ಬೆಂಗಳೂರು | ಅಕ್ರಮ ಸಂಬಂಧ ಶಂಕಿಸಿ ಪತ್ನಿಗೆ ಚಾಕುವಿನಿಂದ ಇರಿದ ರೌಡಿ ಪತಿ

Date:

  • ದಯಾನಂದ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು
  • ದಯಾನಂದ ಅನೇಕ ಅಪರಾಧಗಳಲ್ಲಿ ಭಾಗಿಯಾಗಿರುವ ರೌಡಿಶೀಟರ್

ಬೆಂಗಳೂರಿನ ಆಡುಗೋಡಿಯಲ್ಲಿ ಪತ್ನಿಗೆ ಅಕ್ರಮ ಸಂಬಂಧವಿದೆ ಎಂಬ ಶಂಕೆಯಿಂದ ಚಾಕುವಿನಿಂದ ಇರಿದ ರೌಡಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಶಂಕಿತ ಆರೋಪಿ ದಯಾನಂದ ಅಲಿಯಾಸ್ ನಂದಾ ತನ್ನ ಪತ್ನಿ ಪ್ರಿಯಾಂಕಾ ಮತ್ತು ಇಬ್ಬರು ಮಕ್ಕಳೊಂದಿಗೆ ಬಜಾರ್ ಸ್ಟ್ರೀಟ್‌ನಲ್ಲಿ ವಾಸವಾಗಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಭಾನುವಾರ ರಾತ್ರಿ 9.30ಕ್ಕೆ ದಯಾನಂದ ಕುಡಿದ ಅಮಲಿನಲ್ಲಿ ಮನೆಗೆ ಬಂದಿದ್ದಾನೆ. ಪತ್ನಿ ತನಗೆ ಮೋಸ ಮಾಡಿದ್ದಾಳೆ ಎಂದು ಆರೋಪಿಸಿ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಬಳಿಕ ದಯಾನಂದ ಅಡುಗೆ ಮನೆಯಿಂದ ಚಾಕು ತಂದು ಪ್ರಿಯಾಂಕಾಗೆ ಇರಿದಿದ್ದಾನೆ. ಪ್ರಿಯಾಂಕಾ ಕೆಳಗೆ ಬಿದ್ದು ನೋವಿನಿಂದ ಒದ್ದಾಡುತ್ತಿದ್ದಾಗ ದಯಾನಂದ ಸ್ಥಳದಿಂದ ಪರಾರಿಯಾಗಿದ್ದಾನೆ.

ಅಕ್ಕಪಕ್ಕದವರು ಪೊಲೀಸರಿಗೆ ಈ ಬಗ್ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಹೊಯ್ಸಳ ಗಸ್ತು ವಾಹನ ಸ್ಥಳಕ್ಕೆ ಆಗಮಿಸಿ ಪ್ರಿಯಾಂಕಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದೆ. ಆಕೆ ಈಗ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

“ದಯಾನಂದ ಅನೇಕ ಅಪರಾಧಗಳಲ್ಲಿ ಭಾಗಿಯಾಗಿರುವ ರೌಡಿಶೀಟರ್. ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದನು. ತನ್ನ ಪತ್ನಿಗೆ ಅನೈತಿಕ ಸಂಬಂಧವಿದೆ ಎಂಬ ಅನುಮಾನದಿಂದ ಈ ಕೃತ್ಯ ಎಸಗಿದ್ದಾನೆ” ಎಂದು ಉಪ ಪೊಲೀಸ್ ಆಯುಕ್ತ (ಆಗ್ನೇಯ) ಸಿ ಕೆ ಬಾಬಾ ಹೇಳಿದ್ದಾರೆ.

ದಯಾನಂದ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಬಕ್ರೀದ್ ಹಬ್ಬ | ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಪ್ರಾಣಿವಧೆ ನಿಷೇಧ

ಬೆಂಗಳೂರು | 55 ವರ್ಷದ ಪಾದಚಾರಿಯೊಬ್ಬರಿಗೆ ಕಾರು ಡಿಕ್ಕಿ; ಸಾವು

ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ರಸ್ತೆ ದಾಟುತ್ತಿದ್ದ 55 ವರ್ಷದ ಪಾದಚಾರಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ಸಾವನ್ನಪ್ಪಿದ್ದಾರೆ.

ಚೊಕ್ಕಲಿಂಗಂ ಮೃತ ದುರ್ದೈವಿ. ಇವರು ಭಾನುವಾರ ರಾತ್ರಿ 9:40 ರ ಸುಮಾರಿಗೆ ಹಾರ್ಡ್‌ವೇರ್ ಅಂಗಡಿಯೊಂದರ ಮುಂದೆ ಎನ್‌ಆರ್ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ ಎಂದು ಸಿಟಿ ಮಾರ್ಕೆಟ್ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಚೊಕ್ಕಲಿಂಗಂ ಅವರು ಡಿವೈಡರ್ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಅವರ ತಲೆಯ ಹಿಂಭಾಗದಲ್ಲಿ ತೀವ್ರವಾಗಿ ಗಾಯಗೊಂಡು ರಕ್ತಸ್ರಾವವಾಗುತ್ತಿತ್ತು. ಇದನ್ನು ಕಂಡ ಟ್ರಾಫಿಕ್ ಪೊಲೀಸರು ಅವರನ್ನು ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಸಂಚಾರ ಪೊಲೀಸರು ಐಪಿಸಿ ಸೆಕ್ಷನ್ 279 (ಸಾರ್ವಜನಿಕ ದಾರಿಯಲ್ಲಿ ದುಡುಕಿನ ಚಾಲನೆ ಅಥವಾ ಸವಾರಿ) ಮತ್ತು 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವುದು), ಮತ್ತು ಸೆಕ್ಷನ್ 134 (ಎ & ಬಿ) ಮತ್ತು 187 (ಅಪಘಾತಗಳಿಗೆ ಸಂಬಂಧಿಸಿದ ಅಪರಾಧಗಳಿಗೆ ಶಿಕ್ಷೆ) ಅಡಿಯಲ್ಲಿ ಸ್ವಯಂ ಮೋಟೋ ಪ್ರಕರಣವನ್ನು ದಾಖಲಿಸಿದ್ದಾರೆ. ಭಾರತೀಯ ಮೋಟಾರು ವಾಹನ ಕಾಯ್ದೆ. ಆರೋಪಿ ಚಾಲಕನ ಪತ್ತೆಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...