ಬೆಂಗಳೂರು | ಅರಣ್ಯ ಅಧಿಕಾರಿಗಳನ್ನು ಸತಾಯಿಸಿ ದಾರುಣ ಅಂತ್ಯ ಕಂಡ ಚಿರತೆ

Date:

ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ಹೊರವಲಯದಲ್ಲಿ ಕಳೆದ ಮೂರು ದಿನಗಳಿಂದ ಸುತ್ತಾಡುತ್ತಿದ್ದ ಚಿರತೆಯನ್ನು ಅರಣ್ಯ ಸಿಬ್ಬಂದಿ ಸೆರೆಹಿಡಿದಿದ್ದಾರೆ. ಆದರೆ, ಚಿರತೆ ಹಿಡಿಯಲು ಅರಣ್ಯ ಅಧಿಕಾರಿಗಳು ಅರವಳಿಕೆ ಚುಚ್ಚು ಮದ್ದನ್ನು ಶೂಟ್‌ ಮಾಡಿದ್ದರು. ಇದರಿಂದ, ನಿತ್ರಾಣಗೊಂಡಿದ್ದ ಚಿರತೆ ಕೊನೆಯುಸಿರೆಳೆದಿದೆ.

ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಚಿರತೆ, ನಗರದ ನಿವಾಸಿಗಳಲ್ಲಿ ಆತಂಕ ಮೂಡಿಸಿತ್ತು. ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯ ಅಧಿಕಾರಿಗಳು ಹರಸಾಹಸ ಪಡುತ್ತಿದ್ದರು. ಚಿರತೆ ಸೆರೆಗಾಗಿ ಬೋನುಗಳನ್ನು ಇರಿಸಿದ್ದರು. ಆದರೆ, ಚಿರತೆ ಬೋನಿಗೆ ಬಿದ್ದಿರಲಿಲ್ಲ.

ಮೂರು ದಿನಗಳಲ್ಲಿ ಮೂವರ ಮೇಲೆ ಚಿರತೆ ದಾಳಿ ಮಾಡಿತ್ತು. ಹೀಗಾಗಿ, ಅರಣ್ಯ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಅಸಮಾಧಾನ ಹೊರ ಹಾಕಿದ್ದರು. ಚಿರತೆಯನ್ನು ಹೇಗಾದರೂ ಹಿಡಿಯಲೇಬೇಕೆಂಬ ಒತ್ತಡ ಅಧಿಕಾರಿಗಳ ಮೇಲಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹಳೆಯ ಕಟ್ಟಡಗಳು ಹಾಗೂ ಖಾಲಿ ಜಾಗಗಳಲ್ಲಿ ಬೆಳದಿದ್ದ ಪೊದೆಗಳಲ್ಲಿ ಚಿರತೆ ಅವಿತುಕೊಂಡಿತ್ತು. ಜೆಸಿಬಿಯಿಂದ ಪೊದೆಗಳನ್ನು ತೆರವುಗೊಳಿಸಿದ್ದ ಅಧಿಕಾರಿಗಳು ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಲು ಶೂಟ್ ಮಾಡಿದ್ದರು.

ಬಳಿಕ, ಚರತೆಯನ್ನು ಸೆರೆಹಿಡಿದು ಜೈವಿಕ ಉದ್ಯಾನವನಕ್ಕೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿತ್ತು. ಆದರೆ, ಅರವಳಿಕೆ ನೀಡಲು ಶೂಟ್‌ ಮಾಡಿದ್ದರಿಂದ ಗಾಯಗೊಂಡಿದ್ದ ಚಿರತೆ ಸಾವನ್ನಪ್ಪಿದೆ. ಬನ್ನೇರುಘಟ್ಟ ಪಾರ್ಕ್‌ ಆಸ್ಪತ್ರೆಯಲ್ಲಿ ಚಿರತೆಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕನ್ನಡ ಹಾಡು ಹಾಕಿದ್ದಕ್ಕೆ ಪಬ್ ಮ್ಯಾನೇಜರ್ ಮೇಲೆ ಹಲ್ಲೆ

“ಈ ಹಿಂದಿನ ಕಾರ್ಯಾಚರಣೆಯಲ್ಲಿ ಚಿರತೆ ಸೆರೆ ಹಿಡಿಯುವ ವೇಳೆ ಮೂವರ ಮೇಲೆ ದಾಳಿ ಮಾಡಿತ್ತು. ಈಗ ಕಾರ್ಯಾಚರಣೆ ಮಾಡುವ ಸಂದರ್ಭದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ ಮಾಡಲು ಬಂದಿದ್ದು, ಶೂಟ್ ಮಾಡಲಾಗಿದೆ” ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

“ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಚಿರತೆ ಸಾವನ್ನಪ್ಪಿದೆ. ಚಿರತೆಯ ಸಾವು ತುಂಬಾ ನೋವುಂಟು ಮಾಡಿದೆ. ಪ್ರಾಣಿಗೆ ಬಲವಾದ ಟ್ರ್ಯಾಂಕ್ವಿಲೈಸರ್ ಮೂಲಕ ಗುಂಡು ಹಾರಿಸಲಾಗಿದೆ ಎನ್ನಲಾಗಿದೆ. ಇದರಿಂದಾಗಿ ಅದು ಸಂಪೂರ್ಣವಾಗಿ ದುರ್ಬಲಗೊಳ್ಳುತ್ತದೆ. ಚಿರತೆ ಕಳೆದ 4 ದಿನಗಳಿಂದ ಏನನ್ನೂ ತಿಂದಿಲ್ಲ. ಇದು ದುರಂತ ಅಂತ್ಯ” ಎಂದು ನೆಟ್ಟಿಗರು ಕಂಬನಿ ಮಿಡಿದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕನ್ನಡ ನಾಮಫಲಕ ಹಾಕಿ ಇಂಗ್ಲಿಷ್ ಕಲಿಸುತ್ತಿರುವುದು ಆತಂಕ ತರಿಸಿದೆ : ಡಾ.ಪುರುಷೋತ್ತಮ ಬಿಳಿಮಲೆ

ನಮ್ಮೆಲ್ಲರ ನಿರಾಸಕ್ತಿ, ಅನ್ಯ ಭಾಷೆಯ ವ್ಯಾಮೋಹದಿಂದ ನಮ್ಮ ಕನ್ನಡ ಭಾಷೆ ಸೊರಗುತ್ತಿದೆ....

ಮಂಡ್ಯ | ‘ಸೊಳ್ಳೆ ಉತ್ಪಾದನಾ ಕೇಂದ್ರ’ವಾದ ವೈದ್ಯಕೀಯ ಕಾಲೇಜು; ಕಣ್ಮುಚ್ಚಿ ಕುಳಿತ ಅಧಿಕಾರಿಗಳು!

ಇಡೀ ರಾಜ್ಯದಲ್ಲಿ ಡೆಂಘೀ ಜ್ವರ ಹರಡುತ್ತಾ ಇರುವಾಗ ನೈರ್ಮಲ್ಯ ಕಾಪಾಡಿ, ನೀರು...

ವಿಜಯಪುರ | ಎನ್‌ಎಸ್‌ಎಸ್ ಸ್ವಯಂ ಸೇವಕರಲ್ಲಿ ತಾಳ್ಮೆ, ಶಿಸ್ತಿನ ಜೊತೆಗೆ ಧೈರ್ಯ ತುಂಬುತ್ತದೆ: ಡಾ.ಪ್ರತಾಪ್ ಲಿಂಗಯ್ಯ

"ಎನ್‌ಎಸ್‌ಎಸ್ ಎಂಬುದು ಮನುಷ್ಯನಲ್ಲಿ ಸಹನೆ, ತಾಳ್ಮೆ ಹಾಗೂ ಶಿಸ್ತಿನ ಜೊತೆಗೆ ಧೈರ್ಯವನ್ನು...

ಬಸವರಾಜ ರಾಯರೆಡ್ಡಿ ಮಾಹಿತಿ ತಿಳಿದುಕೊಂಡು ಮಾತನಾಡಲಿ: ದಿನೇಶ್ ಗೂಳಿಗೌಡ

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂಬ ಮುಖ್ಯಮಂತ್ರಿಗಳ ಆರ್ಥಿಕ...