ಬೆಂಗಳೂರು | ವಿಮಾನದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ

Date:

  • ಸಿಬ್ಬಂದಿ ಸಲಹೆ ಮೇರೆಗೆ ವಿಮಾನ ನಿಲ್ದಾಣದ ಪೊಲೀಸ್‌ ಠಾಣೆಗೆ ದೂರು
  • ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ದೋಹಾದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ 51 ವರ್ಷದ ವ್ಯಕ್ತಿಯೊಬ್ಬ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆತನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

- Advertisement -

ಈ ಘಟನೆ ಜೂನ್ 27ರಂದು ನಡೆದಿದ್ದು, ಆರೋಪಿಯನ್ನು ತಮಿಳುನಾಡಿನ ಶಿವಗಂಗಾ ನಿವಾಸಿ ಅಮ್ಮವಾಸಾಯಿ ಮುರುಗೇಶನ್ ಎಂದು ಗುರುತಿಸಲಾಗಿದೆ. ಈತ ಖಾಸಗಿ ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ (ಪಿಆರ್‌ಓ) ಆಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ದೋಹಾದಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಪೋಷಕರೊಂದಿಗೆ 13 ವರ್ಷದ ಬಾಲಕಿ ಪ್ರಯಾಣಿಸುತ್ತಿದ್ದಳು. ಈ ವೇಳೆ, ಬಾಲಕಿಯ ಪಕ್ಕದ ಆಸನದಲ್ಲಿ ಕುಳಿತಿದ್ದ ಆರೋಪಿ ಪ್ರಯಾಣದ ಸಮಯದಲ್ಲಿ ಬಾಲಕಿಗೆ ತಿಂಡಿ-ನೀರು ಕೇಳುವ ನೆಪದಲ್ಲಿ ಆಕೆಯ ಖಾಸಗಿ ಅಂಗಾಂಗಗಳನ್ನು ಮುಟ್ಟಿ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಬಾಲಕಿಯ ತಂದೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.  

ಬಾಲಕಿಯ ತಾಯಿ ತಿಂಡಿ-ನೀರು ಏನು ಬೇಡ ಎಂದು ಆರೋಪಿಗೆ ಹೇಳಿದ್ದರು ಕೂಡ ಆತ ಪದೇ ಪದೇ ತಿಂಡಿ-ನೀರು ಕೇಳುವ ನೆಪದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡುವುದನ್ನು ಮುಂದುವರೆಸಿದ್ದಾನೆ. ಬಳಿಕ ಬಾಲಕಿ ತಾಯಿ ವಿಮಾನದ ಸಿಬ್ಬಂದಿಗೆ ಈ ಬಗ್ಗೆ ತಿಳಿಸಿದ್ದಾರೆ. ಸಿಬ್ಬಂದಿ ಬಾಲಕಿ ಕುಳಿತ ಆಸನದಿಂದ ಮತ್ತೊಂದು ಆಸನಕ್ಕೆ ಸ್ಥಳಾಂತರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ₹500 ಕೋಟಿ ಅಕ್ರಮ ಆಸ್ತಿ | ತಹಶೀಲ್ದಾರ ಅಜಿತ್ ಕುಮಾರ್ ರೈ ಅಮಾನತು ಮಾಡಿದ ಕಂದಾಯ ಇಲಾಖೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಬಳಿಕ ಬಾಲಕಿಯ ಪೋಷಕರು ಸಿಬ್ಬಂದಿಯ ಸಲಹೆ ಮೇರೆಗೆ ವಿಮಾನ ನಿಲ್ದಾಣದ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಬಾಲಕಿಯ ಪೋಷಕರು ನೀಡಿರುವ ದೂರು ಆಧರಿಸಿ ಆರೋಪಿ ಮುರುಗೇಶನ್‌ನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಮನಹಳ್ಳಿಯ ಸುಷ್ಮಗೆ ಸಂದ ಡಾಕ್ಟರೇಟ್ ಗೌರವ

ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ...

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...