ಬೆಂಗಳೂರು | ಹಿರಿಯ ಅಧಿಕಾರಿಗಳ ಕಿರುಕುಳ ಆರೋಪ; ಯುವಕ ಆತ್ಮಹತ್ಯೆ

Date:

ಹಿರಿಯ ಅಧಿಕಾರಿಗಳ ಕಿರುಕುಳ ತಾಳಲಾರದೆ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

- Advertisement -

ನಗರದ ಎಚ್‌ಎಎಲ್‌ ನಿವಾಸಿ ವಿವೇಕ್‌ ಕುಮಾರ್ ಮೃತ ದುರ್ದೈವಿ. ತಮ್ಮ ಆತ್ಮಹತ್ಯೆಗೆ ಕಾರಣವೇನೆಂದು ವಿವರಿಸಿ ವಿಡಿಯೋ ಮಾಡಿರುವ ವಿವೇಕ್, ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಬಳಿಕ, ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಅವರು ಲೈಫ್ ಸ್ಟೈಲ್ ಪ್ರೈವೇಟ್ ಲಿಮಿಟೆಡ್‍ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು. ಅವರಿಗೆ ಕೆಲಸದ ಸಮಯದಲ್ಲಿ ಮುವರು ಹಿರಿಯ ಅಧಿಕಾರಿಗಳು ಅವರ ಜಾತಿಯನ್ನು ಉಲ್ಲೇಖಿಸಿ, ಪದೇ ಪದೇ ಕಿರುಕುಳ ನೀಡುತ್ತಿದ್ದರು. ಆ ಬಗ್ಗೆ ಮೂವರನ ವಿರುದ್ಧವೂ ಕಚೇರಿಯ ಆಡಳಿತಕ್ಕೆ ವಿವೇಕ್‌ ದೂರು ನೀಡಿದ್ದರು. ಆದರೆ, ದೂರು ನೀಡಿದ ಕೆಲವೇ ಗಂಟೆಗಳಲ್ಲಿ ವಿವೇಕ್‌ ಆತ್ಮಹತ್ಯೆ ಮಾಡಿಕೊಂಡಿದ್ದರು.

ನಾನು ಕೆಳಜಾತಿಯವನು ಎಂಬ ಕಾರಣಕ್ಕೆ ಸಹೋದ್ಯೋಗಿಗಳಾದ ಮಾಲತಿ ಎಸ್ ಮತ್ತು ನಿತೀಶ್ ಕುಮಾರ್ ನನಗೆ ಕಿರುಕುಳ ನೀಡುತ್ತಿದ್ದಾರೆ. ಕಂಪನಿಯ ಎಚ್‌ಆರ್‌ ಕುಮಾರ್‌ ಸೂರಜ್‌ ಅವರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮೇಲಧಿಕಾರಿಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆಯ ಹಾದಿ ಹಿಡಿದಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

ವಿವೇಕ್‌ ತಂದೆ ಎಚ್‌ಎಎಲ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿದ್ದಾರೆ. ಅವರ ದೂರಿನ ಆಧಾರದ ಮೇಲೆ, ಕಂಪನಿಯ ವ್ಯವಸ್ಥಾಪಕಿ ಮಾಲತಿ ಮತ್ತು ಸಹೋದ್ಯೋಗಿಗಳಾದ ಕುಮಾರ್ ಸೂರಜ್ ಮತ್ತು ನಿತೇಶ್ ಕುಮಾರ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಎಫ್ಐಆರ್ ಪ್ರಕಾರ, ವಿವೇಕ್ ಹಲವಾರು ತಿಂಗಳುಗಳಿಂದ ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದರು. ಅವರ ಮೇಲೆ ಸಹೋದ್ಯೋಗಿಗಳು ಜಾತಿ ಆಧಾರಿತ ನಿಂದನೆ ಮಾಡಿದ್ದರು. ಕಚೇರಿಯಲ್ಲಿನ ಹಿರಿಯ ಅಧಿಕಾರಿಗಳ ಬಳಿ ತಮ್ಮ ಅಳಲನ್ನು ತೋಡಿಕೊಂಡರೂ, ಯಾವುದೇ ಕ್ರಮ ಕೈಗೊಂಡಿಲ್ಲ. ಮನನೊಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿತೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರಿಗಾಗಿ ಶೋಧ ನಡೆಸುತ್ತಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಿಲ್ಲಾ ಕಾಂಗ್ರೆಸ್‌ನಿಂದ ಅ.5ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ: ಜಿಲ್ಲಾ‌ಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಅವೈಜ್ಞಾನಿಕವಾಗಿದ್ದು, ಮತದಾರರ ಹೆಸರನ್ನು...

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ....

ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ...

ಸಾಗರ | ʻಮೀಶೋ ಲಕ್ಕಿ ಡ್ರಾʼ ಆಮಿಷವೊಡ್ಡಿ ಮಹಿಳೆಗೆ ರೂ.23 ಲಕ್ಷ ವಂಚನೆ

ಆನ್‌ಲೈನ್ ಶಾಪಿಂಗ್ ವೇದಿಕೆ ಮೀಶೋ ಹೆಸರಿನಲ್ಲಿ ಲಕ್ಕಿ ಡ್ರಾ ಆಮಿಷವೊಡ್ಡಿ ಸಾಗರದ...