ಬೆಂಗಳೂರು | ಮಹಿಳೆಯ ಮೇಲೆ ಹರಿದ ಲಾರಿ : ಸ್ಥಳದಲ್ಲೇ ಸಾವು

Date:

  • ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
  • ಪ್ರತಿಭಟನಾಕಾರರನ್ನು ಚದುರಿಸುವ ಸಲುವಾಗಿ ಪೊಲೀಸರು ಲಾಠಿ ಬೀಸಿದರು

ಬೆಂಗಳೂರಿನ ನಾಯಂಡಹಳ್ಳಿ ಬಳಿ ಭಾನುವಾರ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಅನುಷಾ ಮೃತ ದುರ್ದೈವಿ. ಮಂಡ್ಯ ಮೂಲದ ಇವರು ಬೆಂಗಳೂರಿನಲ್ಲಿ ನೆಲೆಸಿದ್ದರು. ಇವರು ತಮ್ಮ ತಾಯಿ ವನಜಾಕ್ಷಿ ಹಾಗೂ ಏಳು ವರ್ಷದ ಮಗ ಆರ್ಯನೊಂದಿಗೆ ದ್ವಿಚಕ್ರ ವಾಹನದಲ್ಲಿ ದೀಪಾಂಜಲಿನಗರದ ಕಡೆಯಿಂದ ನಾಯಂಡಹಳ್ಳಿ ಕಡೆಗೆ ಬರುತ್ತಿದ್ದರು. ಈ ವೇಳೆ, ಸಿಮೆಂಟ್ ತುಂಬಿದ್ದ ಲಾರಿಯೊಂದು ದ್ವಿಚಕ್ರ ವಾಹನದ ಮೇಲೆ ಹರಿದು ನಂತರ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ.

ಈ ವೇಳೆ, ಲಾರಿಯೂ ಅನುಷಾ ತಲೆ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ತಾಯಿ ಮತ್ತು ಮಗನಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಈ ಘಟನೆ ನೋಡಿದ ಸ್ಥಳೀಯರು ತೀವ್ರ ಆಕ್ರೋಶಗೊಂಡಿದ್ದು, ಲಾರಿಯೂ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅದು ನಿಂತಿದೆ. ಇಲ್ಲದಿದ್ದರೇ, ಸರಣಿ ಭೀಕರ ಅಪಘಾತಗಳು ಸಂಭವಿಸುತ್ತಿದ್ದವು. ಇದಕ್ಕೆ ಲಾರಿ ಚಾಲಕನ ನಿರ್ಲಕ್ಷವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶಗೊಂಡು ಲಾರಿಗೆ ಕಲ್ಲು ತೂರಿದರು. ಪರಿಣಾಮ ಮುಂಭಾಗದ ಗಾಜುಗಳು ಒಡೆದುಹೋಗಿದೆ. ಸ್ಥಳೀಯರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು.

ಈ ವೇಳೆ, ಸ್ಥಳಕ್ಕೆ ಬಂದ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸುವ ಸಲುವಾಗಿ ಪೊಲೀಸರು ಲಾಠಿ ಬೀಸಿದರು.

ಲಾರಿ ಚಾಲಕ ಪರಾರಿಯಾಗಿದ್ದು, ಈತ ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾರ್ವಜನಿಕರು ಚಾಲಕನ್ನು ಹಿಡಿಯಲು ಪ್ರಯತ್ನಿಸಿದರಾದರೂ ಸಾಧ್ಯವಾಗಿಲ್ಲ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಸಾಂಪ್ರದಾಯಿಕ ಗರಡಿ ಮನೆಗೆ ಹೂಡಿಕೆ ಮಾಡಿದ ಕ್ರಿಕೆಟಿಗ ಧೋನಿ

ಕ್ರಿಕೆಟ್‌ ಇತಿಹಾಸದಲ್ಲಿ ಶ್ರೇಷ್ಠ ನಾಯಕ ಎಂದೆನಿಸಿಕೊಂಡಿದ್ದ ಮಹೇಂದ್ರ ಸಿಂಗ್ ಧೋನಿ ಅವರು...

ಮಹಾಧರಣಿ | ದುಡಿವ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಿಎಂ ಸಭೆ: ಸಚಿವ ಕೃಷ್ಣ ಬೈರೇಗೌಡ

ಧರಣಿನಿರತರ ಹಕ್ಕೊತ್ತಾಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಲು ಒಪ್ಪಿದ್ದಾರೆ. ಶೀಘ್ರದಲ್ಲೇ...

ಬೆಂಗಳೂರು | ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ಪ್ರವೇಶಿಸಿದ ಮಹಿಳೆ

ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ಪ್ರವೇಶ ಪಡೆದಿದ್ದ...

ಬೆಂಗಳೂರು ವಿಮಾನ ನಿಲ್ದಾಣದ ಭದ್ರತಾ ತಪಾಸಣೆಗೆ ನೂತನ ತಂತ್ರಜ್ಞಾನ ಅಳವಡಿಕೆ

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ...