ಬೆಂಗಳೂರು | ಕುಡಿದ ಮತ್ತಿನಲ್ಲಿ ಗೆಳೆಯರ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ

Date:

ಕುಡಿದ ಮತ್ತಿನಲ್ಲಿ ಗೆಳೆಯರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್‌ಕುಮಾರ್ ಕೊಲೆಯಾದ ದುರ್ದೈವಿ. ಮಾದೇಶ್ ಬಂಧಿತ ಆರೋಪಿ. ಇಬ್ಬರೂ ವೃತ್ತಿಯಲ್ಲಿ ಕ್ಯಾಬ್ ಚಾಲಕರಾಗಿದ್ದಾರೆ.

ರಾಜ್‌ಕುಮಾರ್ ಮತ್ತು ಮಾದೇಶ್ ಇಬ್ಬರೂ ಸ್ನೇಹಿತರು. ನ.5ರಂದು ಪಾರ್ಟಿ ಮಾಡಲು ಇಬ್ಬರು ಮದ್ಯದಂಗಡಿಗೆ ತೆರಳಿ ಮದ್ಯ ಖರೀದಿ ಮಾಡಿದ್ದಾರೆ. ಬಳಿಕ, ನಿರ್ಜನ ಪ್ರದೇಶಕ್ಕೆ ತೆರಳಿ ಮದ್ಯ ಸೇವನೆ ಮಾಡಿದ್ದಾರೆ. ಮದ್ಯ ಸೇವನೆ ಮಾಡಿದ ಮೇಲೆ ಇಬ್ಬರು ಮಾತಾಡಲು ಆರಂಭಿಸಿದ್ದಾರೆ. ಈ ವೇಳೆ, ಮಾದೇಶ್‌ನ ಕುಟುಂಬ ಮತ್ತು ಮಕ್ಕಳ ಬಗ್ಗೆ ರಾಜ್‌ಕುಮಾರ್ ನಿಂದಿಸಿದ್ದಾನೆ. ಈ ಸಮಯದಲ್ಲಿ ಮಾತಿಗೆ ಮಾತು ಬೆಳೆದು ಜಗಳವಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಜ್‌ಕುಮಾರ್‌ ಮೇಲೆ ಕೋಪಗೊಂಡ ಮಾದೇಶ್ ತನ್ನ ಕಾರಿನಲ್ಲಿದ್ದ ಚಾಕುವನ್ನು ತಂದು ರಾಜ್‌ಕುಮಾರ್‌ ಎದೆಯ ಭಾಗಕ್ಕೆ ಇರಿದಿದ್ದಾನೆ. ಇದರಿಂದ ರಕ್ತಸ್ರಾವವಾಗಿ ಒದ್ದಾಡುತ್ತಿದ್ದ ರಾಜ್‌ಕುಮಾರ್‌ನನ್ನು ಕಂಡು ಭಯಗೊಂಡು ತಾನೇ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾನೆ. ರಾಜ್‌ಕುಮಾರ್ ಸಂಬಂಧಿಕರಿಗೆ ಕರೆ ಮಾಡಿ ಅಪರಿಚಿತರು ಕೃತ್ಯ ಎಸಗಿದ್ದಾರೆ ಎಂದು ತಿಳಿಸಿದ್ದಾನೆ.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | ರಿಯಾಯಿತಿ ದರದಲ್ಲಿ ನ.16 ರಿಂದ ಮೊಬೈಲ್ ಕ್ಯೂಆರ್ ಗ್ರೂಪ್ ಟಿಕೆಟ್‌ ಪರಿಚಯ

ಚಿಕಿತ್ಸೆ ಫಲಿಸದೇ ರಾಜ್‌ಕುಮಾರ್ ಮೃತನಾದ ಬಳಿಕ ವಿಷಯ ತಿಳಿದ ಮಾದೇಶ್ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಅನುಮಾನಗೊಂಡ ಪೊಲೀಸರು ಮಾದೇಶ್‌ನನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

ಕೊಲೆ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಲು ತೂರಾಟ, ಗಲಾಟೆ ನಡುವೆ ಬಹುತೇಕ ಕಡೆ ರಾಜ್ಯದಲ್ಲಿ ಶಾಂತಿಯುತ ಮತದಾನ

ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ...

ದಕ್ಷಿಣ ಕನ್ನಡ | 100% ಮತದಾನ ದಾಖಲಿಸಿದ ಕುಗ್ರಾಮ

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆದಿದೆ. ದಕ್ಷಿಣ...

ಲೋಕಸಭೆ ಹಣಾಹಣಿ -2024 | 5 ಗಂಟೆ ವೇಳೆಗೆ ರಾಜ್ಯದಲ್ಲಿ ಶೇ.63.90 ಮತದಾನ

ಕರ್ನಾಟಕದಲ್ಲಿ 14 ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ...

ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ...