ಬೆಂಗಳೂರು | ಪ್ರಿಯತಮನೊಂದಿಗೆ ಬೈಕ್‌ ಕದಿಯುತ್ತಿದ್ದ ಯುವತಿ ; ಬಂಧನ

Date:

  • ಪ್ರೀತಿ, ಪ್ರೇಮದ ಜತೆಗೆ ಬೈಕ್‌ ಕದಿಯುವುದನ್ನೇ ವೃತ್ತಿ ಮಾಡಿಕೊಂಡಿದ್ದ ಆರೋಪಿಗಳು
  • ಬಂಧಿತರಿಂದ 3 ಬೈಕ್ ಹಾಗೂ ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೈಕ್ ಕಳ್ಳತನ ಹೆಚ್ಚಾಗಿದ್ದು, ರಾಯಲ್ ಲೈಫ್‌ಗಾಗಿ ಪ್ರೇಮಿಗಳು ಬೈಕ್ ಕದ್ದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಆರೋಪಿ ಮುರುಗಾ ಮತ್ತು ಆತನ ಪ್ರೇಯಸಿಯನ್ನ ಮಲೇಶ್ವರಂ ಪೊಲೀಸರು ಬಂಧಿಸಿದ್ದಾರೆ.

- Advertisement -

ಆರೋಪಿ ಮುರುಗನ ಪ್ರೀತಿಯಲ್ಲಿ ಬಿದ್ದಿದ್ದ ಯುವತಿಯೂ ಅವನೊಂದಿಗೆ ಬೈಕ್‌ ಕದಿಯುವುದರಲ್ಲಿ ತೊಡಗಿಸಿಕೊಂಡಿದ್ದಳು. ಪ್ರೀತಿ, ಪ್ರೇಮದ ಜೊತೆಗೆ ಬೈಕ್‌ ಕದಿಯುವುದನ್ನೇ ವೃತ್ತಿ ಮಾಡಿಕೊಂಡಿದ್ದ ಆರೋಪಿಗಳು ಒಮ್ಮೆ ಮುರುಗಾ ಬೈಕ್‌ ಅನ್ನು ಕದ್ದರೆ, ಇನ್ನೊಮ್ಮೆ ಪ್ರೇಯಸಿ ಬೈಕ್ ಕದಿಯುತ್ತಿದ್ದಳು. ಈ ಜೋಡಿ ಬೈಕ್‌ ಕದಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ದ್ವಿಚಕ್ರ ವಾಹನ ಸಂಚಾರ ನಿಷೇಧಕ್ಕೆ ಸಜ್ಜಾದ ಎನ್‌ಎಚ್‌ಎಐ

ಈ ಇಬ್ಬರು ಆರೋಪಿಗಳ ವಿರುದ್ಧ ಶ್ರೀರಾಂಪುರ, ಮಲ್ಲೇಶ್ವರಂ ಸೇರಿ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸರು ಇವರಿಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ 3 ಬೈಕ್ ಹಾಗೂ ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ರಾಯಲ್ ಲೈಫ್​​ಗಾಗಿ ಈ ಜೋಡಿ ಬೈಕ್​ ಕದ್ದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಬಂದ ಹಣದಲ್ಲಿ ಎಂಡಿಎಂಎ, ಗಾಂಜಾ ಸೇವಿಸಿ ಮೋಜು ಮಾಡುತ್ತಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...