ಬೆಂಗಳೂರು | ವೃದ್ಧೆಯ ಕೈಕಾಲು ಕಟ್ಟಿ ದರೋಡೆ ಮಾಡಿದ್ದ ಆರೋಪಿ ಬಂಧನ

Date:

ಮನೆಯಲ್ಲಿ ಏಕಾಂಗಿಯಾಗಿದ್ದ ವೃದ್ದೆಯ ಕೈ-ಕಾಲು ಕಟ್ಟಿ ಹಾಕಿ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಯೊಬ್ಬನನ್ನು ರಾಜರಾಜೇಶ್ವರಿನಗರದ ಪೊಲೀಸರು ಬಂಧಿಸಿದ್ದಾರೆ.

ರೌಡಿ ಕುಮಾರ ಅಲಿಯಾಸ್ ಲೊಡ್ಡೆ ಕುಮಾರ (30) ಬಂಧಿತ ಆರೋಪಿ. ಸದ್ಯ ಒಬ್ಬ ಆರೋಪಿಯನ್ನ ಬಂಧಿಸಿರುವ ರಾಜರಾಜೇಶ್ವರಿನಗರದ ಪೊಲೀಸರು ಇನ್ನುಳಿದ ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.

ಏನಿದು ಪ್ರಕರಣ?

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜನವರಿ 9ರಂದು ರಾಜರಾಜೇಶ್ವರಿ ನಗರದ ಗೌರಮ್ಮ ಎಂಬುವವರು ಸಂಜೆ ತಮ್ಮ ಮೊಮ್ಮಕ್ಕಳನ್ನು ಟ್ಯೂಷನ್‌ಗೆ ಬಿಟ್ಟು, ಮನೆಗೆ ಬಂದಿದ್ದರು. ಇನ್ನೇನು ಬಾಗಿಲು ಹಾಕಬೇಕು ಎನ್ನುವಷ್ಟರಲ್ಲಿ ಅರೋಪಿಗಳು ಮನೆಗೆ ನುಗ್ಗಿ, ವೈದ್ದೆಯ ಕೈ-ಕಾಲು ಕಟ್ಟಿ ಹಾಕಿ, ಬಾಯಿಗೆ ಬಟ್ಟೆ ತುರುಕಿದ್ದರು.

ಬಳಿಕ, ಮನೆಯಲ್ಲಿದ್ದ 120 ಗ್ರಾಂ ಚಿನ್ನ, 100 ಗ್ರಾಂ ಬೆಳ್ಳಿ, 50 ಸಾವಿರ ನಗದು ದರೋಡೆ ಮಾಡಿ ಪರಾರಿಯಾಗಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೆಟ್ರೋ ಹಳಿಗೆ ಜಿಗಿಯುವವರ ಸಂಖ್ಯೆ ಹೆಚ್ಚಳ: ಭದ್ರತೆಗಾಗಿ 326 ಹೆಚ್ಚುವರಿ ಸಿಬ್ಬಂದಿ ನಿಯೋಜನೆ

ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸದ್ಯ ಓರ್ವ ಆರೋಪಿಯನ್ನು ಬಂಧಿಸಿದ್ದು, ಆತನಿಂದ ಕದ್ದ ವಸ್ತುಗಳನ್ನು ಹಾಗೂ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಇನ್ನು ಪ್ರಮುಖ ಆರೋಪಿಗೆ ಕಳ್ಳತನ ಮಾಡಲು ಸಹಾಯ ಮಾಡಿದ ಇನ್ನಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

545 ಪಿಎಸ್‌ಐ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ

545 ಪಿಎಸ್‌ಐ ಹುದ್ದೆಗಳಿಗೆ ನಡೆಸಲಾಗಿದ್ದ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಮಾರ್ಚ್‌ 1...

ದ್ವಿತೀಯ ಪಿಯುಸಿ | ಮೊದಲ ದಿನ 18,231 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು

ರಾಜ್ಯಾದ್ಯಂತ ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ...

ಬಿಬಿಎಂಪಿ | ನೀರಿನ ಟ್ಯಾಂಕರ್ ಸ್ವಯಂ ನೋಂದಣಿಗೆ ಮಾರ್ಚ್‌ 7 ಕೊನೆ ದಿನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ...

ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಒಟ್ಟು 9 ಮಂದಿ ಗಂಭೀರವಾಗಿ...