ಬೆಂಗಳೂರು | ಠಾಣೆಯಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಸಬ್‌ ಇನ್ಸ್‌ಪೆಕ್ಟರ್‌ ; ಟ್ವೀಟ್‌ನಲ್ಲಿ ದೂರು

Date:

  • ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಟ್ಯಾಗ್‌ ಮಾಡಿ ಸರಣಿ ಟ್ವೀಟ್‌
  • ಮಹಿಳೆಯ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಬೆಂಗಳೂರು ನಗರ ಪೊಲೀಸ್

ಪ್ರಕರಣವೊಂದರಲ್ಲಿ ಹೇಳಿಕೆ ನೀಡಲು ತೆರಳಿದ್ದ ಮಹಿಳೆಯ ಮೇಲೆ ಬೆಂಗಳೂರಿನ ಸುದ್ದನಗುಂಟೆ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಕಿರುಕುಳ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಪೊಲೀಸರು ಮಹಿಳೆಯನ್ನು ಕೇಳಿದ್ದಾರೆ.

ಸಂತ್ರಸ್ತ ಮಹಿಳೆ ಟ್ವಿಟರ್‌ನಲ್ಲಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಟ್ಯಾಗ್‌ ಮಾಡಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ತನ್ನ ಮೇಲಾದ ದೌರ್ಜನದ ಬಗ್ಗೆ ಹೇಳಿಕೊಂಡಿದ್ದಾರೆ.

ಶೀತಲ್ ಸುಹಾನ ಅಬ್ರಹಾಂ ಎಂಬ ಮಹಿಳೆ ಟ್ವೀಟ್‌ ಮಾಡಿದ್ದು, “ಏ.8ರಂದು ಸ್ನೇಹಿತನ ಸಹೋದರನ ಪರವಾಗಿ ವರದಕ್ಷಿಣೆ ಪ್ರಕರಣದಲ್ಲಿ ಸಾಕ್ಷಿ ಹೇಳಲು ಸುದ್ದಗುಂಟೆಪಾಳ್ಯ ಪೊಲೀಸ್‌ ಠಾಣೆಗೆ ತೆರಳಿದ್ದೆ. ಈ ವೇಳೆ, ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ಮಂಜುನಾಥ ಸ್ವಾಮಿ ಅವರು ನನ್ನ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ. ಜತೆಗೆ ವಾಟ್ಸಾಪ್ ಮೆಸೇಜ್ ಮೂಲಕ ಕಿರುಕುಳ ನೀಡುತ್ತಿದ್ದಾರೆ” ಎಂದು ಆಋಓಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಹಿಳೆಯ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ,​ ಈ ಬಗ್ಗೆ ಸಂಪೂರ್ಣ ಮಾಹಿತಿ ಕೇಳಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೊರೊನಾ ನಂತರ ಪಾದಚಾರಿಗಳ ಸಾವಿನ ಸಂಖ್ಯೆಯಲ್ಲಿ ಏರಿಕೆ

ಮಹಿಳೆ ಹೇಳಿರುವುದೇನು?

ವರದಕ್ಷಿಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಿತನ ಸಹೋದರನ ಪರವಾಗಿ ಹೇಳಿಕೆ ನೀಡಲು ಠಾಣೆಗೆ ತೆರಳಿದ್ದೆ. ಆದರೆ, ಪೊಲೀಸ್ ಸ್ಟೇಷನ್‌ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಬಿ.ಸಿ ನನ್ನೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಾರೆ.

https://twitter.com/SusanSheethal/status/1645385528932728833?s=20

ಪೋಲೀಸರು ನಾನು ಹೇಳಿಕೆ ನೀಡುವ ವೇಳೆ ಹೇಳಿಕೆಯನ್ನು ತೆಗೆದುಕೊಳ್ಳಲಿಲ್ಲ. ಆದರೆ, ಅವರು ಕರೆ ಮಾಡಿದಾಗ ಬರಲು ತಿಳಿಸಿದರು. ನಾನು ಮನೆಗೆ ಬಂದ ನಂತರ ನನ್ನ ಚಿತ್ರಗಳನ್ನು ಕಳುಹಿಸಲು ಕೇಳಿದರು. ಅವರು ತಡರಾತ್ರಿ ವಾಟ್ಸ್‌ಆಪ್‌ನಲ್ಲಿ ಮೆಸೇಜ್‌ ಕಳುಹಿಸಲು ಪ್ರಾರಂಭಿಸಿದರು. ಆದರೆ, ನಾನು ಅದನ್ನು ನಿರ್ಲಕ್ಷಿಸಿದೆ. ಈ ಘಟನೆಯಿಂದ ನನಗೆ ಭಯವಾಗಿದೆ. ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದೇನೆ. ಈ ಪರಿಸ್ಥಿತಿಯನ್ನು ಹೇಗೆ ಎದುರಿಸಬೇಕೆಂದು ನನಗೆ ತಿಳಿದಿಲ್ಲ. ದಯವಿಟ್ಟು ಸಲಹೆ ನೀಡಿ ಎಂದು ಟ್ವೀಟ್‌ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಗ ಮಹೋತ್ಸವ: ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ; ಓರ್ವ ಸಾವು

ಕಳೆದ ಒಂದು ವಾರದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ...

ಬೆಂಗಳೂರು | 23 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

23 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್...