ಬೆಂಗಳೂರು | ಪ್ರೆಷರ್ ಕುಕ್ಕರ್‌ನಲ್ಲಿ ಡ್ರಗ್ಸ್‌ ತಯಾರು ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ

Date:

ವಿದೇಶಿ ಪ್ರಜೆಯೊಬ್ಬ ಮನೆಯಲ್ಲಿ ಅಡುಗೆ ಮಾಡುವ ಪ್ರೆಷರ್ ಕುಕ್ಕರ್ ಮೂಲಕ ಸಿಂಥೆಟಿಕ್ ಡ್ರಗ್ಸ್‌ ತಯಾರಿಸಿ ಮಾರಾಟ ಮಾಡುತ್ತಿದ್ದವನನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.

- Advertisement -

ಬೆಂಜಮಿನ್ ಬಂಧಿತ ಆರೋಪಿ. ಈತ ಮೂಲತಃ ನೈಜೀರಿಯಾದವನು. ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಈತನಿಂದ ಸದ್ಯ ₹10 ಕೋಟಿ ಮೌಲ್ಯದ 5 ಕೆಜಿ ಎಂಡಿಎಂಎ, ಡ್ರಗ್ಸ್​ ತಯಾರಿಸಲು ಬೇಕಾದ ಕಚ್ಚಾ ಪದಾರ್ಥಗಳು, 5 ಲೀಟರ್ ಪ್ರೆಷರ್ ಕುಕ್ಕರ್, ಸ್ಟೌವ್, ಗ್ಯಾಸ್ ಸಿಲಿಂಡರ್,‌ 1 ಮೊಬೈಲ್ ಫೋನ್, ದ್ವಿಚಕ್ರ ವಾಹನ ಎಂಡಿಎಂಎ ಮತ್ತು ಅದರ ತಯಾರಿಕೆಗೆ ಬಳಸುತ್ತಿದ್ದ ರಾಸಾಯನಿಕ ವಸ್ತುಗಳು ಹಾಗೂ ರಾಸಾನಿಕ ಆಮ್ಲ ಸೇರಿದಂತೆ ಇನ್ನಿತರ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಂಧಿತ ವಿದೇಶಿ ವ್ಯಕ್ತಿ ನಗರದ ಅವಲಹಳ್ಳಿಯಲ್ಲಿ ಬಟ್ಟೆ ವ್ಯಾಪಾರ ಮಾಡುವುದಾಗಿ 2021ರಲ್ಲಿ ಬಾಡಿಗೆ ಮನೆ ಪಡೆದಿದ್ದನು. ಆದರೆ, ಆತನ ಮನೆಯಲ್ಲಿ ಕಚ್ಚಾ ಪದಾರ್ಥಗಳನ್ನು ಬಳಕೆ ಮಾಡಿ ಪ್ರೆಷರ್ ಕುಕ್ಕರ್‌ನಲ್ಲಿ ಸಿಂಥೆಟಿಕ್ ಡ್ರಗ್‌ ತಯಾರು ಮಾಡುತ್ತಿದ್ದನು. ಹೀಗೇ ಮನೆಯಲ್ಲಿ ತಯಾರು ಮಾಡಿದ ಮಾದಕ ವಸ್ತುಗಳನ್ನು ರಾಜ್ಯ, ಅಂತಾರಾಜ್ಯ ಸೇರಿದಂತೆ ವಿದೇಶಗಳಿಗೆ ಮಾರಾಟ ಮಾಡುತ್ತಿದ್ದನು.

ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಈತನನ್ನು ಪೊಲೀಸರು ಬಂಧಿಸಿ 100 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು. ಈತನನ್ನು ಬಂಧಿಸಿದ ಬಳಿಕ ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಈತ ತಾನು ಮನೆಯಲ್ಲಿಯೇ ಡ್ರಗ್ ತಯಾರು ಮಾಡುತ್ತಿದ್ದ ಬಗ್ಗೆ ಬಾಯಿ ಬಿಟ್ಟಿದ್ದಾನೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ, “ಆರೋಪಿ ವ್ಯಾಪಾರಿ ವೀಸಾ ಮೂಲಕ ಭಾರತಕ್ಕೆ ಬಂದಿದ್ದಾನೆ. ವೀಸಾ ಅವಧಿಯೂ 2022ರಲ್ಲಿ ಅಂತ್ಯವಾಗಿದೆ. ಆರೋಪಿಯನ್ನು ನವೆಂಬರ್ 20ರವರೆಗೂ ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿ ಈ ಹಿಂದೆ ಹೈದರಾಬಾದ್​ನಲ್ಲಿ ಬಂಧನವಾಗಿದ್ದ ಎಂಬ ವಿಚಾರ ತನಿಖೆಯಿಂದ ಗೊತ್ತಾಗಿದೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜಿಮ್‌ ಸೆಂಟರ್‌ನಲ್ಲಿ ಯುವತಿಯ ಖಾಸಗಿ ವಿಡಿಯೋ ಚಿತ್ರೀಕರಣ; ಟ್ರೇನರ್ ಬಂಧನ

ಬಂಧಿತನ ವಿರುದ್ಧ ರಾಮಮೂರ್ತಿ ನಗರ ಠಾಣೆಯಲ್ಲಿ ಎನ್​ಡಿಪಿಎಸ್ ಕಾಯ್ದೆ ಮತ್ತು ವಿದೇಶಿಗರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...