- ಜಯನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
- ಎಲೆಕ್ಟ್ರಿಕ್ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಅಪಘಾತ
ದಕ್ಷಿಣ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಹದಿನೇಳು ವರ್ಷದ ಯುವತಿ ಸಾವನ್ನಪ್ಪಿದ್ದಾಳೆ.
ಅನಾಹಿತಾ ಪಾಲ್ ಮೃತ ಯುವತಿ. ಬೆಂಗಳೂರಿನ ಡೇರಿ ಸರ್ಕಲ್‌ನ ಭವಾನಿ ಲೇಔಟ್ ಬಳಿ ಘಟನೆ ನಡೆದಿದೆ. ಜೆ.ಪಿ.ನಗರ 3ನೇ ಹಂತದ 9ನೇ ಅಡ್ಡರಸ್ತೆಯ ಜಂಕ್ಷನ್‌ನಲ್ಲಿ ಬೆಳಗ್ಗೆ 7.55ರ ಸುಮಾರಿಗೆ ಎಲೆಕ್ಟ್ರಿಕ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಅನಾಹಿತಾ ಅವರ ತಲೆ ಮತ್ತು ಮುಖಕ್ಕೆ ಗಾಯಗಳಾಗಿದ್ದವು. ಅವರನ್ನು ಆಸ್ಪತ್ರೆಗೆ ತಲುಪಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? 2023ರ ವಿಧಾನಸಭಾ ಚುನಾವಣೆ | ಮತದಾರರ ಓಲೈಕೆಗೆ ‘ಉಚಿತ’ಗಳ ಸುರಿಮಳೆ; ಇವು ಕೇವಲ ಭರವಸೆಗಳೇ?
ಕಾರು ಚಾಲಕನ ವಿರುದ್ಧ ಐಪಿಸಿ ಸೆಕ್ಷನ್ 279 (ಅತಿವೇಗ ಮತ್ತು ಅಜಾಗರೂಕ ಚಾಲನೆ) ಮತ್ತು 304ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಯನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.