ಬೆಂಗಳೂರು | ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆಯಲು ಸಹಕರಿಸಿದ ನಾಲ್ವರು ಬ್ಯಾಂಕ್‌ ಅಧಿಕಾರಿಗಳ ಬಂಧನ

Date:

ಮನೆ ಮಾಲೀಕರ ಮನವೊಲಿಸಿ ಅವರಿಂದ ಆಸ್ತಿ ದಾಖಲೆಗಳನ್ನು ಪಡೆದು ನಕಲಿ ದಾಖಲೆಗಳನ್ನು ಸೃಷ್ಠಿಸಿ ವಂಚನೆ ಮಾಡುತ್ತಿದ್ದ ಮಧ್ಯವರ್ತಿಗಳಿಗೆ ಸಹಕಾರ ಹಾಗೂ ಸರಿಯಾಗಿ ದಾಖಲೆಗಳನ್ನು ಪರಿಶೀಲಿಸದೆ, ನಕಲಿ ಭೂ ದಾಖಲೆಗಳನ್ನು ಹೊಂದಿದ್ದವರಿಗೆ ಸಾಲ ನೀಡಿದ್ದ ನಾಲ್ವರು ಬ್ಯಾಂಕ್ ಅಧಿಕಾರಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸೇಂಟ್‌ ಮಾರ್ಕ್ಸ್‌ ರಸ್ತೆಯ ಬ್ಯಾಂಕ್‌ವೊಂದರ ಎಜಿಎಂ ಮುರಳೀ ಧರ್‌, ಮಹಾಲಕ್ಷ್ಮಿ ಲೇಔಟ್‌ನ ಬ್ಯಾಂಕ್‌ವೊಂದರ ವ್ಯವಸ್ಥಾಪಕ ರಾಕೇಶ್‌, ಹೊಸಕೋಟೆಯಲ್ಲಿರುವ ಬ್ಯಾಂಕ್‌ನ ಮಲ್ಲಿಕಾರ್ಜುನ್‌, ಜಯನಗರ ಬ್ಯಾಂಕ್‌ವೊಂದರ ಶಶಿಕಾಂತ್‌ ಬಂಧಿತರು.

ಇದೀಗ, ಮನೆ ಮಾರಾಟ ಮಾಡಲು ಮನೆಯ ಮಾಲೀಕರು ಬ್ರೋಕರ್‌ಗಳಿಗೆ ಜಮೀನಿನ ದಾಖಲೆಗಳನ್ನು ನೀಡುತ್ತಾರೆ. ಆ ದಾಖಲೆಗಳನ್ನು ಪಡೆದ ಮಧ್ಯವರ್ತಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾಲ ಪಡೆದುಕೊಳ್ಳುತ್ತಾರೆ. ಸಾಲ ನೀಡಬೇಕಾದಾಗ ಸಾಲ ಪಡೆದುಕೊಳ್ಳಲು ನೀಡಿರುವ ದಾಖಲೆಗಳನ್ನು ಸರಿಯಾಗಿ ಪರಿಶೀಲನೆ ಮಾಡಬೇಕು. ಆದರೆ, ಇಲ್ಲಿ ದಾಖಲೆಗಳ ಪರಿಶೀಲನೆ ಮಾಡಿಲ್ಲ. ಜತೆಗೆ, ಲೋನ್ ಅಪ್ರೋವ್ ಆಗಿರುವ ಸ್ವತ್ತಿನಲ್ಲಿ ಇಸಿ ಪಡೆದುಕೊಂಡಿಲ್ಲ. ಹೀಗೆ, ನಕಲಿ ದಾಖಲೆ ಸೃಷ್ಟಿ ಮಾಡಿದವರಿಗೆ ಸುಮಾರು ನಾಲ್ಕೂವರೆ ಕೋಟಿ‌ ಸಾಲ ಇದೇ ರೀತಿಯಾಗಿ ಅಪ್ರೂವ್ ಮಾಡಿದ್ದರು ಎಂಬ ಆರೋಪದ ಮೇಲೆ ಬ್ಯಾಂಕ್ ಅಧಿಕಾರಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಂಧಿತರ ಪೈಕಿ ಮರುಳೀಧರ್‌, ರಾಕೇಶ್‌ ದಾಖಲೆ ಪರಿಶೀಲನೆ ನಡೆಸದೇ ಸಾಲ ಮಂಜೂರು ಮಾಡುತ್ತಿದ್ದರು. ಮಲ್ಲಿಕಾರ್ಜುನ್‌, ಶಶಿಕಾಂತ್‌ ಅವರು ಮಧ್ಯವರ್ತಿಗಳಿಗೆ ನಕಲಿ ಖಾತೆಗಳನ್ನು ಮಾಡಿಕೊಡುತ್ತಿದ್ದರು. ಇವರು ನಾನಾ ಬ್ಯಾಂಕ್‌ಗಳಲ್ಲಿ ವ್ಯವಸ್ಥಾಪಕರಾಗಿ, ಸಹಾಯಕ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದೆಹಲಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ₹26 ಕೋಟಿ ಮೌಲ್ಯದ ಕೊಕೇನ್ ವಶ

ಈ ಹಿಂದೆ ಪುಟ್ಟೇನಹಳ್ಳಿ ಮತ್ತು ಹುಳಿಮಾವು ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ಈ ಪ್ರಕರಣದ ತನಿಖೆ ಆರಂಭಿಸಿದ ಸಿಸಿಬಿ ಪೊಲೀಸರು ಐದು ಏಜೆಂಟ್‌ಗಳನ್ನು ಬಂಧಿಸಿದ್ದರು. ಅವರ ವಿಚಾರಣೆ ವೇಳೆ ನೀಡಿದ ಮಾಹಿತಿ ಆಧರಿಸಿ ತನಿಖೆ ಮುಂದುವರೆಸಿದ ಪೊಲೀಸರು ಈ ಪ್ರಕರಣದಲ್ಲಿ ಮತ್ತೆ ನಾಲ್ಕು ಬ್ಯಾಂಕ್ ಅಧಿಕಾರಗಳನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಮೇಶ್ವರ ಕೆಫೆ ಬಾಂಬ್ ಪ್ರಕರಣ | ಅಗತ್ಯ ಬಿದ್ದರೆ ತನಿಖೆ ಎನ್‌ಐಎಗೆ ವಹಿಸುತ್ತೇವೆ: ಸಿಎಂ ಸಿದ್ದರಾಮಯ್ಯ

"ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್‌ಐಎಗೆ ವಹಿಸುವ ಬಗ್ಗೆ ಅಗತ್ಯ...

ಮೈಸೂರು | ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ

ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಹಲವಾರು ಸೇವೆಗಳನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು...

ಪೋಲಿಯೊ ನಿರ್ಮೂಲನೆ ಸ್ಥಿತಿಯನ್ನು ಕಾಯ್ದುಕೊಳ್ಳುವುದು ಮುಖ್ಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಭಾರತ ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದನ್ನ ನಾವು ಮುಂದಿನ ದಿನಗಳಲ್ಲೂ ಕಾಯ್ದುಕೊಳ್ಳುವುದು ಮುಖ್ಯವಾಗಿದೆ....

ಚಿಕ್ಕಬಳ್ಳಾಪುರ | ಶಾಲೆಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚನೆ ಕಡ್ಡಾಯ: ನ್ಯಾ. ನೇರಳೆ ವೀರಭದ್ರಯ್ಯ ಭವಾನಿ

ಮಕ್ಕಳ ಸುರಕ್ಷತೆ ಹಾಗೂ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಆದೇಶದಂತೆ ಪ್ರತಿ ಶಾಲೆಯಲ್ಲಿಯೂ...