು ಕರೆದುಕೊಂಡು ಹೋಗಿ ಅವರ ಎಟಿಎಂನಿಂದ ಹಣ ಡ್ರಾ ಮಾಡಿಸಿಕೊಂಡು ಮತ್ತೆ ಅವರ ಜೊತೆಗೆ ಅವರ ಮನೆಗೆ ಬಂದಿದ್ದಾನೆ. ನಂತರದಲ್ಲಿ ಭೋರಾ ಅವರ ದಂಪತಿಯನ್ನು ಆಕೆಯ ಎಟಿಎಂ ಕಾರ್ಡ್‌ನೊಂದಿಗೆ ಕರೆದುಕೊಂಡು ಹೋಗಿ ಆಕೆಯ ಬಳಿಯಿಂದಲೂ ಹಣ ಡ್ರಾ ಮಾಡಿಸಿಕೊಂಡು ಆಕೆಯನ್ನು ಮನೆಗೆ ಬಿಟ್ಟು ಪರಾರಿಯಾಗಿದ್ದಾನೆ.

ದಂಪತಿಯ ಬಳಿಯಿಂದ ಆರೋಪಿ ಬರೋಬ್ಬರಿ ಒಂದೂವರೆ ಕೋಟಿ ಹಣ ಡ್ರಾ ಮಾಡಿಸಿಕೊಂಡಿದ್ದಾನೆ. ಘಟನೆ ನಡೆದ ಮೂರು ದಿನಗಳ ಬಳಿಕ ಮನೆಗೆ ಬಂದಿರುವುದು ನಕಲಿ ಪೊಲೀಸ್ ಎಂದು ದಂಪತಿಗೆ ತಿಳಿದುಬಂದಿದೆ. ಆರೋಪಿ ಬೆಳಗಿನ ಜಾವ 3 ಗಂಟೆವರೆಗೆ ದಂಪತಿ ಮನೆಯಲ್ಲಿ ಸುತ್ತಾಡಿದ್ದಾನೆ.

ಈ ಸುದ್ದಿ ಓದಿದ್ದೀರಾ? ಕ್ರಿಸ್​ಮಸ್ ಹಬ್ಬ | ಚರ್ಚ್‌ಗಳಲ್ಲಿ ಕ್ರೈಸ್ತ ಬಾಂಧವರ ವಿಶೇಷ ಪ್ರಾರ್ಥನೆ: ಚರ್ಚ್ ಸುತ್ತಮುತ್ತ ಪೊಲೀಸರ ಗಸ್ತು

ಬಳಿಕ, ಡಿಸೆಂರ್‌ 20ರಂದು ದಂಪತಿ ಎಚ್‌ಎಸ್‌ಆರ್‌ ಲೇಔಟ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿ ಕ್ಯಾಮೆರಾ ಆಧರಿಸಿ ಆರೋಪಿ ಪತ್ತೆ ಕಾರ್ಯ ಆರಂಭಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...