ಬೆಂಗಳೂರು | ಹುಲಿ ಉಗುರು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

Date:

  • ಐದು ಹುಲಿ ಉಗುರುಗಳಿರುವ ಬ್ಯಾಗ್‌ನೊಂದಿಗೆ ವ್ಯಕ್ತಿಯನ್ನು ಪತ್ತೆ ಹಚ್ಚಿದ ಪೊಲೀಸರು
  • ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಬಂಧಿತನನ್ನು ಒಳಪಡಿಸಲು ಯೋಜಿಸಿದ್ದೇವೆ ಎಂದ ಪೊಲೀಸರು

ಹುಲಿ ಉಗುರುಗಳನ್ನು ಮಾರಾಟ ಮಾಡುತ್ತಿದ್ದ 55 ವರ್ಷದ ವ್ಯಕ್ತಿಯನ್ನು ಮಂಗಳವಾರ ಬೆಂಗಳೂರಿನ ಚಾಮರಾಜಪೇಟೆಯ ವಿಶ್ವೇಶ್ವರಪುರಂ ಪೊಲೀಸರು ಬಂಧಿಸಿದ್ದಾರೆ.

- Advertisement -

ಚಿಕ್ಕಮಗಳೂರಿನ ರೈತ ರಘುಕುಮಾರ್ ಬಂಧಿತ. ಚಾಮರಾಜಪೇಟೆಯ 4ನೇ ಮುಖ್ಯರಸ್ತೆಯಲ್ಲಿ ವ್ಯಕ್ತಿಯೋರ್ವ ಹುಲಿ ಉಗುರುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡವು ಶೋಧ ನಡೆಸಿ ಐದು ಹುಲಿ ಉಗುರುಗಳಿರುವ ಬ್ಯಾಗ್‌ನೊಂದಿಗೆ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಚಿಕ್ಕಮಗಳೂರಿನ ಬುಡಕಟ್ಟು ಜನಾಂಗದವರಿಂದ ಉಗುರುಗಳನ್ನು ಖರೀದಿಸಿ ಬೆಂಗಳೂರಿನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದೆ ಎಂದು ರಘುಕುಮಾರ್ ಪೊಲೀಸರಿಗೆ ತಿಳಿಸಿದ್ದಾನೆ.

ಹುಲಿ ಉಗುರುಗಳಿಗೆ ಬೇಡಿಕೆಯಿದೆ. ಏಕೆಂದರೆ, ಅವು ಅದೃಷ್ಟವನ್ನು ತರುತ್ತವೆ. ಪೆಂಡೆಂಟ್‌ಗಳಾಗಿ ಧರಿಸಿರುವವರಿಗೆ ಧೈರ್ಯವನ್ನು ನೀಡುತ್ತವೆ ಎಂದು ಜನರು ನಂಬುತ್ತಾರೆ. ವಶಪಡಿಸಿಕೊಂಡ ಉಗುರುಗಳನ್ನು ಪೊಲೀಸರು ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಇಂದು ಆರ್‌ಸಿಬಿ-ಡೆಲ್ಲಿ ಮ್ಯಾಚ್: ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ವಾಹನ ನಿಲುಗಡೆಗೆ ನಿರ್ಬಂಧ

“ಹುಲಿ ಉಗುರುಗಳನ್ನು ರಘುಕುಮಾರ್‌ಗೆ ಮಾರಾಟ ಮಾಡಿದ್ದ ವ್ಯಕ್ತಿಗಳ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ. ಬಂಧಿತ ವ್ಯಕ್ತಿ ಬುಡಕಟ್ಟು ಜನರ ಬಗ್ಗೆ ಸುಳ್ಳು ಹೇಳಿಕೆಗಳನ್ನು ನೀಡುತ್ತಿರಬಹುದು ಅಥವಾ ಮಾಹಿತಿಯನ್ನು ಮರೆಮಾಚುತ್ತಿರಬಹುದು. ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಬಂಧಿತನನ್ನು ಒಳಪಡಿಸಲು ಯೋಜಿಸಿದ್ದೇವೆ ”ಎಂದು ಪೊಲೀಸ್‌ ಅಧಿಕಾರಿ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...