ಬೆಂಗಳೂರು | ಪ್ರೇಯಸಿಯ ಹುಟ್ಟುಹಬ್ಬ ಆಚರಿಸಿ ಕೊಲೆ ಮಾಡಿದ ಪ್ರಿಯಕರ

Date:

  • ಪ್ರೇಯಸಿಯ ಮೇಲೆ ಅನುಮಾನಗೊಂಡ ಪ್ರಿಯಕರ ಅವಳ ಹುಟ್ಟುಹಬ್ಬ ಆಚರಿಸಿದ ಬಳಿಕ ಹತ್ಯೆ
  • ಪೊಲೀಸ್‌ ಇಲಾಖೆಯ ಆಂತರಿಕ ಭದ್ರತಾ ವಿಭಾಗದಲ್ಲಿ ಕ್ಲರ್ಕ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ಮೃತ ಯುವತಿ

ಪ್ರೇಯಸಿಯ ಮೇಲೆ ಅನುಮಾನಗೊಂಡ ಪ್ರಿಯಕರ ಅವಳ ಹುಟ್ಟುಹಬ್ಬ ಆಚರಿಸಿದ ಬಳಿಕ ಹತ್ಯೆ ಮಾಡಿದ್ದಾನೆ. ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

ಬೆಂಗಳೂರಿನ ಲಗ್ಗೆರೆಯಲ್ಲಿ ಈ ಘಟನೆ ನಡೆದಿದ್ದು, ನವ್ಯ (24) ಕೊಲೆಯಾದ ದುರ್ದೈವಿ. ಈ ಯುವತಿ ಪೊಲೀಸ್‌ ಇಲಾಖೆಯ ಆಂತರಿಕ ಭದ್ರತಾ ವಿಭಾಗದಲ್ಲಿ ಕ್ಲರ್ಕ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಳು. ಬೇರೊಬ್ಬ ಯುವಕನೊಂದಿಗೆ ತನ್ನ ಪ್ರೇಯಸಿ ಚಾಟ್​ ಮಾಡುತ್ತಿದ್ದಾಳೆ ಎಂದು ಅನುಮಾನಿಸಿದ ಪ್ರಿಯಕರ ಆಕೆಯ ಹುಟ್ಟುಹಬ್ಬ ಆಚರಿಸಿ ಯುವತಿಯನ್ನು ಪ್ರಿಯಕರ ಪ್ರಶಾಂತ್ ಹತ್ಯೆ ಮಾಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ವಾಹನ ನಿಲುಗಡೆಗೆ ನಿರ್ಬಂಧ; ಎಲ್ಲೆಲ್ಲಿ?

ಕಳೆದ ಆರು ವರ್ಷಗಳಿಂದ ಪ್ರಶಾಂತ್ ಹಾಗೂ ನವ್ಯ ಇಬ್ಬರು ಪ್ರೀತಿಸುತ್ತಿದ್ದರು. ಈ ಇಬ್ಬರೂ ಕನಕಪುರ ಮೂಲದ ದೂರದ ಸಂಬಂಧಿಕರು.

ಕಳೆದ ಮಂಗಳವಾರ ನವ್ಯ ಹುಟ್ಟಿದ ಹಬ್ಬದ ದಿನ ಇತ್ತು. ಆ ದಿನ ಪ್ರಶಾಂತ್ ಬ್ಯುಸಿ ಇದ್ದೇನೆ ಎಂದು ಹೇಳಿದ್ದನು. ನಂತರ ಏ.14ರಂದು ಅವಳ ಹುಟ್ಟಿದ ಹಬ್ಬದ ಆಚರಣೆಗೆ ತಯಾರಿ ಮಾಡಿದ್ದನು. ರಾತ್ರಿ ವೇಳೆ ಕೇಕ್‌ ಕಟ್ ಮಾಡಿ ತಿನ್ನಿಸಿದ್ದನು. ಬಳಿಕ ಹರಿತವಾದ ಚಾಕುವಿನಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದಾನೆ.

ಮೃತ ಯುವತಿಯ ಶವವನ್ನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...