ಬೆಂಗಳೂರು | ಉಚಿತ ಟಿಕೆಟ್‌ಗೆ ಐಡಿ ತೋರಿಸದೇ ಬಸ್‌ ನಿರ್ವಾಹಕನ ಜತೆ ಯುವತಿ ಜಗಳ

Date:

  • ಬನಶಂಕರಿ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ಸಿನಲ್ಲಿ ಘಟನೆ
  • ಕರ್ನಾಟಕದ ಮಹಿಳೆಯರಿಗೆ ಮಾತ್ರ ಶಕ್ತಿ ಯೋಜನೆ

ಕಾಂಗ್ರೆಸ್‌ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ತನ್ನ ಐದು ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಯನ್ನು ಜೂನ್ 11ರಂದು ಜಾರಿಗೆ ತಂದಿತ್ತು. ಈ ಯೋಜನೆಯು ಕರ್ನಾಟಕದ ಮಹಿಳೆಯರಿಗೆ ಮಾತ್ರ ಅಲ್ವಯಿಸುತ್ತದೆ ಎಂದು ಸರ್ಕಾರ ಹೇಳಿದೆ. ಹೀಗಾಗಿ, ಮಹಿಳೆಯರು ರಾಜ್ಯದ ನಿವಾಸಿ ಎಂಬುದಕ್ಕೆ ಗುರುತಿನ ಚೀಟಿ ತೋರಿಸಿ ಟಿಕೆಟ್‌ ಪರೆದುಕೊಳ್ಳಬೇಕೆಂದು ಸರ್ಕಾರ ಹೇಳಿದೆ. ಆದರೆ, ಟೆಕ್ಕಿ ಯುವತಿಯೊಬ್ಬರು ಉಚಿತ ಟಿಕೆಟ್‌ ಪಡೆಯಲು ಸೂಕ್ತ ದಾಖಲೆ ತೋರಿಸದೆ, ಬಿಎಂಟಿಸಿ ನಿರ್ವಾಹಕರ ಜತೆಗೆ ಜಗಳ ತೆಗೆದಿದ್ದಾರೆ.

- Advertisement -

ಬಿಎಂಟಿಸಿ ನಿರ್ವಾಹಕ ಜತೆಗೆ ಟೆಕ್ಕಿ ಯುವತಿ ಜಗಳವಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬನಶಂಕರಿ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ಸಿನಲ್ಲಿ ಈ ಘಟನೆ ನಡೆದಿದೆ. ಬಿಎಂಟಿಸಿ ನಿರ್ವಾಹಕ ಆಧಾರ ಕಾರ್ಡ್‌ ಅಥವಾ ವೋಟರ್‌ ಐಡಿ ತೋರಿಸಿ ಉಚಿತವಾಗಿ ಪ್ರಯಾಣಿಸಿ ಇಲ್ಲವಾದರೆ ಟಿಕೆಟ್ ತೆಗೆದುಕೊಳ್ಳಿ ಎಂದು ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದಕ್ಕೆ ಕೆರಳಿದ ಯುವತಿ ನಾನು ಕೇಂದ್ರ ಸರ್ಕಾರದ ಸಿಬ್ಬಂದಿ ನಾನು ದುಡ್ಡು ಕೊಡುವುದಿಲ್ಲ. ನೀನು ಏನು ಬೇಕಾದರೂ ಮಾಡಿಕೋ ಎಂದು ಅವಾಜ್ ಹಾಕಿದ್ದಾರೆ.

ಇದಕ್ಕೆ ಬಿಎಂಟಿಸಿ ನಿರ್ವಾಹಕ ನೀವು ಕೇಂದ್ರ ಸರ್ಕಾರದ ಉದ್ಯೋಗಿ ಎಂಬುದಕ್ಕೆ ಗುರುತಿನ ಚೀಟಿ ತೋರಿಸಿ ಎಂದರೂ ಕೇಳದ ಯುವತಿ ಬಸ್‌ನಲ್ಲಿ ಗಲಾಟೆ ಆರಂಭಿಸಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬೈಯಪ್ಪನಹಳ್ಳಿ-ಕೆ.ಆರ್‌.ಪುರ ನಡುವೆ ಮೊದಲ ಮೆಟ್ರೋ ಪ್ರಾಯೋಗಿಕ ಸಂಚಾರ ಯಶಸ್ವಿ

“ಕೇಂದ್ರ ಸರ್ಕಾರದ ಉದ್ಯೋಗಕ್ಕೆ ಸಂಬಂಧಿಸಿದ ಗುರುತಿನ ಚೀಟಿಯಲ್ಲಿ ನಿವಾಸದ ವಿಳಾಸವಿದೆ. ಆ ವಿಳಾಸ ಕರ್ನಾಟಕದ್ದು. ಅದನ್ನು ಪರಿಗಣಿಸಿ ಪ್ರಯಾಣಕ್ಕೆ ಅನುಮತಿ ನೀಡಿ ಇಲ್ಲದಿದ್ದರೆ, ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ” ಎಂದು ಯುವತಿ ನಿರ್ವಾಹಕರಿಗೆ ಹೇಳಿದ್ದಾರೆ.

ಈ ವೇಳೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಸಹ ಯುವತಿಗೆ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಸೇವೆ ನೀಡಬೇಕಿದ್ದರೆ ಅವರು ಕರ್ನಾಟಕದ ವಸತಿ ವಿಳಾಸಗಳೊಂದಿಗೆ ಸರ್ಕಾರಿ ಗುರುತಿನ ಪುರಾವೆಗಳನ್ನು ಒದಗಿಸಬೇಕು ಎಂದು ಹೇಳಿದ್ದಾರೆ. ಇದಕ್ಕೂ ಯುವತಿ ಕೋಪಗೊಂಡು ಸಹ ಪ್ರಯಾಣಿಕರ ಮೇಲೆ ರೇಗಾಡಿದ್ದಾಳೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...