ಬೆಂಗಳೂರು ವಿಮಾನ ನಿಲ್ದಾಣದ ಭದ್ರತಾ ತಪಾಸಣೆಗೆ ನೂತನ ತಂತ್ರಜ್ಞಾನ ಅಳವಡಿಕೆ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಪ್ರಯಾಣಿಕರು ಭದ್ರತಾ ತಪಾಸಣೆಯ ಸಲುವಾಗಿ ಹೆಚ್ಚಿನ ಸಮಯ ಕಾಯಬೇಕಾದ ಸ್ಥಿತಿ ಇದೆ. ಈ ಸಮಸ್ಯೆಯನ್ನು ದೂರ ಮಾಡಲು ಏರ್‌ಪೋರ್ಟ್‌ ಅಧಿಕಾರಿಗಳು ಇದೀಗ, ಭದ್ರತಾ ತಪಾಸಣೆಗಾಗಿ ಸುಧಾರಿತ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಮುಂದಾಗಿದ್ದಾರೆ.

- Advertisement -

ಪ್ರಯಾಣಿಕರು ಟರ್ಮಿನಲ್ 2ಗೆ ತೆರಳಿದಾಗ ಭದ್ರತಾ ತಪಾಸಣೆಗಾಗಿಯೇ ಹಲವು ಗಂಟೆಗಳ ಸಮಯ ಹಿಡಿಯುತ್ತದೆ. ಭದ್ರತಾ ತಪಾಸಣೆ ನಡೆಸುವ ವೇಳೆ, ಪ್ರಯಾಣಿಕರ ಬ್ಯಾಗ್ ಚೆಕ್ ಮಾಡುವಾಗ ಫೋನ್, ಲ್ಯಾಪ್‌ಟಾಪ್ ಸೇರಿದಂತೆ ಇನ್ನಿತರ ಎಲೆಕ್ಟ್ರಾನಿಕ್ ಸಾಧನಗಳನ್ನು ಭದ್ರತಾ ಸಿಬ್ಬಂದಿಗೆ ತೆಗೆದು ತೋರಿಸಬೇಕಾಗಿತ್ತು. ಇದರಿಂದ ಪ್ರಯಾಣಿಕರಿಗೆ ಕಿರಿಕಿರಿ ಉಂಟಾಗುತ್ತಿತ್ತು. ಈ ತೊಂದರೆಯನ್ನು ತಪ್ಪಿಸಲು ಕೆಂಪೇಗೌಡ ವಿಮಾನ ನಿಲ್ದಾಣ ಸಂಸ್ಥೆ ಮೊದಲ ಬಾರಿಗೆ ಕಂಪ್ಯೂಟರ್ ಟೊಮೊಗ್ರಫಿ ಎಕ್ಸ್-ರೇ (ಸಿಟಿಎಕ್ಸ್‌) ಯಂತ್ರ ಸ್ಥಾಪಿಸಿದೆ. ಇದರಿಂದ ಪ್ರಯಾಣಿಕರ ಸಮಯ ಮತ್ತಷ್ಟು ಉಳಿತಾಯವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಪ್ರಯಾಣಿಕರ ಬ್ಯಾಗ್‌ನಿಂದ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆಯದಂತೆ ಸ್ಕ್ಯಾನ್ ಮಾಡಲು ಈ ನೂತನ ತಂತ್ರಜ್ಞಾನ ಸಹಾಯ ಮಾಡುತ್ತದೆ. ಭದ್ರತಾ ತಪಾಸಣೆಗಾಗಿ ಹೆಚ್ಚು ಸಮಯ ವ್ಯಯಿಸುವ ಸಮಸ್ಯೆ ತಪ್ಪುತ್ತದೆ. ಡಿಸೆಂಬರ್‌ನಿಂದ ಈ ಯೋಜನೆಯನ್ನು ಜಾರಿಗೆ ತರುವ ಬಗ್ಗೆ ನಿಲ್ದಾಣ ಸಂಸ್ಥೆ ಯೋಜನೆ ರೂಪಿಸಿದೆ.

ಸದ್ಯ ಸಿಟಿಎಕ್ಸ್ ಯಂತ್ರಗಳ ಪ್ರಯೋಗಾತ್ಮಕ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಮೊದಲ ಹಂತದಲ್ಲಿ ದೇಶೀಯ ಗೇಟ್‌ಗಳಲ್ಲಿ ಮಾತ್ರ ನಿಯೋಜಿಸಲಾಗುವುದು ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೇಕಿಲ್ಲ ಕ್ಯಾಂಪಸ್ ಸೆಲೆಕ್ಷನ್?: ಎಎಪಿ ಅಭಿಯಾನ

“ಈ ನೂತನ ಯಂತ್ರ ಅಟೋಮೆಟಿಕ್ ಟ್ರೆ ರಿಟ್ರೈವಲ್ ಸಿಸ್ಟಮ್ ವ್ಯವಸ್ಥೆ ಹೊಂದಿದೆ. ಮಾನವ ದೇಹವನ್ನು ಸಂಪೂರ್ಣ ಸ್ಕ್ಯಾನ್ ಮಾಡುತ್ತದೆ. ಪ್ರಯಾಣಿಕರ ಬ್ಯಾಗ್‌ ಅನ್ನು ಈ ತಂತ್ರಜ್ಞಾನ ಬಳಸಿ ತಪಾಸಣೆ ಮಾಡಬಹುದು. ಇದು ಭದ್ರತಾ ತಪಾಸಣೆಗೆ ಬೇಕಾದ ಟ್ರೇಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ” ಎಂದು ವಿಮಾನ ನಿಲ್ದಾಣದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯೊಬ್ಬರು ತಿಳಿಸಿದರು.

ಈ ನೂತನ ತಂತ್ರಜ್ಷಾನವೂ ದ್ರವ ಪದಾರ್ಥಗಳು, ಸೇಂಟ್ ಹಾಗೂ ಜೆಲ್‌ಗಳನ್ನು ಪತ್ತೆ ಮಾಡುತ್ತದೆ. ಸ್ಪೋಟಕ ವಸ್ತುಗಳನ್ನು ಗುರುತಿಸಿ ಅಲಾರಾಮ್ ಹೊಡೆಯುತ್ತದೆ. ಇದರ 3ಡಿ ಚಿತ್ರವನ್ನು ಕ್ಲಿಕ್‌ ಮಾಡಿ ಸಿಬ್ಬಂದಿಗೆ ಕಳುಹಿಸುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....