ಬೆಂಗಳೂರು | ಗಾಂಜಾ ಮಾರಾಟ ಆರೋಪ ; ಮೂವರು ಮಹಿಳೆಯರ ಬಂಧನ

Date:

  • 7.9 ಕೆ.ಜಿ ಗಾಂಜಾ ಮತ್ತು ₹4 ಸಾವಿರ ನಗದು ಜಪ್ತಿ ಮಾಡಿದ ಪೊಲೀಸರು
  • ಪರಾರಿಯಾದ ಆರೋಪಿ ದರ್ಶನ್ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿರುವ ಪೊಲೀಸರು

ಬೆಂಗಳೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರು ಮಹಿಳೆಯರನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

- Advertisement -

ನಗರದ ಐಟಿಸಿ ಕಾಲೋನಿಯ ನಿವಾಸಿಗಳಾದ ಪ್ರೇಮಾ, ಸುನೀತ ಹಾಗೂ ಮುತ್ತ್ಯಾಲಮ್ಮ ಬಂಧಿತ ಆರೋಪಿಗಳು. ಇವರು ಹೊರ ರಾಜ್ಯದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಅವರಿಂದ, 7.9 ಕೆ.ಜಿ ಗಾಂಜಾ ಮತ್ತು ₹4 ಸಾವಿರ ನಗದು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ ಪರ-ವಿರೋಧ ಚರ್ಚೆಗಳಿಗೆ ವೇದಿಕೆ ಸೃಷ್ಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕುಗ್ಗಿಸಲು ಮತ್ತು ಅವರ ತೇಜೋವಧೆ ಮಾಡಲೆಂದೇ ಈ...

ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು...

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು. ರಾಜಕೀಯದಲ್ಲಿ...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು;...

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

ಪ್ರೇಮಾ ಮತ್ತು ಸುನೀತ ಮೂಲತಃ ಜಾರ್ಖಂಡ್‌ನವರಾಗಿದ್ದಾರೆ. ಅವರು ಕಳೆದ ಕೆಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ಮುತ್ಯಾಲಮ್ಮ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದರು. ಆಗಾಗ ಜಾರ್ಖಂಡ್‌ಗೆ ಹೋಗಿ ಬರುತ್ತಿದ್ದ ಇಬ್ಬರೂ, ಗಾಂಜಾವನ್ನು ತಂದು, ಮುತ್ಯಾಲಮ್ಮ ಮತ್ತು ಆಕೆಯ ಮಗ ದರ್ಶನ್ ನೆರವಿನಿಂದ ನಗರದಲ್ಲಿ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

“ಇಬ್ಬರೂ ಮಹಿಳೆರಿಂದ ಮುತ್ಯಾಲಮ್ಮ ಬಾಡಿಗೆ ಪಡೆಯುತ್ತಿರಲಿಲ್ಲ. ಬದಲಾಗಿ ಗಾಂಜಾ ಪಡೆಯುತ್ತಿದ್ದರು. ಅದನ್ನು ಮಾರಿ, ಹಣ ಸಂಪಾದಿಸುತ್ತಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೊಸಕರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ; ಅಧಿಕಾರಿಗಳ ಅಮಾನತು

ಸದ್ಯ, ಮೂವರು ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ದರ್ಶನ್ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಡಿಸಿಎಂ ಡಾ. ಜಿ.ಪರಮೇಶ್ವರ ಆರೋಗ್ಯ ಸ್ಥಿರ; ನಾಯಕರ ಭೇಟಿ

ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಉಸಿರಾಟದ ತೊಂದರೆ ಕಾಣಿಸಿಕೊಂಡ...

ಬೆಂಗಳೂರಿನ ‘ಗೃಹ ನಿರ್ಮಾಣ ಸಂಘ’ದ 59 ಎಕರೆ ಭೂಸ್ವಾಧೀನ ರದ್ದು: ಜಮೀನು ಮೂಲ ಮಾಲೀಕರಿಗೆ ಮರಳಿಸಲು ಸುಪ್ರೀಂ ಆದೇಶ

ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ನೆಲಕದರೇನಹಳ್ಳಿ ಗ್ರಾಮದಲ್ಲಿ 'ಗೃಹ ನಿರ್ಮಾಣ...

ನೆಲಮಂಗಲ | ಶಿಕ್ಷಣದ ಜೊತೆಗೆ ಕೌಶಲ್ಯ ಮತ್ತು ಸಮಾಜಸೇವೆಯ ಮನೋಭಾವ ಬೆಳೆಸಿಕೊಳ್ಳಿ: ಚಿಕ್ಕಮಾರನಹಳ್ಳಿ ಅನಂತ್

ಯುವಜನರು ಶಿಕ್ಷಣದ ಜೊತೆಗೆ ಜೀವನಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಸಮಾಜದ ಅಭಿವೃದ್ಧಿಯಲ್ಲಿ...

ಬೆಂಗಳೂರು | SIR ವಿರುದ್ಧ ಮೊಳಗಿದ ಘೋಷ; ಪ್ರಜಾತಂತ್ರದ ಉಳಿವಿಗಾಗಿ ‘ಜನತಾ ಮೆರವಣಿಗೆ’

ದೇಶದ ಮತದಾರರ ಮೇಲೆ ಗ್ಯಾನೇಶ್ ಕುಮಾರ್ (ಚುನಾವಣಾ ಆಯೋಗ) ಹೇರಿರುವ ಎಸ್‌ಐಆರ್...