ಬೆಂಗಳೂರು | ಪ್ರಿಯತಮೆಯನ್ನು ಕೊಂದ ಪ್ರಿಯಕರ

Date:

  • ಮೃತದೇಹದ ಕುತ್ತಿಗೆಗೆ ಬಟ್ಟೆ ಕಟ್ಟಿ ಫ್ಯಾನ್‌ಗೆ ನೇತು ಹಾಕಿ ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನ
  • ಪದೇಪದೆ ಜಗಳವಾಗುತ್ತಿರುವ ಕಾರಣ ಬೇರೆಯಾಗಬೇಕು ಎಂದು ನಿರ್ಧರಿಸಿದ್ದ ಇಬ್ಬರೂ ಪ್ರೇಮಿಗಳು

ಬೆಂಗಳೂರಿನ ಜೀವನ್ ಭೀಮಾನಗರದ ಕೋಡಿಹಳ್ಳಿಯಲ್ಲಿ ಪ್ರಿಯಕರನೇ ತನ್ನ ಪ್ರಿಯತಮೆಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಜೂನ್ 5ರಂದು ಈ ಘಟನೆ ನಡೆದಿದೆ. ಆಕಾಂಕ್ಷಾ ಮೃತ ದುರ್ದೈವಿ. ಅರ್ಪಿತ್ ಕೊಲೆ ಆರೋಪಿ. ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಕಾಂಕ್ಷಾ ಮೂಲತಃ ಹೈದರಾಬಾದದವರು. ಅರ್ಪಿತ ದೆಹಲಿ ಮೂಲದವರು. ಈ ಇಬ್ಬರು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ, ಇಬ್ಬರ ನಡುವೆ ಪ್ರೀತಿ ಹುಟ್ಟಿದೆ. ಬಳಿಕ ಇಬ್ಬರೂ ಕೂಡ ಒಂದೇ ಮನೆಯಲ್ಲಿ ವಾಸ ಮಾಡಲು ಆರಂಭಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇತ್ತಿಚೆಗೆ ಕೆಲಸ ಬದಲಾವಣೆ ಮಾಡಿ ಬೇರೆ ಕಡೆ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಕಳೆದ ಕೆಲ ದಿನಗಳಿಂದ ಜಗಳವಾಗುತ್ತಿತ್ತು. ಪದೇಪದೆ ಜಗಳವಾಗುತ್ತಿರುವ ಕಾರಣ ಇಬ್ಬರೂ ಬೇರೆಯಾಗಬೇಕು ಎಂದು ನಿರ್ಧರಿಸಿದ್ದರು. ಕಳೆದ ದಿನ ಕೂಡ ಇಬ್ಬರ ನಡುವೆ ಜಗಳವಾಗಿತ್ತು.

ಈ ವೇಳೆ ಗಲಾಟೆ ತಾರಕ್ಕಕ್ಕೇರಿದು ಅರ್ಪಿತ ಆಕಾಂಕ್ಷಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ಇದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಮೃತದೇಹದ ಕುತ್ತಿಗೆಗೆ ಬಟ್ಟೆ ಕಟ್ಟಿ ಫ್ಯಾನ್‌ಗೆ ನೇತು ಹಾಕಲು ಪ್ರಯತ್ನಿಸಿದ್ದಾನೆ. ಇದು ಸಾಧ್ಯವಾಗದ ಕಾರಣ ಹಾಗೆಯೇ ಮೃತದೇಹವನ್ನು ನೆಲದ ಮೇಲೆ ಬಿಟ್ಟು ಪರಾರಿಯಾಗಿದ್ದಾನೆ.

ಈ ಸುದ್ದಿ ಓದಿದ್ದೀರಾ? ‘ಗೃಹಜ್ಯೋತಿ’ ಗ್ಯಾರಂಟಿ ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ

ಈ ಘಟನೆ ನಡೆದ ದಿನ ರಾತ್ರಿ ರೂಮೆಟ್ ಕೆಲಸ ಮುಗಿಸಿ ಬಂದು ನೋಡಿದಾಗ ಆಕಾಂಕ್ಷಾ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೊದಲು ಅನುಮಾನಾಸ್ಪದ ಸಾವು ಎಂದು ಅಂದುಕೊಂಡಿದ್ದರು. ಆದರೆ ಸ್ಥಳ ಪರಿಶೀಲನೆ ಬಳಿಕ ಕೊಲೆ ಎಂಬುದು ತಿಳಿದುಬಂದಿದೆ. ಇನ್ನು ಆರೋಪಿ ಅರ್ಪಿತ್‌ಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತಮ ನಡೆ | ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಡಿಎಸ್‌ಇಎಲ್) 2024-25ರ ಶೈಕ್ಷಣಿಕ ವರ್ಷದಿಂದ...

ಬೆಂಗಳೂರು | ಜೂನ್ 1ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ

ಸರ್ಕಾರದ ನಿರ್ದೇಶನದಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಉಚಿತ ಮತ್ತು...

ಯುವತಿಯರ ಫೋಟೋ ಮಾರ್ಫ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಅಪ್ರಾಪ್ತರು ಸೇರಿ ಮೂವರ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಯುವತಿಯರ ಮಾರ್ಫ್‌ ಮಾಡಿದ ಫೋಟೋಗಳನ್ನು ಹರಿಬಿಡುತ್ತಿದ್ದ ಇಬ್ಬರು ಅಪ್ರಾಪ್ತರು...

ಮೇ 31ರವರೆಗೆ ಬೆಂಗಳೂರಿಗೆ ಬರುವ ಕೆಲವು ರೈಲುಗಳು ರದ್ದು; ವಿವರ ಇಲ್ಲಿದೆ!

ಬೈಯಪ್ಪನಹಳ್ಳಿ ವೆಸ್ಟ್ ಕ್ಯಾಬಿನ್ ಮತ್ತು ಬೈಯಪ್ಪನಹಳ್ಳಿ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಗಳ...