ಮೇ 15ರಂದು ಬೆಂಗಳೂರು ಕೃಷಿ ವಿವಿ ಘಟಿಕೋತ್ಸವ: ಡಾ. ಎಸ್‌.ವಿ.ಸುರೇಶ

Date:

- Advertisement -

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ 60 ವರ್ಷ ಪೂರ್ಣಗೊಳಿಸಿ ವಜ್ರ ಮಹೋತ್ಸವ ಆಚರಿಸುತ್ತಿರುವುದು ಸಂತಸದ ವಿಷಯವಾಗಿದ್ದು, ಈ ಸಂದರ್ಭದಲ್ಲಿ 59ನೇ ಘಟಿಕೋತ್ಸವ ಸಮಾರಂಭ 2025ರ ಮೇ 15ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ಜಿ.ಕೆ.ವಿ.ಕೆ. ಆವರಣದ ಡಾ. ಬಾಬು ರಾಜೇಂದ್ರ ಪ್ರಸಾದ್‌ ಅಂತರ್ ರಾಷ್ಟ್ರೀಯ ಸಭಾಂಗಣದಲ್ಲಿ ನಡೆಯಲಿದೆ ಎಂದು ವಿವಿ ಕುಲಪತಿ ಡಾ. ಎಸ್‌.ವಿ.ಸುರೇಶ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಬೆಂಗಳೂರು ಪ್ರೆಸ್‌ ಕ್ಲಬ್‌ನಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರ್‍‌ಚಂದ್‌ ಗೆಹ್ಲೋಟ್‌ ಅವರು ವಹಿಸಲಿದ್ದಾರೆ. ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಉಪಸ್ಥಿತರಿರುವರು. ಇಪ್ಕೋ ವ್ಯವಸ್ಥಾಪಕ ನಿರ್ದೇಶಕ ಡಾ. ಯು.ಎಸ್‌.ಅವಸ್ಥಿ ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ. ಪ್ರಸಕ್ತ ಸಾಲಿನ ವಿವಿ ಸಾಧನೆಯನ್ನು ನಾನು ಸಭೆಗೆ ಪರಿಚಯಿಸಲಿದ್ದೇನೆ ಎಂದು ತಿಳಿಸಿದರು.

ಘಟಿಕೋತ್ಸವದಲ್ಲಿ 2023-24ನೇ ಶೈಕ್ಷಣಿಕ ವರ್ಷದಲ್ಲಿ ತೇರ್ಗಡೆಯಾದ 1,271 ವಿದ್ಯಾರ್ಥಿಗಳಿಗೆ ವಿವಿಧ ಸ್ನಾತಕ ಹಾಗೂ ಸ್ನಾತಕೋತ್ತರ ವಿಷಯಗಳಲ್ಲಿ ಪದವಿ ಪ್ರದಾನ ಮಾಡಲಾಗುವುದು. ಅವರಲ್ಲಿ 871 ವಿದ್ಯಾರ್ಥಿಗಳು ವಿವಿಧ ಸ್ನಾತಕ ಪದವಿಗಳನ್ನು, 311 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಗಳನ್ನು ಹಾಗೂ 89 ವಿದ್ಯಾರ್ಥಿಗಳು ಡಾಕ್ಟರೇಟ್ ಪದವಿಗಳನ್ನು ಪಡೆಯಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಸಮಾರಂಭದಲ್ಲಿ ಡಾಕ್ಟರ್‍‌ ಆಫ್‌ ಫಿಲಾಸೊಫಿ ಪದವಿಯಲ್ಲಿ ಒಟ್ಟು 30 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಗುವುದು. ಅದರಲ್ಲಿ 13 ವಿದ್ಯಾರ್ಥಿನಿಯರು ಹಾಗೂ 3 ವಿದ್ಯಾರ್ಥಿಗಳು ಕೃಷಿ ವಿವಿಯ 14 ಚಿನ್ನದ ಪದಕಗಳನ್ನು, 10 ದಾನಿಗಳ ಚಿನ್ನದ ಪದಕಗಳು, 5 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರ ಹಾಗೂ 1 ಆವರಣದ ಚಿನ್ನದ ಪದಕಗಳನ್ನು ಹಂಚಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಸ್ನಾತಕೋತ್ತರ ಪದವಿಯಲ್ಲಿ ಒಟ್ಟು 62 ಚಿನ್ನದ ಪದಕಗಳನ್ನು ಪ್ರದಾನ ಮಾಡಲಿದ್ದು, ಅದರಲ್ಲಿ 23 ವಿದ್ಯಾರ್ಥಿನಿಯರು ಹಾಗೂ 5 ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾನಿಲಯ ನೀಡುವ 17 ಚಿನ್ನದ ಪದಕಗಳು ಹಾಗೂ 7 ಆವರಣದ ಚಿನ್ನದ ಪದಕಗಳನ್ನು, 25 ದಾನಿಗಳ ಚಿನ್ನದ ಪದಕಗಳು ಹಾಗೂ 13 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಹಂಚಿಕೊಂಡಿರುತ್ತಾರೆ ಎಂದರು.

ಇದಲ್ಲದೆ ಸ್ನಾತಕ ಪದವಿಯಲ್ಲಿ ಒಟ್ಟು 58 ಚಿನ್ನದ ಪದಕಗಳನ್ನು ಪ್ರದಾನ ಮಾಡಲಿದ್ದು, ಇದರಲ್ಲಿ 13 ವಿದ್ಯಾರ್ಥಿನಿಯರು ಹಾಗೂ 6 ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾನಿಲಯ ನೀಡುವ 6 ಚಿನ್ನದ ಪದಕಗಳು, 4 ಆವರಣದ ಚಿನ್ನದ ಪದಕಗಳು, 1 ಕೃಷಿ ವಿವಿಯ ಕ್ರೀಡಾ ಚಿನ್ನದ ಪದಕ, 41 ದಾನಿಗಳ ಚಿನ್ನದ ಪದಕಗಳು ಹಾಗೂ 6 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಹಂಚಿಕೊಂಡಿರುತ್ತಾರೆ ಎಂದರು.

ಘಟಿಕೋತ್ಸವ ಸಮಾರಂಭದಲ್ಲಿ ಒಟ್ಟಾರೆ 150 ಚಿನ್ನದ ಪದಕ ಹಾಗೂ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ವಿದ್ಯಾರ್ಥಿಗಳು ಪಡೆಯಲಿದ್ದು ಅದರಲ್ಲಿ 49 ವಿದ್ಯಾರ್ಥಿನಿಯರಿಗೆ ವಿಶ್ವವಿದ್ಯಾನಿಲಯದ 29 ಚಿನ್ನದ ಪದಕ, 66 ದಾನಿಗಳ ಚಿನ್ನದ ಪದಕ, 9 ಆವರಣದ ಚಿನ್ನದ ಪದಕ ಹಾಗೂ 19 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಅದರಂತೆ 14 ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾನಿಲಯದ 8 ಚಿನ್ನದ ಪದಕ, 10 ದಾನಿಗಳ ಚಿನ್ನದ ಪದಕ ಹಾಗೂ 5 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು, 3 ಆವರಣದ ಚಿನ್ನದ ಪದಕಗಳು ಹಾಗೂ 1 ಕೃಷಿ ವಿವಿಯ ಕ್ರೀಡಾ ಚಿನ್ನದ ಪದಕಗಳನ್ನು ವಿತರಿಸಲಾಗುವುದು ಎಂದರು.

ಒಟ್ಟು 63 ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾನಿಲಯದ 50 ಚಿನ್ನದ ಪದಕಗಳನ್ನು, 76 ದಾನಿಗಳ ಚಿನ್ನದ ಪದಕಗಳನ್ನು ಹಾಗೂ 24 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ವಿತರಿಸಲಾಗುವುದು. ಬೆಂಗಳೂರು ಜಿಕೆವಿಕೆ ಕೃಷಿ ಕಾಲೇಜಿನ ವಿದ್ಯಾರ್ಥಿನಿ ದೀಪ್ತಿ ಟಿ.ಎಲ್‌. ಅತೀ ಹೆಚ್ಚು ಅಂದರೆ 13 ಚಿನ್ನದ ಪದಕಗಳು 4 ದಾನಿಗಳ ಪ್ರಮಾಣ ಪತ್ರಗಳನ್ನು ಪಡೆದುಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಐಎಎಸ್‌ ಅಧಿಕಾರಿ ವಿ.ಬಾಲಸುಬ್ರಮಣಿಯನ್‌ ಮತ್ತು ಕೃಷಿ ವಿಜ್ಞಾನಿ ಯೋಗೇಂದ್ರ ಕುಮಾರ್‍‌ ಅವರಿಗೆ ಗೌರವ ಡಾಕ್ಟರೇಟ್‌ ನೀಡಿ ಗೌರವಿಸಲಾಗವುದು ಎಂದರು.

ಸುದ್ದಿಗೋಷ್ಠಿಯಲ್ಲಿ ವಿವಿಯ ಕುಲಸಚಿವ ಡಾ. ಕೆ.ಸಿ.ನಾರಾಯಣಸ್ವಾಮಿ, ಸಹ ವಿಸ್ತರಣಾ ನಿದರ್ದೇಶಕ ಡಾ. ಕೆ.ಸಿ.ರಘುಪ್ರಸಾದ್‌, ವಿಸ್ತರಣಾ ನಿದರ್ದೇಶಕ ಡಾ. ವೈ.ಎನ್‌.ಶಿವಲಿಂಗಯ್ಯ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

ಎಐಯಿಂದ ಬರಹಗಾರರ ಸ್ಥಾನ ಉಳಿಯುತ್ತದೆಯೇ? ಎಂಬುದಲ್ಲ. ಬದಲಾಗಿ, ಎಐಯ ನೆರವಿನ ನಡುವೆಯೂ...

UPI ಮೇಲಿನ ಶುಲ್ಕದ ನೆರಳು: ಜನರ ವಿಶ್ವಾಸವಿಲ್ಲದ ಡಿಜಿಟಲ್ ಕ್ರಾಂತಿ ಸಾಧ್ಯವೇ?

ಡಿಜಿಟಲ್ ಭಾರತವೆಂದರೆ ಕೇವಲ ಮೊಬೈಲ್‌ನಲ್ಲಿ ಕಾಣಿಸುವ QR ಕೋಡ್ ಅಲ್ಲ; ಬದಲಿಗೆ...

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ...

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆಗಳು ಕಂಡುಬಂದಿವೆ.  ಕಳೆದ ಎರಡು ದಿನಗಳಿಂದ ಬೆಂಗಳೂರು...