ಬೆಂಗಳೂರು | ಚುನಾವಣೆಗಾಗಿ 41 ಸಾವಿರ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

Date:

  • ಮೇ 10ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ
  • ಮತದಾರರಿಗೆ ಯಾವುದೇ ಸಮಸ್ಯೆ ಆಗದಿರಲು ಕನಿಷ್ಠ ಮೂಲಭೂತ ಸೌಕರ್ಯಗಳ ವ್ಯವಸ್ಥೆ

“ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟಾರೆ 8,802 ಮತಗಟ್ಟೆಗಳಿವೆ. ಈ ಪೈಕಿ ಸುಮಾರು 36,000 ಮತಗಟ್ಟೆ ಅಧಿಕಾರಿಗಳ ನಿಯೋಜನೆ ಮಾಡಿಕೊಂಡಿದ್ದು, ಹೆಚ್ಚುವರಿಯಾಗಿ ಶೇ. 20 ರಷ್ಟು ಅಧಿಕಾರಿಗಳು ಸೇರಿದಂತೆ ಸುಮಾರು 41 ಸಾವಿರ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ” ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಹೇಳಿದರು.

ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ರವರು ಮಂಗಳವಾರ ನಾನಾ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಗರದ 4 ಅಪರ ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯಲ್ಲಿರುವ ಮಸ್ಟರಿಂಗ್ ಕೇಂದ್ರಗಳಿಗೆ ಎಲ್ಲ ಮತಗಟ್ಟೆ ಅಧಿಕಾರಿಗಳು ಬಂದು ಮತಗಟ್ಟೆಗಳಿಗೆ ಅಗತ್ಯವಿರುವ ಇವಿಎಂ, ಕಂಟ್ರೋಲ್ ಯುನಿಟ್, ವಿವಿ ಪ್ಯಾಟ್, ಎಲ್ಲ ಸಾಮಗ್ರಿಗಳನ್ನು ತೆಗೆದುಕೊಂಡು ಬಿ.ಎಂ.ಟಿ.ಸಿ, ಕೆ.ಎಸ್‌.ಆರ್.ಟಿ.ಸಿ, ಇತರೆ ವಾಹನಗಳ ಮೂಲಕ ಮತಗಟ್ಟೆಗಳಿಗೆ ತೆರಳಲಿದ್ದಾರೆ. ಎಲ್ಲ ಮತಗಟ್ಟೆಗಳಲ್ಲೂ ವಸತಿ, ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ”‌‌ ಎಂದು ತಿಳಿಸಿದರು.

“ಮೇ 10ರಂದು ಬೆಳಗ್ಗೆ 7.00 ರಿಂದ ಸಂಜೆ 6.00 ಗಂಟೆಯವರೆಗೆ ಮತದಾನ ಪ್ರಾರಂಭವಾಗಲಿದ್ದು, ಅದಕ್ಕಿಂತ ಮುಂಚಿತವಾಗಿ 5.30ಕ್ಕೆ ಅಣುಕು ಮತದಾನ ಪ್ರಾರಂಭವಾಗಲಿದೆ. ಮತಗಟ್ಟೆಗಳ ಮತದಾರರಿಗೆ ಯಾವುದೇ ಸಮಸ್ಯೆ ಆಗದಂತೆ ಎಲ್ಲ ರೀತಿಯ ಕನಿಷ್ಠ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಎಲ್ಲ ಮಸ್ಟರಿಂಗ್ ಕೇಂದ್ರಗಳಿಂದ ಬ್ಯಾಲೆಟ್ ಯುನಿಟ್(ಇವಿಎಂ), ಕಂಟ್ರೋಲ್ ಯುನಿಟ್(ಸಿಯು), ವಿವಿ ಪ್ಯಾಟ್‌ಗಳನ್ನು ಮತಗಟ್ಟೆಗಳಿಗೆ ತಲುಪಿಸಲು ಈಗಾಗಲೇ ರೂಟ್ ಸಿದ್ದಪಡಿಸಿಕೊಳ್ಳಲಾಗಿದೆ. ಆ ಪ್ರಕಾರ ಒಂದು ಬಸ್‌ನಲ್ಲಿ 5 ರಿಂದ 6 ಮತಗಟ್ಟೆಗಳ ಅಧಿಕಾರಿಗಳು ತೆರಳಲಿದ್ದಾರೆ. ಮಂಗಳವಾರ ಮಧ್ಯಾಹ್ನ 3 ಗಂಟೆಯ ನಂತರ ಮತಗಟ್ಟೆಗಳಿಗೆ ತೆರಳಲಿದ್ದಾರೆ” ಎಂದು ಹೇಳಿದರು.

“ಅಣುಕು ಮತದಾನದ ವೇಳೆ ಇವಿಎಂನಲ್ಲಿ ಲೋಪದೋಷಗಳು ಕಂಡುಬಂದರೆ ಸೆಕ್ಟರ್ ಮೆಜಿಸ್ಟ್ರೇಟ್ ಮೂಲಕ 5/6 ಮತಗಟ್ಟೆಗಳಿಗೆ ನಿಯೋಜನೆ ಮಾಡಿರುವಂತಹ ಮಾರ್ಗ ಅಧಿಕಾರಿಯು ಪರ್ಯಾಯ ವ್ಯವಸ್ಥೆ ಮಾಡಲಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಫೋಟೋ ಆಲ್ಬಮ್‌ | ಮತದಾನಕ್ಕೆ ಸಿದ್ಧವಾದ ಮತಗಟ್ಟೆಗಳು

ಮತಗಟ್ಟೆ ಅಧಿಕಾರಿಗಳಿಗೆ ಕಿಟ್ ವಿತರಣೆ

“ನಗರದ 28 ವಿಧಾನಸಭಾ ಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಗಳಿಂದ ಮತಗಟ್ಟೆ ಅಧಿಕಾರಿಗಳು, ಇವಿಎಂ, ಸಿಯು, ವಿವಿ ಪ್ಯಾಟ್, ಮತದಾನದ ದಿನ ಅಗತ್ಯವಿರುವ ಎಲ್ಲ ರೀತಿಯ ಸಾಮಗ್ರಿಗಳು, ಮತಗಟ್ಟೆಗಳಲ್ಲಿ ರಾತ್ರಿ ಉಳಿಯಲು‌ ಮತಗಟ್ಟೆ ಅಧಿಕಾರಿಗಳಿಗೆ ಬೇಕಾದಂತಹ ವ್ಯವಸ್ಥೆ ಹಾಗೂ ಅವಶ್ಯಕ ಸಾಮಗ್ರಿಗಳ ಕಿಟ್‌ಗಳ ವಿತರಣೆ ಮಾಡಿ ಮಧ್ಯಾಹ್ನದ ನಂತರ ಬಿ.ಎಂ.ಟಿ.ಸಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್‌ಗಳ ಮೂಲಕ ಮತಗಟ್ಟೆಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧ್ಯಾಹ್ನ 1 ಗಂಟೆವರೆಗೂ ರಾಜ್ಯದಲ್ಲಿ ಶೇ.38.23ರಷ್ಟು ಮತದಾನ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ದೇಶದಲ್ಲಿ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ...

ಏ.29 ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ : ಹವಾಮಾನ ಇಲಾಖೆ

ಏಪ್ರಿಲ್ 29ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ...

ಲೋಕಸಭಾ ಚುನಾವಣೆ | ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಆರಂಭ: ಉತ್ಸಾಹದಿಂದ ಮತ ಚಲಾಯಿಸುತ್ತಿರುವ ಮತದಾರರು

ರಾಜ್ಯದ 14 ಕ್ಷೇತ್ರಗಳಲ್ಲಿ ಏ.26ರಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ....

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ...