ಬೆಂಗಳೂರು | ನಮ್ಮ ಮೆಟ್ರೋದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ

Date:

ಇತೀಚಿನ ದಿನಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಲೈಂಗಿಕ ಕಿರುಕುಳ ಆರೋಪಗಳು ಕೇಳಿಬರುತ್ತಿವೆ. ಇದೀಗ, ಅಶ್ಲೀಲವಾಗಿ ಯುವತಿಯೊಬ್ಬರ ಮೈ-ಕೈ ಮುಟ್ಟಿ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಮೆಟ್ರೋ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದ ಘಟನೆ ನಡೆದಿದೆ.

22 ವರ್ಷದ ಯುವತಿಯೊಬ್ಬರು ಬೆಂಗಳೂರಿನ ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ 9:40ರ ಸುಮಾರಿಗೆ ಮೆಟ್ರೋ ಹತ್ತಿದ್ದಾರೆ. ಪೀಕ್ ಅವರ್‌ನಲ್ಲಿ ಹೆಚ್ಚು ಜನಸಂದಣಿ ಕೂಡಿರುವ ಮೆಟ್ರೋದಲ್ಲಿ ಹಿಂದೆ ನಿಂತಿದ್ದ ಆರೋಪಿ ಲೋಕೇಶ್ ಯುವತಿಯ ಮೈ-ಕೈ ಅನ್ನು ಅಶ್ಲೀಲವಾಗಿ ಮುಟ್ಟಿದ್ದಾನೆ. ಇದನ್ನು ಕಂಡ ಯುವತಿ ಜೋರಾಗಿ ಕೂಗಲು ಪ್ರಾರಂಭ ಮಾಡಿದ್ದಾಳೆ. ಈ ವೇಳೆ, ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಮೆಟ್ರೋ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು, ಉಪ್ಪಾರಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ತನಿಖೆಯಿಂದ ಆರೋಪಿಯ ಇತಿಹಾಸ ಬಯಲು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆರೋಪಿ ಲೋಕೇಶ್‌ ಒಬ್ಬ ಕಳ್ಳ ಎಂಬುದು ತನಿಖೆಯಿಂದ ಬಯಲಾಗಿದೆ. ಈತ ಈ ಹಿಂದೆ ಬಿಎಂಟಿಸಿ ಬಸ್‌ನಲ್ಲಿ ಮೊಬೈಲ್ ಕಳ್ಳತನ ಮಾಡಲು ಹೋಗಿ ಸಿಕ್ಕಿಬಿದ್ದಿದ್ದನು. ಈತನ ಮೇಲೆ ಈ ಹಿಂದೆ ಕೆಲವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ತನಿಖೆ ವೇಳೆ ತಿಳಿದುಬಂದಿದೆ.

ಆರೋಪಿ ಬಳಿಯಿಂದ ಪೊಲೀಸರು 20 ಮೊಬೈಲ್, ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಮೇರಾ ನಾಮ್ ಜೋಕರ್’ ಖ್ಯಾತಿಯ ಬಾಲಿವುಡ್ ಹಿರಿಯ ನಟ ʻಜೂನಿಯರ್ ಮೆಹಮೂದ್ʼ ನಿಧನ

ನ.20ರಂದು ನಡೆದಿದ್ದ ಲೈಂಗಿಕ ಕಿರುಕುಳ

ನಿತ್ಯ 7 ಲಕ್ಷ ಜನ ಸಂಚರಿಸುವ ನಮ್ಮ ಮೆಟ್ರೋ, ಇತ್ತೀಚೆಗೆ ಕೆಲವು ವಿಷಯಗಳಿಂದ ಸುದ್ದಿಯಾಗುತ್ತಿದೆ. ಈ ಹಿಂದೆ ವಿದೇಶಿ ಯೂಟ್ಯೂಬರ್‌ ಒಬ್ಬರು ಟಿಕೆಟ್ ನೀಡದೆ ಮೆಟ್ರೋದಲ್ಲಿ ಪ್ರಯಾಣಿಸುವುದು ಹೇಗೆ ಎಂದು ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು. ಇದರ ಬೆನ್ನಲ್ಲೇ, ಕಿಡಿಗೇಡಿಯೊಬ್ಬ ಯುವತಿ ಜತೆಗೆ ಅಸಭ್ಯವಾಗಿ ನಡೆದುಕೊಂಡು ಸುದ್ದಿಯಾಗಿತ್ತು.

ನವೆಂಬರ್ 20ರ ಬೆಳಗ್ಗೆ ಸುಮಾರು 8.30ರ ವೇಳೆಗೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿತ್ತು. ಪ್ರಯಾಣ ಮಾಡುತ್ತಿದ್ದ ವೇಳೆ ಕಿಡಿಗೇಡಿಯೋರ್ವ ಹಿಂಬದಿಯಿಂದ ಯುವತಿಯೊಬ್ಬರನ್ನು ಸ್ಪರ್ಶಿಸಿದ್ದಾನೆ. ಈ ಘಟನೆಯನ್ನು ಯುವತಿ ತನ್ನ ಸ್ನೇಹಿತೆಯರ ಬಳಿ ಹೇಳಿಕೊಂಡಿದ್ದಾಳೆ. ಈ ವಿಚಾರವನ್ನು ತಿಳಿದ ಯುವತಿಯರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಕಿಡಿಗೇಡಿಯ ಬಂಧನಕ್ಕೆ ಆಗ್ರಹಿಸಿದ್ದರು.

ಕಿಡಿಗೇಡಿ ಯುವಕ ಕೆಂಪು ಶರ್ಟ್ ಧರಿಸಿದ್ದ ಎಂದು ಹೇಳಲಾಗುತ್ತಿತ್ತು. ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ರಾಜಕಾರಣಿಗಳ ಬಳಿ ಅಧಿಕಾರವಿದ್ದು, ಪರಿಹರಿಸಬಹುದಾದ ಸಮಸ್ಯೆಗಳು ಸಾಕಷ್ಟಿವೆ. ಆದರೂ,...

ನೇಹಾ ಕನ್ನಡ ನಾಡಿನ ಮಗಳು, ಸಾವಿನ ಮನೆಯಲ್ಲಿ ಬಿಜೆಪಿ ರಾಜಕಾರಣ ಬೇಡ: ಸುರ್ಜೇವಾಲ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ಅವರು ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು...