ಬೆಂಗಳೂರು | ₹10,000 ಲಂಚ ಪಡೆದಿದ್ದ ಸರ್ಕಾರಿ ಆಸ್ಪತ್ರೆ ವೈದ್ಯ ಅಮಾನತು

Date:

Advertisements
  • ಲೋಕಾಯುಕ್ತ ತನಿಖೆ ಆಧರಿಸಿ ಪ್ರಸೂತಿ ವೈದ್ಯ ರಾಮಚಂದ್ರ ವಿರುದ್ಧ ಕ್ರಮಕೈಗೊಂಡ ಆರೋಗ್ಯ ಇಲಾಖೆ
  • ಬಡ ಗರ್ಭಿಣಿ ಮಹಿಳೆಗೆ ಸಿಸೇರಿಯನ್ ಮಾಡಲು ₹15,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯ ರಾಮಚಂದ್ರ

ಬೆಂಗಳೂರಿನ ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿಗೆ ಸಿಸೇರಿಯನ್ ಮಾಡಲು ₹10 ಸಾವಿರ ಲಂಚ ಪಡೆದಿದ್ದ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ. ರಾಮಚಂದ್ರರನ್ನು ಅಮಾನತುಗಳಿಸಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಆದೇಶ ಹೊರಡಿಸಿದ್ದಾರೆ.

ಬಡ ಜನರಿಗೆ ಉಚಿತವಾಗಿ ಚಿಕಿತ್ಸೆ ನೀಡಬೇಕಾದ ಸರ್ಕಾರಿ ಆಸ್ಪತ್ರೆಗಳಲ್ಲಿ ಲಂಚ ಪಡೆದು ಚಿಕಿತ್ಸೆ ನೀಡುವುದು ಗಂಭೀರ ಪ್ರಕರಣವಾಗಿದ್ದು, ಲೋಕಾಯುಕ್ತ ತನಿಖೆಯಲ್ಲಿ ಲಂಚ ಪಡೆದಿರುವುದು ಸಾಬೀತಾಗಿದೆ. ಈ ಹಿನ್ನೆಲೆ, ಕೂಡಲೇ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದರು.

ಲೋಕಾಯುಕ್ತ ತನಿಖೆ ಆಧರಿಸಿ ಪ್ರಸೂತಿ ವೈದ್ಯ ರಾಮಚಂದ್ರ ವಿರುದ್ಧ ಆರೋಗ್ಯ ಇಲಾಖೆ ಕ್ರಮಕೈಗೊಂಡಿದೆ. ಇಲಾಖೆ ಈ ಕ್ರಮ ಕೈಗೊಂಡು ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ಜನರಿಂದ ಹಣ ವಸೂಲಿ ಮಾಡುವ ವೈದ್ಯರಿಗೆ ಎಚ್ಚರಿಕೆ ಸಂದೇಶ ನೀಡಿದೆ.

Advertisements

ಏನಿದು ಪ್ರಕರಣ ?

ಬೆಂಗಳೂರಿನ ಯಲಹಂಕದ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಬಡ ಗರ್ಭಿಣಿ ಮಹಿಳೆಗೆ ಸಿಸೇರಿಯನ್ ಮಾಡಲು ವೈದ್ಯರು ₹15,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ರಾಮಚಂದ್ರ ಕೆ.ಸಿ ಎಂಬುವವರು ವಾರ್ಡ್‌ ಬಾಯ್ ಮೂಲಕ ₹15,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕುಟುಂಬದವರು ಚೌಕಾಸಿ ಮಾಡಿದ ಬಳಿಕ ₹11 ಸಾವಿರ ಪಡೆಯಲು ಒಪ್ಪಿಕೊಂಡಿದ್ದರು.

ಗರ್ಭಿಣಿ ಮಂಜುಳಾ(20) ಎಂಬ ಮಹಿಳೆಗೆ ಸಿಸೇರಿಯನ್ ಮಾಡಲು ವೈದ್ಯರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಾಯುಕ್ತಕ್ಕೆ ಶನಿವಾರ ಮಂಜುಳಾ ಪತಿ ಅಂಗಪ್ಪ ದೂರು ನೀಡಿದ್ದರು. ಮಂಜುಳಾಗೆ ಸಿಸೇರಿಯನ್ ಆಗಿ ಹೆಣ್ಣು ಮಗು ಜನಿಸಿದ ಬಳಿಕ ಪತಿ ಅಂಗಪ್ಪ ₹10,000 ಹಣವನ್ನು ವೈದ್ಯ ರಾಮಚಂದ್ರ ಕೆ.ಸಿ ಸೂಚನೆ ಮೇರೆಗೆ ಆಸ್ಪತ್ರೆಯ ವಾರ್ಡ್ ಬಾಯ್ ವಾಹಿದ್ ಎಂಬುವವರಿಗೆ ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು| ಲೋಕಾಯುಕ್ತ ತನಿಖೆಯಿಂದ ಯಲಹಂಕ ಸರ್ಕಾರಿ ಆಸ್ಪತ್ರೆಯ ಭ್ರಷ್ಟಾಚಾರ ಬಯಲು

ಆಸ್ಪತ್ರೆಯ ವಾರ್ಡ್‌ಬಾಯ್ ಲೋಕಾಯುಕ್ತ ಪೊಲೀಸರ ಎದುರು ಹಣ ಪಡೆದಿರುವ ಬಗ್ಗೆ ಒಪ್ಪಿಕೊಂಡಿದ್ದನು. ನಂತರ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ. ರಾಮಚಂದ್ರ ಜತೆ ವಾರ್ಡ್‌ ಬಾಯ್ ಹಣ ಪಡೆದಿರುವ ಬಗ್ಗೆ ತನಿಖಾ ತಂಡದ ಎದುರು ಮೊಬೈಲ್‌ನಲ್ಲಿ ಮಾತನಾಡಿದ್ದರು.

ವೈದ್ಯರ ವಿರುದ್ಧ ಸು-ಮೋಟೋ ಪ್ರಕರಣ ದಾಖಲಿಸಿಕೊಂಡಿದ್ದರು. ವೈದ್ಯರ ವಿರುದ್ಧ ಇಲಾಖಾ ವಿಚಾರಣೆ ಬಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಆಸ್ಪತ್ರೆಯಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X