ಬೆಂಗಳೂರು | ಕನ್ನಡಿಗರ ಭಾವನೆಗಳೊಂದಿಗೆ ಅಮೂಲ್‌ ಆಟವಾಡುತ್ತಿದೆ; ಕರವೇ ಆರೋಪ

Date:

  • ಅಮೂಲ್ ಹಾಲು ಮಾರಾಟದ ವಿರುದ್ಧ ಸಿಡಿದೆದ್ದ ಕರವೇ
  • ಅಮೂಲ್ ಹಾಲು ಹಾಗೂ ಉತ್ಪನ್ನಗಳನ್ನು ಬೀದಿಗೆಸೆದು ಪ್ರತಿಭಟನೆ

ಕೇಂದ್ರ ಸರ್ಕಾರ ನಂದಿನಿಯನ್ನು ಅಮೂಲ್ ನೊಂದಿಗೆ ವಿಲೀನಗೊಳಿಸಲು ಪ್ರಯತ್ನಿಸುತ್ತಿದೆ. ಇದೆನಾದರೂ ನಡೆದರೆ ಕರ್ನಾಟಕದ ಜನತೆ ದಂಗೆ ಏಳುತ್ತಾರೆ. ಅಮೂಲ್ ಸಂಸ್ಥೆ ಕನ್ನಡಿಗರ ಭಾವನೆಗಳೊಂದಿಗೆ ಆಟವಾಡುತ್ತಿದೆ. ಕನ್ನಡಿಗರು ಕಟ್ಟಿದ ಹೆಮ್ಮೆಯ ಸಂಸ್ಥೆ ಕೆಎಂಎಫ್ (ನಂದಿನಿ)ಅನ್ನು ನಾಶಪಡಿಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಕರವೇ ರಾಜ್ಯ ಉಪಾಧ್ಯಕ್ಷ ದಾ.ಪಿ.ಆಂಜನಪ್ಪ ಎಚ್ಚರಿಕೆ ನೀಡಿದರು.

ಬೆಂಗಳೂರಿನ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅಮೂಲ್ ಹಾಲು, ಮೊಸರು, ತುಪ್ಪ, ಬೆಣ್ಣೆ, ಚೀಜ್ ಇತ್ಯಾದಿ ಉತ್ಪನ್ನಗಳನ್ನು ಬೀದಿಗೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮೂಲ್ ಹಾಲು-ಮೊಸರು ವ್ಯಾಪಾರಕ್ಕೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದೆಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಕರವೇ ಯುವಘಟಕದ ರಾಜ್ಯಾಧ್ಯಕ್ಷ ಟಿ.ಎ.ಧರ್ಮರಾಜ್ ಗೌಡ, “ಅಮೂಲ್ ಹಠಮಾರಿತನ ಮುಂದುವರೆಸಿ ಹಾಲು-ಮೊಸರು ವ್ಯಾಪಾರ ಮುಂದುವರೆಸಿದರೆ, ಕರ್ನಾಟಕದಲ್ಲಿ ಅಮೂಲ್‌ನ ಎಲ್ಲ ಉತ್ಪನ್ನಗಳಿಗೂ ಬಹಿಷ್ಕಾರ ಹಾಕಬೇಕಾಗುತ್ತದೆ. ಅಮೂಲ್ ಐಸ್ ಕ್ರೀಂನಿಂದ ಹಿಡಿದು ಬಿಸ್ಕೆಟ್‌ವರೆಗೆ ಯಾವ ಉತ್ಪನ್ನವನ್ನೂ ಮಾರಾಟ ಮಾಡಲು ಬಿಡುವುದಿಲ್ಲ‌. ಹೀಗಾಗಿ, ಅಮೂಲ್ ಕೂಡಲೇ ಹಾಲು, ಮೊಸರು ವ್ಯಾಪಾರ ನಿಲ್ಲಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಒಂಟಿ ಮಹಿಳೆ ಹತ್ಯೆ

ಪ್ರತಿಭಟನೆ ಸಂದರ್ಭದಲ್ಲಿ ಅಮೂಲ್ ಭೂತದಹನ ಮಾಡಲು ಕಾರ್ಯಕರ್ತರು ಮುಂದಾದಾಗ ಪೊಲೀಸರು ಅಡ್ಡಿಪಡಿಸಿದರು. ವಿರೋಧದ ನಡುವೆಯೂ ಭೂತದಹನಕ್ಕೆ ಮುಂದಾದ ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

“ನೂರಾರು ಕರವೇ ಕಾರ್ಯಕರ್ತರನ್ನು ಹೇಡಿ ಸರ್ಕಾರ ಪೊಲೀಸರನ್ನು ಮುಂದೆ ಬಿಟ್ಟು ಬಂಧಿಸಿದೆ. ನಿಮ್ಮ ದೌರ್ಜನ್ಯವನ್ನು ಸವಾಲಾಗಿ ಸ್ವೀಕರಿಸಲಿದ್ದೇವೆ. ರಾಜ್ಯದ ಮೂಲೆಮೂಲೆಗಳಲ್ಲೂ ಹೋರಾಟ ಮೊಳಗಲಿದೆ. ಅದೆಷ್ಟು ಪೊಲೀಸರನ್ನು ಕಳಿಸುತ್ತೀರೋ ಕಳಿಸಲಿ” ಎಂದು ಪೊಲೀಸ್‌ ದೌರ್ಜನ್ಯದ ವಿರುದ್ಧ ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ ಸಣ್ಣೀರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಕರವೇ ಮುಖಂಡರಾದ ಶ್ವೇತಾ ಮೋಹನ್, ಗೋಮೂರ್ತಿ ಯಾದವ್, ವೀರಭದ್ರ, ಕುಮಾರ್ (ಆಟೋ ಘಟಕ), ಕೆ.ಪಿ.ನರಸಿಂಹ, ಕಾರ್ತಿಕ್, ಲಕ್ಷ್ಮಿ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಕುಸಿದು ಬಿದ್ದ ಶಾಲಾ ಕಟ್ಟಡ; ಸಮಗ್ರ ತನಿಖೆ ನಡೆಯಲಿ ಎಂದ ಎಸ್‌ಐಒ

ಕಳೆದ ಎರಡು ದಿನಗಳ ಹಿಂದೆ ಶಿವಾಜಿನಗರದಲ್ಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ...

ಬೆಂಗಳೂರು | ನ್ಯಾಯಾಂಗ ಬಡಾವಣೆಯಲ್ಲಿ ಬೀದಿ ಬದಿ ವ್ಯಾಪಾರಿಯ ಎಳನೀರು ಕಳ್ಳತನ

ಬಡ ವ್ಯಾಪಾರಿಯೊಬ್ಬರು ಮಾರಾಟ ಮಾಡಲು ತಂದಿರಿಸಿದ್ದ ಸುಮಾರು 800 ಎಳನೀರು ರಾತ್ರೋರಾತ್ರಿ...

ಬಿಬಿಎಂಪಿ | ಸಾರ್ವಜನಿಕ ಶೌಚಾಲಯ ನಿರ್ಮಿಸಲು ಸ್ಥಳಗಳ ಪಟ್ಟಿ ಸಿದ್ಧಪಡಿಸಿ: ತುಷಾರ್ ಗಿರಿನಾಥ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಬೇಕು....

ಬೆಂಗಳೂರು | ಯುವತಿ ಮೇಲೆ ಅತ್ಯಾಚಾರ – ಜಾತಿ ನಿಂದನೆ; ಆರೋಪಿ ಬಂಧನ

ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಮುದುವೆಯಾಗುವುದಾಗಿ ನಂಬಿಸಿ 7 ತಿಂಗಳ ಗರ್ಭಿಣಿಯಾದ...