ಬೆಂಗಳೂರು | ಚಪ್ಪಲಿ ಗೋದಾಮಿಗೆ ಬೆಂಕಿ ತಗುಲಿ ₹5 ಕೋಟಿ ನಷ್ಟ

Date:

ಚಪ್ಪಲಿ ಗೋದಾಮಿಗೆ ಬೆಂಕಿ ತಗುಲಿ, ₹5 ಕೋಟಿಗೂ ಹೆಚ್ಚಿನ ಮೌಲ್ಯದ ಚಪ್ಪಲಿ, ಶೂ ಸೇರಿದಂತೆ ಅನೇಕ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಕೆಂಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.  

- Advertisement -

ಗೋದಾಮಿನ ಬಳಿಯ ವಿದ್ಯುತ್ ಕಂಬಕ್ಕೆ ಕ್ಯಾಂಟರ್​ ಡಿಕ್ಕಿ ಹೊಡೆದಿದೆ. ಈ ವೇಳೆ, ಉತ್ತರಹಳ್ಳಿ ನಿವಾಸಿ ಶ್ರೀನಿವಾಸ್ ಎಂಬುವವರಿಗೆ ಸೇರಿದ ಎಎಸ್‌ಆರ್‌ ಮಾರ್ಕೆಟಿಂಗ್ ಮತ್ತು ಯುನಿಕಾರ್ನ್‌ ಮಾರ್ಕೆಟಿಂಗ್ ಎಂಬ ಹೆಸರಿನ ಗೋದಾಮಿಗೆ ಸಂಪರ್ಕಿಸಿದ್ದ ವಿದ್ಯುತ್ ​​​ತಂತಿಯಿಂದ ಶಾರ್ಟ್​ಸರ್ಕ್ಯೂಟ್ ಉಂಟಾಗಿ ಗುರುವಾರ ತಡರಾತ್ರಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ...

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ ಸಾಂಪ್ರದಾಯಿಕ ಟೋಪಿ) ಧರಿಸಿ ನಿಂತಿದ್ದ ಚಿತ್ರವು, ಅವರ ಇಸ್ರೇಲ್ ಪರ ಒಲವಿಗೆ ಅಳಿಸಲಾಗದ ಸಾಕ್ಷಿಯಾಗಿ ಉಳಿದುಕೊಂಡಿದೆ. ಶಾಂತಿ ಪ್ರವಾಸದ ಹೆಸರಿನಲ್ಲಿ...

ಆಪ್ಟೋಜೆನೆಟಿಕ್ಸ್ ಸಂಶೋಧನೆಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ: ನರಕೋಶಗಳಿಗೆ ಸಂಜೀವಿನಿಯಾಗಲಿರುವ...

ಸ್ಟಾನ್‌ಫೋರ್ಡ್ ವಿಶ್ವವಿದ್ಯಾಲಯದ ಕಾರ್ಲ್ ಡಿಸೆರೋತ್, ಜರ್ಮನಿಯ ಬರ್ಲಿನ್ನಿನ ಹಮ್‌ಬೋಲ್ಟ್ ವಿಶ್ವವಿದ್ಯಾಲಯದ ಪೀಟರ್ ಹೆಗೆಮನ್ ಮತ್ತು ಜರ್ಮನಿಯ ವೂರ್ಜ್ಬರ್ಗ್ ವಿಶ್ವವಿದ್ಯಾಲಯದ ಜಾರ್ಜ್ ನಾಗೆಲ್ ಅವರಿಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿಯನ್ನು ಅಕ್ಟೋಬರ್ 5ರಂದು ಭಾರತೀಯ ಕಾಲಮಾನ...

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ...

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ. ಆದರೆ ಇತ್ತೀಚಿನ ದಿನಗಳಲ್ಲಿ ಮದುವೆ ಮತ್ತು ಆದಾದ ಬಳಿಕ ಅದ್ದೂರಿಯಾಗಿ ಹಮ್ಮಿಕೊಳ್ಳುವ 'ಬೀಗರ ಊಟ' (ಬಾಡೂಟ) ಕೇವಲ ಸಂಪ್ರದಾಯವಾಗಿ ಉಳಿಯದೆ,...

ಗೋದಾಮಿ​ನಲ್ಲಿ 100ಕ್ಕೂ ಹೆಚ್ಚು ಜನ ಕೆಲಸ ಮಾಡುತ್ತಿದ್ದರು. ಆದರೆ, ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ವಾಹನಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರು. ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು. ಆದರೆ, 20 ನಿಮಿಷಗಳಲ್ಲಿ ದಾಖಲೆಗಳನ್ನು ಒಳಗೊಂಡಿರುವ ಕಂಪ್ಯೂಟರ್ ಸಿಸ್ಟಮ್‌ಗಳನ್ನು ಹೊರತುಪಡಿಸಿ, ₹5 ಕೋಟಿಗೂ ಹೆಚ್ಚು ಮೌಲ್ಯದ ಪಾದರಕ್ಷೆಗಳು ಸುಟ್ಟುಹೋದವು ಎಂದು ತಿಳಿದುಬಂದಿದೆ.

“₹20 ಲಕ್ಷ ಮೌಲ್ಯದ ಪಾದರಕ್ಷೆಗಳನ್ನು ಗೋದಾಮಿಗೆ ವ್ಯವಸ್ಥಾಪಕ ಶ್ರೀನಿವಾಸ್ ಅವರು ಮುಂದೆ ನಿಂತು ಇಳಿಸಿದ್ದಾರೆ. ಅವರು ಹೋದ ಸ್ವಲ್ಪ ಸಮಯದಲ್ಲೇ ಬೆಂಕಿ ಕಾಣಿಸಿಕೊಂಡಿದೆ. ಗೋದಾಮಿನ ಗೇಟ್ ಬಳಿ ರಿವರ್ಸ್ ತೆಗೆದುಕೊಳ್ಳುತ್ತಿದ್ದ ಟ್ರಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ, ಕಳಪೆ  ಗುಣಮಟ್ಟದ ವಿದ್ಯುತ್ ಕಂಬ ಮುರಿದು ಬಿದ್ದಿದೆ” ಎಂದು ಯೂನಿಕಾರ್ನ್ ಮಾರ್ಕೆಟಿಂಗ್‌ನ ವ್ಯವಸ್ಥಾಪಕರ ಪತ್ನಿ ಮತ್ತು ಉದ್ಯೋಗಿಯೂ ಆಗಿರುವ ಅಂಬಿಕಾ ಶ್ರೀನಿವಾಸ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸೆ.16 ರಂದು ‘ಜಿ. ರಾಜಶೇಖರ್ ಸ್ಮಾರಕ ಜ್ಞಾನ ವೇತನ 2023’ ಪ್ರಾರಂಭ

ವಿದ್ಯುತ್ ಕಂಬವು ರಸ್ತೆಯ ಮೇಲೆ ಕುಸಿದು ಬಿದ್ದಿದ್ದು, ವೈರಿಂಗ್ ಸಡಿಲಗೊಂಡಿದ್ದರಿಂದ ಗೋದಾಮಿನೊಳಗೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ಪ್ರತಿಷ್ಠಿತ ಕಂಪನಿಗಳು ಮತ್ತು ಬಹುತೇಕ ಅಂಗಡಿಗಳಿಗೆ ಶೂ, ಚಪ್ಪಲಿಗಳು ಈ ಗೋದಾಮಿನಿಂದಲೇ ಪೂರೈಕೆ ಆಗುತ್ತಿದ್ದವು. ಹೀಗಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಚಪ್ಪಲಿ ಶೂಗಳನ್ನು ಇಲ್ಲಿ ಶೇಖರಿಸಿ ಇಡಲಾಗಿತ್ತು.

ಸ್ಥಳಕ್ಕೆ ಭೇಟಿ ನೀಡಿದ ಕೆಂಗೇರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...

ಬೆಂಗಳೂರು ವಾಹನ ಸವಾರರ ಗಮನಕ್ಕೆ: ನಿಯಮ ಪಾಲಿಸದಿದ್ದರೆ ಡ್ರೈವಿಂಗ್‌ ಲೈಸೆನ್ಸ್‌ ರದ್ದು!

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಟ್ರಾಫಿಕ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪೊಲೀಸ್...

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...