ಬೆಂಗಳೂರು | ವಿದ್ಯುತ್ ಪ್ರವಹಿಸಿ ಕೇರಳ ಮೂಲದ ವ್ಯಕ್ತಿ ಸಾವು

Date:

  • ಕೇರಳದ ತ್ರಿಶೂರ್‌ನಲ್ಲಿ ಮೊಬೈಲ್‌ ಅಂಗಡಿ ಇಟ್ಟುಕೊಂಡಿದ್ದ ವ್ಯಕ್ತಿ
  • ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡ ಪೊಲೀಸರು

ರಾಜಧಾನಿಗೆ ಮೊಬೈಲ್‌ ಬಿಡಿಭಾಗಗಳನ್ನು ಖರೀದಿ ಮಾಡಲು ಬಂದಿದ್ದ ಅಕ್ಬರ್ ಅಲಿ(36) ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ.

- Advertisement -

ಬೆಂಗಳೂರಿನ ಮಡಿವಾಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಕ್ಬರ್ ಅಲಿ ಮೂಲತಃ ಕೇರಳದ ತ್ರಿಶೂರ್ ನವರು. ಅವರು ತಮ್ಮ ಊರಿನಲ್ಲಿ ಮೊಬೈಲ್‌ ಅಂಗಡಿ ನಡೆಸುತ್ತಿದ್ದರು. ಮೊಬೈಲ್ ಫೋನ್ ಬಿಡಿಭಾಗಗಳನ್ನು ಖರೀದಿಸಲು ಅಕ್ಬರ್ ಅಲಿ ಏಪ್ರಿಲ್ 10 ರಂದು ನಗರಕ್ಕೆ ಬಂದಿದ್ದರು. ಮಡಿವಾಳ ಸಮೀಪದ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮಂಗಳವಾರ ನಗರದ ಎಸ್‌ಪಿ ರಸ್ತೆಯಲ್ಲಿ ಮೊಬೈಲ್​ ಫೋನ್ ಬಿಡಿ ಭಾಗಗಳನ್ನು ಖರೀದಿ ಮಾಡಿ, ಮಧ್ಯ ಸೇವನೆ ಮಾಡಿ ಲಾಡ್ಜ್‌ ಕಡೆಗೆ ಪ್ರಯಾಣ ಬೆಳೆಸಿದ್ದರು. ಲಾಡ್ಜ್‌ಗೆ ತೆರಳುವಾಗ ಹೊಸೂರು ರಸ್ತೆಯ ಇಂಡಿಯನ್‌ ಆಯಿಲ್‌ ಪೆಟ್ರೋಲ್‌ ಬಂಕ್‌ ಬಳಿ ಓರ್ವ ವ್ಯಕ್ತಿ ವಿದ್ಯುತ್‌ ಕಂಬದಿಂದ ವಿದ್ಯುತ್‌ ಪ್ರವಹಿಸಿ ಕೆಳಗೆ ಬಿದ್ದಿದ್ದನು. ಇದನ್ನು ಕಂಡ ಅಲಿ ಆ ವ್ಯಕ್ತಿಯ ರಕ್ಷಣೆಗೆ ಧಾವಿಸಿದ್ದು, ಕಟ್ಟಿಗೆಯ ಸಹಾಯದಿಂದ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಆದರೆ, ರಕ್ಷಣೆ ವೇಳೆ, ಲೈಟ್‌ ಕಂಬಕ್ಕೆ ಕಟ್ಟಿಗೆ ತಾಕಿ ಅಲಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಜಧಾನಿಯಲ್ಲಿ ದೇಶದ ಮೊದಲ 3‘ಡಿ’ ತಂತ್ರಜ್ಞಾನದ ಅಂಚೆ ಕಚೇರಿ

ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...