ಬೆಂಗಳೂರು | ಮಾರತ್ತಹಳ್ಳಿ ಬ್ರಿಡ್ಜ್ ಸಮೀಪ ಮೂರಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೇಲಿಂದ ಮೇಲೆ ಅಗ್ನಿ ಅವಘಡಗಳು ಸಂಭವಿಸುತ್ತಿದ್ದು, ಇದೀಗ ಮಾರತ್ತಹಳ್ಳಿ ಬ್ರಿಡ್ಜ್ ಸಮೀಪ ಮೂರಂತಸ್ತಿನ ಕಟ್ಟಡದಲ್ಲಿ ಸೋಮವಾರ ರಾತ್ರಿ 11.45ರ ಸುಮಾರಿಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ.

- Advertisement -

ಮಾರತ್ತಹಳ್ಳಿ ಬ್ರಿಡ್ಜ್ ಸಮೀಪ ಮೂರಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಲೂಯಿಸ್ ಫಿಲಿಪ್ ಬಟ್ಟೆ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಪಕ್ಕದ ಅಂಗಡಿಗಳು, ಕಟ್ಟಡದ ಮುಂದೆ ಇದ್ದ ತೆಂಗಿನ ಮರ, ಟ್ರಾನ್ಸ್​ಫಾರ್ಮರ್​​​ಗೆ ಹರಡಿದೆ. ಅಷ್ಟೇ ಅಲ್ಲದೇ ಪಕ್ಕದ ಕಟ್ಟಡಕ್ಕೂ ಬೆಂಕಿ ಆವರಿಸಿ ಮೂರ್ನಾಲ್ಕು ಅಂಗಡಿಗೂ ತಗುಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಐದಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಸುಮಾರು ಎರಡೂವರೆ ಗಂಟೆ ಕಾರ್ಯಾಚರಣೆ ಬಳಿಕ ಬೆಂಕಿ ನಂದಿಸಿದ್ದಾರೆ.

ಅಗ್ನಿ ಅವಘಡ ಸಂಭವಿಸಿದ ವೇಳೆ ಕಟ್ಟಡದಲ್ಲಿದ್ದ ನಾಲ್ವರು ಪಕ್ಕದ ಕಟ್ಟಡಕ್ಕೆ ಹಾರಿದ್ದು, ಒಬ್ಬನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಓರ್ವ ಅಗ್ನಿಶಾಮಕ ಸಿಬ್ಬಂದಿಗೆ ಗಾಯವಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರಿಯಕರನಿಂದ ಭ್ರೂಣ ಹತ್ಯೆ: ದೂರು ದಾಖಲಿಸಿದ ಯುವತಿ

ಬೆಂಕಿಯ ಕೆನ್ನಾಲಿಗೆಗೆ ಕಟ್ಟಡದಲ್ಲಿದ್ದ ಬಟ್ಟೆ ಅಂಗಡಿ ಸುಟ್ಟು ಕರಕಲಾಗಿ ಅಪಾರ ಮೌಲ್ಯದ ಬಟ್ಟೆ, ವಸ್ತುಗಳು ಬೆಂಕಿಗಾಹುತಿಯಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಬೆಂಕಿ ಅವಘಡಕ್ಕೆ ಸೂಕ್ತ ಕಾರಣ ತಿಳಿದುಬಂದಿಲ್ಲ. ಅಂಗಡಿ ಪಕ್ಕದಲ್ಲೇ ಇದ್ದ ಟ್ರಾನ್ಸ್​​ಫಾರ್ಮರ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...